ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು: ಜ್ಯೋತಿರ್ ಮಠದ ಶಂಕರಾಚಾರ್ಯ ಸ್ವಾಮೀಜಿ

ನಾಳೆ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಿದ್ದಾರೆ. ಈ ನಡುವೆ ಮಾತನಾಡಿದ ಉತ್ತರಾಖಂಡದಲ್ಲಿರುವ ಜ್ಯೋತಿರ್ ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮೋದಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನಾವು ಮೋದಿ ವಿರೋಧಿಗಳಲ್ಲ. ಮೋದಿಯ ಅಭಿಮಾನಿಗಳು ಎಂದು ಹೇಳಿದ್ದಾರೆ.

ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು: ಜ್ಯೋತಿರ್ ಮಠದ ಶಂಕರಾಚಾರ್ಯ ಸ್ವಾಮೀಜಿ
ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು ಎಂದ ಜ್ಯೋತಿರ್ ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿImage Credit source: Vikram Sarma/outlookindia
Follow us
TV9 Web
| Updated By: Rakesh Nayak Manchi

Updated on:Jan 21, 2024 | 11:00 PM

ಡೆಹ್ರಾಡೂನ್, ಜ.21: ನಾಳೆ ಅಯೋಧ್ಯೆ ರಾಮ ಮಂದಿರ (Ayodhya Ram Mandir) ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಿದ್ದಾರೆ. ಈ ನಡುವೆ ಮಾತನಾಡಿದ ಉತ್ತರಾಖಂಡದಲ್ಲಿರುವ ಜ್ಯೋತಿರ್ ಮಠದ (Jyotir Math) ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮೋದಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನಾವು ಮೋದಿ ವಿರೋಧಿಗಳಲ್ಲ. ಮೋದಿಯ ಅಭಿಮಾನಿಗಳು ಎಂದು ಹೇಳಿದ್ದಾರೆ.

ಆದಿ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಮೂಲ ಪೀಠಗಳಲ್ಲಿ ಉತ್ತರಾಖಂಡ್‌ ರಾಜ್ಯದ ಚಮೋಲಿ ಜಿಲ್ಲೆಯಲ್ಲಿರುವ ಜ್ಯೋತಿರ್ ಮಠ ಕೂಡ ಒಂದು. ಈ ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಶ್ರೀಗಳು ಮೋದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: Ayodhya Ram Mandir: ಅಯೋಧ್ಯೆಯಲ್ಲಿ ಜ.22ರ ಮೋದಿ ಏನೇನು ಮಾಡ್ತಾರೆ? ಇಲ್ಲಿದೆ ವಿವರ

ಮೋದಿ ಪ್ರಧಾನಿಯಾದ ಮೇಲೆ ಹಿಂದೂಗಳ ಸ್ವಾಭಿಮಾನ ಹೆಚ್ಚಾಗಿದೆ. ನಾವು ಇದನ್ನು ಹಲವಾರು ಬಾರಿ ಸಾರ್ವಜನಿಕವಾಗಿ ಹೇಳಿದ್ದೇವೆ. ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು. ಪ್ರಧಾನಿ ನರೇಂದ್ರ ಮೋದಿಯನ್ನು ನಾವು ಸಾಕಷ್ಟು ಇಷ್ಟಪಡುತ್ತೇವೆ ಎಂದು ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಹೇಳಿದರು.

370ನೇ ವಿಧಿಯನ್ನು ರದ್ದುಗೊಳಿಸಿದಾಗ ನಾವು ಅದನ್ನು ಸ್ವಾಗತಿಸಲಿಲ್ಲವೇ ಎಂದು ಪ್ರಶ್ನಿಸಿದ ಅವಿಮುಕ್ತೇಶ್ವರಾನಂದ ಸರಸ್ವತಿ, ಸ್ವತಂತ್ರ ಭಾರತದಲ್ಲಿ ಯಾವ ಪ್ರಧಾನಿಯೂ ಹಿಂದೂಗಳ ಪರವಾಗಿ ನಿಂತಿರಲಿಲ್ಲ. ಮೋದಿಯಷ್ಟು ಯಾವ ಪ್ರಧಾನಿ ಹಿಂದೂಗಳ ಪರ ಧೈರ್ಯವಾಗಿ ನಿಂತಿರಲಿಲ್ಲ. ಹಿಂದೂ ಭಾವನೆಗಳನ್ನು ಬೆಂಬಲಿಸುವ ಮೋದಿಯನ್ನು ವಿರೋಧಿಸುವುದಿಲ್ಲ. ನಾವು ಮೋದಿ ವಿರೋಧಿ ಎಂದು ಸಾಬೀತುಪಡಿಸಿ ಎಂದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Sun, 21 January 24

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ