‘ದೇಶದಲ್ಲಿ ಕೊರೊನಾ ವೈರಸ್​ 3ನೇ ಅಲೆ ಪ್ರಾರಂಭ; ಮಕ್ಕಳಿಗೆ ಇಲ್ಲ ಅಪಾಯ, ಮಾರಣಾಂತಿಕವೂ ಅಲ್ಲ

ಕೊರೊನಾ ಮೂರನೇ ಅಲೆ ಬಗ್ಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಏಜೆನೆಟಿಸ್ಟ್, ಪ್ರೊಫೆಸರ್ ಜ್ಞಾನೇಶ್ವರ್ ಚೌಬೆ ಕೂಡ ಬಹುತೇಕ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ದೇಶದಲ್ಲಿ ಕೊರೊನಾ ವೈರಸ್​ 3ನೇ ಅಲೆ ಪ್ರಾರಂಭ; ಮಕ್ಕಳಿಗೆ ಇಲ್ಲ ಅಪಾಯ, ಮಾರಣಾಂತಿಕವೂ ಅಲ್ಲ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Sep 14, 2021 | 9:52 AM

ಚಂಡೀಗಢ್​: ದೇಶವೀಗ ಕೊರೊನಾ ಮೂರನೇ ಅಲೆ (Corona 3rd Wave)ಯ ಪ್ರಾರಂಭದಲ್ಲಿದೆ. ಹಾಗಂತ ಈ ಅಲೆ ಮಕ್ಕಳ ಮೇಲೆ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ ಎಂದು ಚಂಡಿಗಢ್​​ನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ(PGIMER) ನಿರ್ದೇಶಕ ಡಾ. ಜಗತ್​ ರಾಮ್​ ಹೇಳಿದ್ದಾರೆ. ಅನೇಕ ಮಕ್ಕಳಲ್ಲಿ ಈಗಾಗಲೇ ಪ್ರತಿಕಾಯಗಳು ಉತ್ಪತ್ತಿಯಾಗಿವೆ. ಹಾಗಾಗಿ ಮೂರನೇ ಅಲೆ ಮಕ್ಕಳಿಗೆ ಮಾರಣಾಂತಿಕವಾಗಿ ಪರಿಣಮಿಸುವುದಿಲ್ಲ ಎಂದಿದ್ದಾರೆ. 

ಪಿಜಿಐಎಂಇಆರ್​​ನಿಂದ ಸರ್ವೇ ನಡೆಸಲಾಗಿತ್ತು. ಚಂಡಿಗಢ್​​ನಲ್ಲಿ ಸುಮಾರು 2700 ಮಕ್ಕಳನ್ನು ಸರ್ವೇಯಲ್ಲಿ ಒಳಗೊಳ್ಳಲಾಗಿತ್ತು. ಈ ವೇಳೆ ಶೇ.71ರಷ್ಟು ಮಕ್ಕಳಲ್ಲಿ ಆ್ಯಂಟಿಬಾಡಿ ಅಭಿವೃದ್ಧಿಯಾಗಿದ್ದು ಕಂಡುಬಂದಿದೆ. ಹಾಗಾಗಿ ಮಕ್ಕಳು ಮೂರನೇ ಅಲೆಯಿಂದ ತೀವ್ರವಾಗಿ ಬಾಧಿತರಾಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಜಗತ್​ ರಾಮ್​ ತಿಳಿಸಿದ್ದಾರೆ.  ಬರೀ ಚಂಡಿಗಢ್​​ನಲ್ಲಿ ಮಾತ್ರವಲ್ಲ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲೂ ಸರ್ವೇ ಮಾಡಲಾಗಿತ್ತು. ಅಲ್ಲೂ ಸಹ ಶೇ.50-75ರಷ್ಟು ಮಕ್ಕಳಲ್ಲಿ ಪ್ರತಿಕಾಯ ಉತ್ಪತ್ತಿಯಾಗಿದ್ದು ಕಂಡುಬಂದಿದೆ ಎಂದೂ ತಿಳಿಸಿದ್ದಾರೆ.

ಸದ್ಯಕ್ಕಂತೂ ಮಕ್ಕಳಿಗೆ ಒಂದೂ ಕೊರೊನಾ ಲಸಿಕೆ ಇಲ್ಲ. ಹಾಗಿದ್ದಾಗ್ಯೂ ಕೊವಿಡ್​ 19 ವಿರೋಧಿ ಪ್ರತಿಕಾಯ ಉತ್ಪತ್ತಿಯಾಗಿದೆ. ಈ ಹಿಂದೆ ಕೊರೊನಾ ವೈರಸ್​ ಮೂರನೇ ಅಲೆ ಬಂದರೆ ಅದು ಮಕ್ಕಳಿಗೇ ಹೆಚ್ಚು ಬಾಧಿಸುತ್ತದೆ ಎಂದು ಹೇಳಲಾಗಿತ್ತು. ಆದರೆ ಈ ಬೆಳವಣಿಗೆ ನೋಡಿದರೆ ನನಗಂತೂ ಹಾಗೆ ಅನ್ನಿಸುವುದಿಲ್ಲ ಎಂದಿದ್ದಾರೆ.  ಇನ್ನು ಕೊರೊನಾ ಮೂರನೇ ಅಲೆ ಅಷ್ಟು ಬೇಗ ಉತ್ತುಂಗಕ್ಕೆ ಏರುವುದಿಲ್ಲ. ಹಾಗಂತ ನಾವು ನಿರ್ಲಕ್ಷ್ಯ ಮಾಡುವಂತಿಲ್ಲ. ಮಾಸ್ಕ್​ಗಳನ್ನು ಕಡ್ಡಾಯವಾಗಿ ಧರಿಸಬೇಕು. ಎಲ್ಲ ಶಿಷ್ಟಾಚಾರಗಳನ್ನೂ ಸರಿಯಾಗಿ ಪಾಲಿಸಬೇಕು ಎಂದು ನಿರ್ದೇಶಕ ಡಾ. ರಾಮ್​ ತಿಳಿಸಿದ್ದಾರೆ.

3ನೇ ಅಲೆ ಮಾರಣಾಂತಿಕವಲ್ಲ ಇನ್ನು ಕೊರೊನಾ ಮೂರನೇ ಅಲೆ ಬಗ್ಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಏಜೆನೆಟಿಸ್ಟ್, ಪ್ರೊಫೆಸರ್ ಜ್ಞಾನೇಶ್ವರ್ ಚೌಬೆ ಕೂಡ ಬಹುತೇಕ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊರೊನಾ ವೈರಸ್​ ಮೂರನೇ ಅಲೆ ಮಾರಣಾಂತಿಕವಲ್ಲ ಎಂದಿದ್ದಾರೆ. ಕೊರೊನಾ ಲಸಿಕೆ ಪಡೆದವರು ಮತ್ತು ಈಗಾಗಲೇ ಒಮ್ಮೆ ಕೊವಿಡ್​ 19ಸೋಂಕಿಗೆ ಒಳಗಾಗಿ ಗುಣಮುಖರಾದವರು ಮೂರನೇ ಅಲೆಯಿಂದ ಅಷ್ಟೊಂದು ಬಾಧಿತರಾಗುವುದಿಲ್ಲ ಎಂದು ಹೇಳಿದ್ದಾರೆ.

ಪ್ರತಿಕಾಯಗಳು ಮೂರು ತಿಂಗಳ ನಂತರ ಕಡಿಮೆ ಆಗುತ್ತವೆ. ಹೀಗಾಗಿ ಇನ್ನು ಮೂರು ತಿಂಗಳ ನಂತರ ಕೊವಿಡ್​ 19 ಮೂರನೇ ಅಲೆ ಏಳಬಹುದು. ಆದರೂ ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿರುವುದರಿಂದ ಕೊವಿಡ್​ 19 3ನೇ ಅಲೆ ಮಾರಣಾಂತಿಕವಾಗಿರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ತೆರವುಗೊಳಿಸಬೇಕಾದ ಅನಧಿಕೃತ ದೇಗುಲಗಳ ಪಟ್ಟಿಗೆ ಸೇರಿರುವ ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರಗಳು ಇವು

ಕಾನೂನು ಪಾಲಕರಿಂದಲೇ ಕಾನೂನು ಉಲ್ಲಂಘನೆ! ಅನುಮತಿ ಪಡೆಯದೆ ಸರ್ಕಾರಿ ನಿವಾಸದಲ್ಲಿದ್ದ ಮರಗಳ ಕಡಿದ ಮಂಡ್ಯ ಎಸ್​ಪಿ

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್