AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡು ಪ್ರವಾಹ; ಬೇರೆಯವರ ಮಗುವನ್ನು ಉಳಿಸಲು ಹೋಗಿ ತನ್ನ ಮಗಳನ್ನೇ ಕಳೆದುಕೊಂಡ ತಾಯಿ

ಕೇರಳದ ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಭೂಕುಸಿತ ಸಂಭವಿಸಿ ಈಗಾಗಲೇ 120ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ. ಈ ನಡುವೆ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡವರ ಗೋಳು ಮುಗಿಲುಮುಟ್ಟುವಂತಿದೆ. ಮೆಪ್ಪಾಡಿಯ ಚೂರಲ್ಮಲಾದಲ್ಲಿ ಬೇರೆ ಮಗುವಿನ ಜೀವ ಉಳಿಸಿದ ತಾಯಿ ತನ್ನ ಮಗಳ ಪ್ರಾಣ ಕಾಪಾಡಲು ಸಾಧ್ಯವಾಗದೆ ಕಣ್ಣೀರು ಹಾಕುತ್ತಿದ್ದಾರೆ.

ವಯನಾಡು ಪ್ರವಾಹ; ಬೇರೆಯವರ ಮಗುವನ್ನು ಉಳಿಸಲು ಹೋಗಿ ತನ್ನ ಮಗಳನ್ನೇ ಕಳೆದುಕೊಂಡ ತಾಯಿ
ಚೂರಲ್ಮಲಾ ಭೂಕುಸಿತ
ಸುಷ್ಮಾ ಚಕ್ರೆ
|

Updated on: Jul 31, 2024 | 3:48 PM

Share

ಮೆಪ್ಪಾಡಿ: ಕೇರಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಧಾರಾಕಾರ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯಾರದ್ದೋ ಮಗುವನ್ನು ರಕ್ಷಿಸುವ ಪ್ರಯತ್ನದಲ್ಲಿ ಪ್ರಜಿತಾ ಎಂಬ ಮಹಿಳೆ ತನ್ನ ಸ್ವಂತ ಮಗಳನ್ನು ಕಳೆದುಕೊಂಡಿದ್ದಾರೆ. ಪ್ರವಾಹದ ನೀರಿನಲ್ಲಿ ಸಿಲುಕಿದ ಮಗುವನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಪ್ರಜಿತಾ ಅವರ 10 ವರ್ಷದ ಮಗಳು ಅಹನ್ಯಾಗೆ ಕರೆಂಟ್ ಹೊಡೆದು ಸಾವನ್ನಪ್ಪಿದ್ದಾಳೆ. ಅಹನ್ಯಾಳನ್ನು ಎಳೆಯಲು ಹೋದ ಪ್ರಜಿತಾ ಕುಟುಂಬಸ್ಥರಿಗೂ ಗಾಯಗಳಾಗಿವೆ.

ಪ್ರಜಿತಾ, ಆಕೆಯ ತಾಯಿ ಶೋಭಾ ಹಾಗೂ ಆಕೆಯ ಮಾವ ಗಂಭೀರವಾಗಿ ಗಾಯಗೊಂಡು ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಜಿತಾ ಅವರ ಮುಖ ಮತ್ತು ತೊಡೆಯ ಮೂಳೆಗೆ ತೀವ್ರ ಗಾಯಗಳಾಗಿವೆ. ಶೋಭಾ ಅವರ ಪಕ್ಕೆಲುಬಿಗೆ ಕೂಡ ಗಾಯವಾಗಿದೆ.

ಪ್ರಜಿತಾ ಅವರ ಮನೆ ಮತ್ತು ಪಕ್ಕದ ಹೋಂಸ್ಟೇ ಚೂರಲ್ಮಲಾ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಹಿಂದೆ ಇತ್ತು. ಸುರಕ್ಷಿತ ವಲಯ ಎಂದು ಪರಿಗಣಿಸಲ್ಪಟ್ಟಿದ್ದ ಚೂರಲ್ಮಲಾದ ಸ್ಥಳದಲ್ಲಿಯೇ ಈ ದುರಂತ ಸಂಭವಿಸಿದೆ. ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದಾಗಿ ಚೂರಲ್ಮಲಾ ಮತ್ತು ಮುಂಡಕಾಯಮ್‌ನ ಎತ್ತರದ ಪ್ರದೇಶದ ಎಲ್ಲ ಜನರು ಈ ಶಾಲೆಯಲ್ಲಿ ವಾಸವಾಗಿದ್ದರು. ಇದು ಈ ಪ್ರದೇಶದ ಅತ್ಯಂತ ಸುರಕ್ಷಿತ ಸ್ಥಳವೂ ಆಗಿತ್ತು. ಇಲ್ಲಿ ಇಂತಹ ಅನಾಹುತ ಸಂಭವಿಸುತ್ತದೆ ಎಂದು ಯಾರೂ ಭಾವಿಸಿರಲಿಲ್ಲ.

ಇದನ್ನೂ ಓದಿ: ಕರ್ನಾಟಕದಲ್ಲೂ ಪ್ರವಾಹ, ಭೂಕುಸಿತ: ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಪ್ರಜಿತಾ ಮನೆಯಲ್ಲಿ ಮಲಗಿದ್ದಾಗ ದೊಡ್ಡ ಶಬ್ದ ಕೇಳಿದೆ. ಇದ್ದಕ್ಕಿದ್ದಂತೆ, ಬಾಗಿಲು ಮತ್ತು ಕಿಟಕಿಯಿಂದ ನೀರು ಒಳನುಗ್ಗಿತು. ಬಾಗಿಲು ತೆರೆದು ತಪ್ಪಿಸಿಕೊಳ್ಳಲು ಯತ್ನಿಸುವಷ್ಟರಲ್ಲಿ ಪ್ರವಾಹದ ನೀರು ಆಕೆಯನ್ನು ತಲುಪಿತ್ತು. ಆಗ ಆಕೆ ಮುರಿದ ಮರದ ಬಾಗಿಲನ್ನು ಹಿಡಿದುಕೊಂಡಿದ್ದಳು. ನೀರಿನಲ್ಲಿ ತೇಲುತ್ತಿದ್ದ ಮತ್ತೊಂದು ಮಗುವನ್ನು ರಕ್ಷಿಸುವ ವೇಳೆ ಪ್ರಜಿತಾ ಜೊತೆಗಿದ್ದ ಅವರ ಪುತ್ರಿ ಅಹನ್ಯಾ ಕಾಲು ಜಾರಿ ಬಿದ್ದಿದ್ದಾರೆ. ಆಗ ಆಕೆಗೆ ಕರೆಂಟ್ ಹೊಡೆದಿದೆ. ಪ್ರಜಿತಾ ಅವರ ಪತಿ ಮಧ್ಯಪ್ರಾಚ್ಯದಲ್ಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್