Wayanad landslide: ವಯನಾಡಿನಲ್ಲಿ ಪ್ರಕೃತಿ ತನ್ನ ಉಗ್ರ ಸ್ವರೂಪವನ್ನು ತೋರಿಸಿದೆ, ಇಡೀ ದೇಶವು ಸಂತ್ರಸ್ತರೊಂದಿಗಿದೆ: ಮೋದಿ

ಸಂತ್ರಸ್ತರಿಗೆ ಸಂಪೂರ್ಣ ಬೆಂಬಲವನ್ನು ಭರವಸೆ ನೀಡಿದ ಪ್ರಧಾನಿ ಮೋದಿ, “ಈ ಬಿಕ್ಕಟ್ಟಿನಲ್ಲಿ ನಾವು ಅವರೊಂದಿಗಿದ್ದೇವೆ ಎಂದು ನಾನು ಎಲ್ಲಾ ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಭರವಸೆ ನೀಡುತ್ತೇನೆ. ಸರಕಾರ ನಿಯಮಾವಳಿ ಪ್ರಕಾರ ಆರ್ಥಿಕ ನೆರವು ನೀಡಿದ್ದು, ಹೆಚ್ಚಿನ ಹಣ ನೀಡಲು ಪ್ರಯತ್ನಿಸುತ್ತೇವೆ. ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಭಾರತ ಸರ್ಕಾರವು ಅತ್ಯಂತ ಉದಾರವಾದ ರೀತಿಯಲ್ಲಿ ಕೇರಳ ಸರ್ಕಾರದ ಜೊತೆ ನಿಲ್ಲುತ್ತದೆ ಎಂದಿದ್ದಾರೆ.

Wayanad landslide: ವಯನಾಡಿನಲ್ಲಿ ಪ್ರಕೃತಿ ತನ್ನ ಉಗ್ರ ಸ್ವರೂಪವನ್ನು ತೋರಿಸಿದೆ, ಇಡೀ ದೇಶವು ಸಂತ್ರಸ್ತರೊಂದಿಗಿದೆ: ಮೋದಿ
ವಯನಾಡಿನಲ್ಲಿ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Aug 10, 2024 | 7:28 PM

ವಯನಾಡ್ ಆಗಸ್ಟ್ 10: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ವಯನಾಡ್​​ಗೆ (Wayanad) ಭೇಟಿ ನೀಡಿದ್ದು ಮತ್ತು ನಡೆಯುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿದರು. ಕೇರಳದ ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಪ್ರಧಾನಿ ಹೇಳಿದ್ದಾರೆ. ಸಭೆಯಲ್ಲಿ ಪ್ರಧಾನಿ ಮೋದಿ ಅವರು ಸಂತಾಪ ವ್ಯಕ್ತಪಡಿಸಿ, “ನಾವೆಲ್ಲರೂ ಒಗ್ಗೂಡಿ ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಹಾಯ ಮಾಡಬೇಕು. ದುರಂತದಲ್ಲಿ ನೂರಾರು ಕುಟುಂಬಗಳ ಕನಸುಗಳು ನಲುಗಿವೆ. ಪ್ರಕೃತಿ ತನ್ನ ಉಗ್ರ ರೂಪವನ್ನು ತೋರಿಸಿದೆ, ನಾನು ಅಲ್ಲಿಗೆ ಹೋಗಿ ನೋಡಿದೆ ಎಂದು ಹೇಳಿದ್ದಾರೆ.

ನಾನು ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ್ದೇನೆ, ಅವರ ನೋವನ್ನು ಆಲಿಸಿದ್ದೇನೆ: ಪ್ರಧಾನಿ ಮೋದಿ

ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿದ ಅನುಭವವನ್ನೂ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ. ನಾನು ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಅವರ ನೋವನ್ನು ಆಲಿಸಿದ್ದೇನೆ. ನಾನು ಆಸ್ಪತ್ರೆಗೆ ಹೋಗಿ ಅಲ್ಲಿ ಗಾಯಾಳುಗಳನ್ನು ಭೇಟಿಯಾದೆ. ವಯನಾಡಿನಲ್ಲಿ ಭೂಕುಸಿತದ ಘಟನೆಯ ನಂತರ ನಾನು ತಕ್ಷಣವೇ ಮುಖ್ಯಮಂತ್ರಿಯೊಂದಿಗೆ ಮಾತನಾಡಿ ಸಹಾಯವನ್ನು ಕಳುಹಿಸಿದೆ. ಎಲ್ಲರೂ ಆಪತ್ತಿನಲ್ಲಿ ಸಹಾಯ ಮಾಡಲು ಮುಂದೆ ಬಂದರು. ಭಾರತ ಸರ್ಕಾರ ಮತ್ತು ಇಡೀ ದೇಶವು ಸಂತ್ರಸ್ತರೊಂದಿಗಿದೆ ಎಂದು ಅವರು ಹೇಳಿದ್ದಾರೆ.

“ನಾನು ರಾಜ್ಯದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಘಟನೆಯ ನಂತರ ಪ್ರತಿ ಕ್ಷಣವೂ ಮಾಹಿತಿ ತೆಗೆದುಕೊಳ್ಳುತ್ತಿದ್ದೇನೆ. ಘಟನೆಯಲ್ಲಿ ನೂರಾರು ಕುಟುಂಬಗಳ ಕನಸುಗಳು ಭಗ್ನವಾಗಿವೆ. ಈ ರೀತಿಯ ಬಿಕ್ಕಟ್ಟಿನ ಸಮಯದಲ್ಲಿ, ನಾವು ಒಟ್ಟಾಗಿ ಕೆಲಸ ಮಾಡಿದಾಗ, ನಾವು ಉತ್ತಮ ಫಲಿತಾಂಶವನ್ನು ಪಡೆಯುತ್ತೇವೆ. ಘಟನೆಯ ನಂತರ, ಎಲ್ಲರೂ ವಿಪತ್ತು ಪೀಡಿತ ಜನರನ್ನು ತಲುಪಲು ಪ್ರಯತ್ನಿಸಿದರು, ”ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಎಲ್ಲ ಬೆಂಬಲ ನೀಡುವುದಾಗಿ ಕೇಂದ್ರ ಭರವಸೆ: ಪ್ರಧಾನಿ ಮೋದಿ

ಸಂತ್ರಸ್ತರಿಗೆ ಸಂಪೂರ್ಣ ಬೆಂಬಲವನ್ನು ಭರವಸೆ ನೀಡಿದ ಪ್ರಧಾನಿ ಮೋದಿ, “ಈ ಬಿಕ್ಕಟ್ಟಿನಲ್ಲಿ ನಾವು ಅವರೊಂದಿಗಿದ್ದೇವೆ ಎಂದು ನಾನು ಎಲ್ಲಾ ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಭರವಸೆ ನೀಡುತ್ತೇನೆ. ಸರಕಾರ ನಿಯಮಾವಳಿ ಪ್ರಕಾರ ಆರ್ಥಿಕ ನೆರವು ನೀಡಿದ್ದು, ಹೆಚ್ಚಿನ ಹಣ ನೀಡಲು ಪ್ರಯತ್ನಿಸುತ್ತೇವೆ. ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಭಾರತ ಸರ್ಕಾರವು ಅತ್ಯಂತ ಉದಾರವಾದ ರೀತಿಯಲ್ಲಿ ಕೇರಳ ಸರ್ಕಾರದ ಜೊತೆ ನಿಲ್ಲುತ್ತದೆ ಎಂದಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು. ಇದರೊಂದಿಗೆ ಅವರು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆಯೂ ಪರಿಶೀಲನೆ ನಡೆಸಿದರು. ಪ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ಜುಲೈ 30 ರಂದು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಲ್ಲಿಯವರೆಗೆ 200ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ವಯನಾಡು ಭೂಕುಸಿತ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಮೋದಿ

ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ವಯನಾಡ್‌ಗೆ ಭೇಟಿ ನೀಡುವ ನಿರ್ಧಾರಕ್ಕೆ ವಿಪಕ್ಷ ನಾಯಕ ಹಾಗೂ ವಯನಾಡ್ ಮಾಜಿ ಸಂಸದ ರಾಹುಲ್ ಗಾಂಧಿ ಧನ್ಯವಾದ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, “ಭೀಕರ ದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡ್‌ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು ಮೋದಿ ಜೀ. ಇದೊಂದು ಒಳ್ಳೆಯ ನಿರ್ಧಾರ. ಪ್ರಧಾನಿಯವರು ಒಮ್ಮೆ ವಿನಾಶದ ಪ್ರಮಾಣವನ್ನು ನೇರವಾಗಿ ನೋಡಿದ ನಂತರ ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Sat, 10 August 24

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ