ನಿಮಗಿನ್ನು ಇಬ್ಬರು ಸಂಸದರು; ವಯನಾಡಿನ ಜನತೆಗೆ ರಾಹುಲ್ ಗಾಂಧಿ ಸಂದೇಶ

ರಾಹುಲ್ ಗಾಂಧಿ ಅವರು ಈ ತಿಂಗಳ ಆರಂಭದಲ್ಲಿ 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದ ವಯನಾಡು ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ ಎಂದು ಕಾಂಗ್ರೆಸ್ ಇಂದು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಭಾವುಕರಾಗಿ ವಯನಾಡಿನ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ.

ನಿಮಗಿನ್ನು ಇಬ್ಬರು ಸಂಸದರು; ವಯನಾಡಿನ ಜನತೆಗೆ ರಾಹುಲ್ ಗಾಂಧಿ ಸಂದೇಶ
ರಾಹುಲ್ ಗಾಂಧಿ - ಪ್ರಿಯಾಂಕಾ ಗಾಂಧಿ
Follow us
|

Updated on: Jun 17, 2024 | 10:06 PM

ನವದೆಹಲಿ: ಕೇರಳದ ವಯನಾಡಿನ ಬದಲು ಉತ್ತರ ಪ್ರದೇಶದಲ್ಲಿ ತಮ್ಮ ಕುಟುಂಬದ ಭದ್ರಕೋಟೆಯಾಗಿರುವ ರಾಯ್ ಬರೇಲಿ (Raebareli) ಕ್ಷೇತ್ರವನ್ನು ರಾಹುಲ್ ಗಾಂಧಿ ಉಳಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಘೋಷಿಸಿದೆ. ಅವರಿಂದ ತೆರವಾಗುವ ವಯನಾಡಿನಿಂದ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಈ ಮೂಲಕ ಕೇರಳದಿಂದ ಪ್ರಿಯಾಂಕಾ ಗಾಂಧಿ (Priyanka Gandhi) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ. ಈ ಬೆಳವಣಿಗೆಯ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ (Rahul Gandhi) ವಯನಾಡ್ ತೊರೆಯುವುದು ಬಹಳ ಕಠಿಣ ನಿರ್ಧಾರವಾಗಿದೆ ಎಂದಿದ್ದಾರೆ.

ರಾಯ್​ಬರೇಲಿ ಮತ್ತು ವಯನಾಡು ಎರಡೂ ನನಗೆ ಆಪ್ತವಾದ ಕ್ಷೇತ್ರಗಳು. ಇದು ಬಹಳ ಕಠಿಣವಾದ ನಿರ್ಧಾರವಾಗಿತ್ತು. ಇನ್ನು ವಯನಾಡಿನ ಜನರಿಗೆ ನನ್ನ ಪರವಾಗಿ ಪ್ರಿಯಾಂಕಾ ಕೆಲಸ ಮಾಡಲಿದ್ದಾರೆ. ನನ್ನ ಹಿಂದಿನ ಲೋಕಸಭೆ ವಾದ ವಯನಾಡಿಗೆ ನಾನು ಆಗಾಗ ಭೇಟಿ ನೀಡುತ್ತಿರುತ್ತೇನೆ. ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಗೆಲ್ಲುತ್ತಾರೆ ಎಂಬ ನಂಬಿಕೆ ನನಗಿದೆ. ವಯನಾಡ್ ಜನರು ಇನ್ನುಮುಂದೆ ಇಬ್ಬರು ಸಂಸದರನ್ನು ಹೊಂದಿದ್ದಾರೆಂದು ಭಾವಿಸಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡ ರಾಹುಲ್ ಗಾಂಧಿ; ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ

“ನನಗೆ ವಯನಾಡ್ ಮತ್ತು ರಾಯ್ ಬರೇಲಿಯೊಂದಿಗೆ ಭಾವನಾತ್ಮಕ ಸಂಬಂಧವಿದೆ. ನಾನು ಕಳೆದ 5 ವರ್ಷಗಳಿಂದ ವಯನಾಡಿನ ಸಂಸದನಾಗಿದ್ದೆ. ಅಲ್ಲಿನ ಜನರ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಧನ್ಯವಾದಗಳನ್ನು ಹೇಳುತ್ತೇನೆ. ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಆದರೆ ನಾನು ಸಹ ಆಗಾಗ ಭೇಟಿ ನೀಡುತ್ತೇನೆ. ನಾನು ರಾಯ್‌ಬರೇಲಿಯೊಂದಿಗೆ ಹಳೆಯ ಸಂಬಂಧವನ್ನು ಹೊಂದಿದ್ದೇನೆ, ನಾನು ಅವರನ್ನು ಮತ್ತೆ ಪ್ರತಿನಿಧಿಸುತ್ತೇನೆ ಎಂದು ನನಗೆ ಸಂತೋಷವಾಗಿದೆ. ಆದರೆ ಇದು ಕಠಿಣ ನಿರ್ಧಾರವಾಗಿತ್ತು ಎಂದು ಅವರು ಹೇಳಿದ್ದಾರೆ.

ನನ್ನ ಮನೆ, ಕಚೇರಿಯ ಬಾಗಿಲುಗಳು ವಯನಾಡಿನ ಜನರಿಗಾಗಿ ಯಾವಾಗಲೂ ತೆರೆದಿರುತ್ತದೆ. ನಾನು ವಯನಾಡಿನ ಪ್ರತಿಯೊಬ್ಬ ವ್ಯಕ್ತಿಯನ್ನು ಪ್ರೀತಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ರಾಯ್​ಬರೇಲಿ ಅಥವಾ ವಯನಾಡು; ರಾಹುಲ್ ಗಾಂಧಿ ಆಯ್ಕೆಯ ಕುತೂಹಲಕ್ಕೆ ಇಂದು ತೆರೆ

2019ರಿಂದಲೂ ಪ್ರಿಯಾಂಕಾ ಗಾಂಧಿಯವರ ಚುನಾವಣಾ ಚೊಚ್ಚಲ ಸ್ಪರ್ಧೆಯ ಬಗ್ಗೆ ಸುದ್ದಿಗಳು ಹರಿದಾಡುತ್ತಿದ್ದವು. ಕಾಂಗ್ರೆಸ್‌ನಲ್ಲಿ ಅನೇಕರು ಈ ಬಾರಿ ಪ್ರಿಯಾಂಕಾ ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿಯಿಂದ ಅವರು ಸ್ಪರ್ಧಿಸುವ ಮೂಲಕ ಬಿಜೆಪಿ ವಿರುದ್ಧದ ಯುದ್ಧವನ್ನು ಮುನ್ನಡೆಸುತ್ತಾರೆ ಎಂದು ನಿರೀಕ್ಷಿಸಿದ್ದರು. ಇದೀಗ ವಯನಾಡಿನಿಂದ ಅವರು ಸ್ಪರ್ಧಿಸುವುದು ಖಚಿತವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ