Wrestlers Protest: ನಮಗೂ ಮಹಿಳಾ ಫೆಡರೇಶನ್ ಮುಖ್ಯಸ್ಥರು ಬೇಕು, ಕ್ರೀಡಾ ಸಚಿವರ ಮುಂದೆ 5 ಬೇಡಿಕೆ ಇಟ್ಟ ಕುಸ್ತಿಪಟುಗಳು

|

Updated on: Jun 07, 2023 | 1:42 PM

ಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಭೆಯನ್ನು ಇಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರ ಮುಂದೆ ಕುಸ್ತಿಪಟುಗಳ 5 ಬೇಡಿಕೆಗಳನ್ನು ಇಟ್ಟಿದ್ದಾರೆ

Wrestlers Protest: ನಮಗೂ ಮಹಿಳಾ ಫೆಡರೇಶನ್ ಮುಖ್ಯಸ್ಥರು ಬೇಕು, ಕ್ರೀಡಾ ಸಚಿವರ ಮುಂದೆ 5 ಬೇಡಿಕೆ ಇಟ್ಟ ಕುಸ್ತಿಪಟುಗಳು
ಸಾಂದರ್ಭಿಕ ಚಿತ್ರ
Follow us on

ದೆಹಲಿ: ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಭೆಯನ್ನು ಇಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರ ಮುಂದೆ ಕುಸ್ತಿಪಟುಗಳ 5 ಬೇಡಿಕೆಗಳನ್ನು ಇಟ್ಟಿದ್ದಾರೆ, ಅದರಲ್ಲಿ ಒಂದು ಮಹಿಳಾ ಫೆಡರೇಶನ್ ಮುಖ್ಯಸ್ಥರು ಬೇಕು ಎಂದು ಹೇಳಿದ್ದಾರೆ. ಕ್ರೀಡಾ ಸಚಿವ ಅನುರಾಗ್ ಟ್ವಿಟ್ಟರ್‌ನಲ್ಲಿ ತಡರಾತ್ರಿಯ  ಸಭೆಗೆ ಆಹ್ವಾನ ನೀಡಿದ್ದು, ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಅವರು ಇಂದು (ಜೂ.7) ಕ್ರೀಡಾ ಸಚಿವರ ಮನೆಯಲ್ಲಿ ಮಾತುಕತೆ ನಡೆಸಿದರು.

ಐದು ದಿನಗಳಲ್ಲಿ ಕುಸ್ತಿಪಟುಗಳು ಮತ್ತು ಸರ್ಕಾರದ ನಡುವೆ  ನಡೆದ ಎರಡನೇ ಸಭೆಯಾಗಿದೆ. ಏಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕೈಗೊಳ್ಳಲು ಕುಸ್ತಿಪಟುಗಳು ಶನಿವಾರ ತಡರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಇದನ್ನೂ ಓದಿ: Wrestlers Protest: ಪ್ರತಿಭಟನಾ ನಿರತ ಕುಸ್ತಿಪಟುಗಳ ಜತೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಸಭೆ

ಭಾರತ ಕುಸ್ತಿ ಒಕ್ಕೂಟಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಾಗೂ ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನು ಕುಸ್ತಿಪಟುಗಳು ಸಚಿವರಿಗೆ ಸಲ್ಲಿಸಿದರು. ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು ಡಬ್ಲ್ಯುಎಫ್‌ಐ ಭಾಗವಾಗಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಬ್ರಿಜ್ ಭೂಷಣ್ ಸಿಂಗ್ ಬಂಧನ ಮಾಡಬೇಕು ಎಂದು ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Wed, 7 June 23