ರಾಯ್​ಬರೇಲಿ ಅಥವಾ ವಯನಾಡು; ರಾಹುಲ್ ಗಾಂಧಿ ಆಯ್ಕೆಯ ಕುತೂಹಲಕ್ಕೆ ಇಂದು ತೆರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್​ಬರೇಲಿ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ವಯನಾಡು ಈ ಹಿಂದೆ ರಾಹುಲ್ ಗಾಂಧಿ ಚುನಾವಣೆಯಲ್ಲಿ ಗೆದ್ದ ಕ್ಷೇತ್ರವಾಗಿತ್ತು. ರಾಯ್​ಬರೇಲಿ ಗಾಂಧಿ ಕುಟುಂಬದ ಭದ್ರಕೋಟೆಯಾಗಿದೆ. ಈ ಎರಡೂ ಚುನಾವಣೆಗಳಲ್ಲಿ ರಾಹುಲ್ ಗಾಂಧಿ ಗೆದ್ದಿದ್ದರು. ಹೀಗಾಗಿ, ಎರಡರಲ್ಲಿ ರಾಹುಲ್ ಗಾಂಧಿಯ ಆಯ್ಕೆ ಯಾವುದು ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ರಾಯ್​ಬರೇಲಿ ಅಥವಾ ವಯನಾಡು; ರಾಹುಲ್ ಗಾಂಧಿ ಆಯ್ಕೆಯ ಕುತೂಹಲಕ್ಕೆ ಇಂದು ತೆರೆ
ರಾಹುಲ್ ಗಾಂಧಿ
Follow us
ಸುಷ್ಮಾ ಚಕ್ರೆ
|

Updated on: Jun 17, 2024 | 6:33 PM

ನವದೆಹಲಿ: ವಯನಾಡು (Wayanad) ಮತ್ತು ರಾಯ್​ಬರೇಲಿ (Rae bareli) ಎರಡೂ ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಗೆದ್ದಿರುವ ರಾಹುಲ್ ಗಾಂಧಿ (Rahul Gandhi) ಯಾವುದಾದರೂ ಒಂದು ಕ್ಷೇತ್ರವನ್ನು ಬಿಟ್ಟುಕೊಡಬೇಕಾಗಿದೆ. ಕೆಲವು ದಿನಗಳಿಂದ ಊಹಾಪೋಹಗಳಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುಟುಂಬದ ಭದ್ರಕೋಟೆಯಾದ ರಾಯ್​ಬರೇಲಿಯ ಪರವಾಗಿ ವಯನಾಡ್ ಲೋಕಸಭಾ ಕ್ಷೇತ್ರವನ್ನು ಇಂದು ಬಿಟ್ಟುಕೊಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕೇರಳದ ವಯನಾಡು ಕ್ಷೇತ್ರದಿಂದ ಕಣಕ್ಕಿಳಿಸಲಿದ್ದಾರೆ ಎಂಬ ವದಂತಿಗಳು ಕೂಡ ಹಬ್ಬಿವೆ. ಕಾಂಗ್ರೆಸ್ ಮೂಲಗಳು ಬಹಿರಂಗಪಡಿಸಿದ ಮತ್ತೊಂದು ಪ್ರಮುಖ ಮಾಹಿತಿಯೆಂದರೆ, ಕಾಂಗ್ರೆಸ್ ನಾಯಕರ ಗದ್ದಲದ ಹೊರತಾಗಿಯೂ, ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಪಾತ್ರವನ್ನು ವಹಿಸುವ ಸಾಧ್ಯತೆಯಿಲ್ಲ. ಈ ಮೂಲಕ ಅವರು ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವನ್ನು ಪಡೆಯಲು, ಇಂಡಿಯಾ ಬಣದಲ್ಲಿನ ಮಿತ್ರಪಕ್ಷಗಳೊಂದಿಗೆ ಉತ್ತಮವಾಗಿ ಸಂಘಟಿತರಾಗಲು ಸಹಾಯ ಮಾಡುತ್ತದೆ.

ಕಾಂಗ್ರೆಸ್ ಉನ್ನತ ಮಟ್ಟದ ಸಭೆಯನ್ನು ನಡೆಸುತ್ತಿದ್ದು, ವಯನಾಡು ಕ್ಷೇತ್ರದ ಕುರಿತು ಲೋಕಸಭೆಯ ಕಾರ್ಯದರ್ಶಿಗೆ ತಿಳಿಸಲು ಇಂದು ಕೊನೆಯ ದಿನವಾದ ಕಾರಣ ಅಲ್ಲಿಯೇ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಕರೆ ನೀಡಬಹುದು. ರಾಹುಲ್ ಗಾಂಧಿ ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡರೆ ವಯನಾಡು ಕ್ಷೇತ್ರದಿಂದ ಸ್ಪರ್ಧಿಸುವ ಅಭ್ಯರ್ಥಿಯ ಹೆಸರನ್ನು ಕೂಡ ಇದೇ ವೇಳೆ ಘೋಷಿಸಬಹುದು. ಏಕೆಂದರೆ ರಾಹುಲ್ ಗಾಂಧಿ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟ 6 ತಿಂಗಳೊಳಗೆ ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಮೋದಿ-ಪೋಪ್ ಭೇಟಿಯನ್ನು ಅಪಹಾಸ್ಯ ಮಾಡುವ ಪೋಸ್ಟ್ ಡಿಲೀಟ್ ಮಾಡಿ, ಕ್ರಿಶ್ಚಿಯನ್ನರ ಕ್ಷಮೆ ಕೋರಿದ ಕಾಂಗ್ರೆಸ್

ಈಗಷ್ಟೇ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ ನಾಯಕ ವಯನಾಡ್ ಲೋಕಸಭಾ ಕ್ಷೇತ್ರವನ್ನು ಗೆದ್ದರು. ವಯನಾಡಿನಲ್ಲಿ ರಾಹುಲ್ ಗಾಂಧಿ 2019ರಲ್ಲಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ಕೈಯಲ್ಲಿ ಅಮೇಥಿಯಲ್ಲಿ ಆಘಾತಕಾರಿ ಸೋಲಿನ ಹೊರತಾಗಿಯೂ 3.64 ಲಕ್ಷ ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದರು. ಈ ಬಾರಿ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದಿದ್ದರು.

ವಯನಾಡಿನಲ್ಲಿ ರಾಹುಲ್ ತಮ್ಮ ಸಿಪಿಐ ನಾಯಕಿ ಅನ್ನಿ ರಾಜಾ ಅವರನ್ನು 3.6 ಲಕ್ಷ ಮತಗಳಿಂದ ಸೋಲಿಸಿದ್ದಾರೆ. ರಾಯ್ ಬರೇಲಿಯಲ್ಲಿ ಅವರು ಬಿಜೆಪಿ ನಾಯಕ ದಿನೇಶ್ ಪ್ರತಾಪ್ ಸಿಂಗ್ ಅವರನ್ನು 3.9 ಲಕ್ಷ ಮತಗಳ ಅಂತರದಿಂದ ಸೋಲಿಸಿದರು.

2004ರಿಂದ ಸೋನಿಯಾ ಗಾಂಧಿ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಗೆ ತೆರಳುವವರೆಗೂ ರಾಯ್ಬರೇಲಿ ಕ್ಷೇತ್ರದ ಸ್ಥಾನವನ್ನು ಹೊಂದಿದ್ದರು. ರಾಹುಲ್ ಗಾಂಧಿಯವರ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಅವರ ಪತಿ ಫಿರೋಜ್ ಗಾಂಧಿಯವರು ಸಹ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಈ ಹಿನ್ನೆಲೆಯಲ್ಲಿ ರಾಯ್​ಬರೇಲಿ ಗಾಂಧಿ ಕುಟುಂಬದ ಭದ್ರಕೋಟೆಯಾಗಿದೆ.

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರ ತೊರೆಯಲಿದ್ದಾರೆ; ಸುಳಿವು ನೀಡಿದ ಸುಧಾಕರನ್

ಒಂದು ವೇಳೆ ರಾಹುಲ್ ಗಾಂಧಿ ಬಿಟ್ಟುಕೊಟ್ಟ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅವರು ವಯನಾಡ್‌ನಿಂದ ರಾಜಕೀಯಕ್ಕೆ ಧುಮುಕಲು ನಿರ್ಧರಿಸಿದರೆ ಇದು ಅವರ ರಾಜಕೀಯ ಜೀವನದ ಚೊಚ್ಚಲ ಹೆಜ್ಜೆಯಾಗಲಿದೆ. ವಾರಾಣಸಿಯಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಅಭ್ಯರ್ಥಿಯಾಗುತ್ತಾರೆ ಎಂಬ ವದಂತಿ ಹಬ್ಬಿತ್ತು. 2024ರ ಚುನಾವಣೆಗೆ ಮುಂಚಿತವಾಗಿ ಅವರು ರಾಯ್ಬರೇಲಿಯಿಂದ ಸ್ಪರ್ಧಿಸುತ್ತಾರೆ ಮತ್ತು ರಾಹುಲ್ ಗಾಂಧಿ ಅಮೇಥಿಯಲ್ಲಿ ಸ್ಪರ್ಧಿಸುತ್ತಾರೆ ಎಂದು ಊಹಿಸಲಾಗಿತ್ತು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹೊರತಾಗಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದಲೂ ಪ್ರಿಯಾಂಕಾ ಗಾಂಧಿಯ ಸ್ಪರ್ಧೆಗೆ ಒತ್ತಡ ಬಂದಿತ್ತು. ಆದರೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸದಿರಲು ನಿರ್ಧರಿಸಿದ್ದರು. ಜೂನ್ 4ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಜೂನ್ 18ರೊಳಗೆ ವಯನಾಡು ಅಥವಾ ರಾಯ್​ಬರೇಲಿಯೊಳಗೆ ತಮ್ಮ ಆಯ್ಕೆ ಯಾವುದೆಂದು ರಾಹುಲ್ ಗಾಂಧಿ ನಿರ್ಧಾರ ತೆಗೆದುಕೊಳ್ಳಬೇಕು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ