SCO Summit 2022 ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸಲು ಬಯಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

| Updated By: ರಶ್ಮಿ ಕಲ್ಲಕಟ್ಟ

Updated on: Sep 16, 2022 | 2:25 PM

ಕೊವಿಡ್-19 ಮಹಾಮಾರಿಯಿಂದ ಜಗತ್ತು ಹೊರಬರುತ್ತಿದೆ. ಕೋವಿಡ್ ಮತ್ತು ಉಕ್ರೇನ್ ಬಿಕ್ಕಟ್ಟಿನಿಂದಾಗಿ ಜಾಗತಿಕ ಪೂರೈಕೆ ಸರಪಳಿಯಲ್ಲಿ ಹಲವಾರು ಅಡಚಣೆಗಳು ಸಂಭವಿಸಿವೆ. ನಾವು ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸಲು ಬಯಸುತ್ತೇವೆ.

SCO Summit 2022 ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸಲು ಬಯಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
Follow us on

ದೆಹಲಿ:   ಇಂದು ಉಜ್ಬೇಕಿಸ್ತಾನದ (Uzbekistan) ಸಮರ್‌ಕಂಡ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ (SCO) 22 ನೇ ಪ್ರಾದೇಶಿಕ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಕೊವಿಡ್ -19 ಸಾಂಕ್ರಾಮಿಕ ಮತ್ತು ಉಕ್ರೇನ್‌ನಲ್ಲಿನ ಯುದ್ಧ ಜಾಗತಿಕ ಪೂರೈಕೆ ಸರಪಳಿಗಳ ಮೇಲೆ ಪರಿಣಾಮ ಬೀರಿದ್ದು, ಜಾಗತಿಕ ಆಹಾರ ಮತ್ತು ಇಂಧನ ಬಿಕ್ಕಟ್ಟು ಇರುವುದರಿಂದ ಪ್ರಾದೇಶಿಕ ಗುಂಪಿನಲ್ಲಿ ಉತ್ತಮ ಸಂಪರ್ಕದ ಅಗತ್ಯವಿದೆ ಎಂದು ಹೇಳಿದರು. ಕೊವಿಡ್-19 ಮಹಾಮಾರಿಯಿಂದ ಜಗತ್ತು ಹೊರಬರುತ್ತಿದೆ. ಕೊವಿಡ್ ಮತ್ತು ಉಕ್ರೇನ್ ಬಿಕ್ಕಟ್ಟಿನಿಂದಾಗಿ ಜಾಗತಿಕ ಪೂರೈಕೆ ಸರಪಳಿಯಲ್ಲಿ ಹಲವಾರು ಅಡಚಣೆಗಳು ಸಂಭವಿಸಿವೆ. ನಾವು ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸಲು ಬಯಸುತ್ತೇವೆ ಎಂದು ಹೇಳಿದ್ದಾರೆ. ಎಸ್‌ಸಿಒ ವೈವಿಧ್ಯಮಯ ಮತ್ತು ಸ್ಥಿತಿಸ್ಥಾಪಕ ಪೂರೈಕೆ ಸರಪಳಿಗಳನ್ನು ತರಲು ಗಮನಹರಿಸಬೇಕು. ಇದಕ್ಕಾಗಿ, ಉತ್ತಮ ಸಂಪರ್ಕ ಮತ್ತು ಸಾರಿಗೆಗೆ ಪ್ರವೇಶದ ಅಗತ್ಯವಿದೆ. ಭಾರತವು ಎಸ್​​ಸಿಒ ದೇಶಗಳ ನಡುವೆ ಪರಸ್ಪರ ನಂಬಿಕೆ ಮತ್ತು ಸಹಕಾರವನ್ನು ಬೆಂಬಲಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ನಮ್ಮ ಜನ ಕೇಂದ್ರಿತ ಅಭಿವೃದ್ಧಿ ಮಾದರಿಯಲ್ಲಿ ತಂತ್ರಜ್ಞಾನದ ನವೀನ ಬಳಕೆಯನ್ನು ಕೇಂದ್ರೀಕರಿಸಲಾಗಿದೆ. ಭಾರತವು ಎಸ್​​ಸಿಒ ರಾಷ್ಟ್ರಗಳೊಂದಿಗೆ ಸಹಕರಿಸಲು ಸಿದ್ಧವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ನಾವು ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಪ್ರತಿಯೊಂದು ವಲಯದಲ್ಲಿ ನಾವೀನ್ಯತೆಯನ್ನು ಬೆಂಬಲಿಸುತ್ತಿದ್ದೇವೆ. ಇಂದು ನಮ್ಮ ದೇಶದಲ್ಲಿ 70,000 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಮತ್ತು 100 ಕ್ಕೂ ಹೆಚ್ಚು ಯುನಿಕಾರ್ನ್‌ಗಳಿವೆ ಎಂದು ಅವರು ಹೇಳಿದರು.


2023 ರ ರಾಗಿ ಆಹಾರ ಉತ್ಸವದ ಕುರಿತು ಮಾತನಾಡಿದ ಅವರು,  ನಾವು ರಾಗಿಗಳಿಂದ ಶಕ್ತಿಯನ್ನು ಪಡೆದುಕೊಳ್ಳಲು ಬಯಸುತ್ತೇವೆ. ಏಕೆಂದರೆ ಅದು ಪರ್ಯಾಯ ಮತ್ತು ಅಗ್ಗದ ಆಯ್ಕೆಯಾಗಿದೆ. ಪಾರಂಪರಿಕ ವೈದ್ಯ ಪದ್ಧತಿಗೂ ಸಹಕಾರ ಬೇಕು ಎಂದ ಮೋದಿ ವೈದ್ಯಕೀಯ ಮತ್ತು ಪ್ರವಾಸೋದ್ಯಮಕ್ಕಾಗಿ ಭಾರತವು ವಿಶ್ವದ ಅತ್ಯಂತ ಆರ್ಥಿಕ ರಾಷ್ಟ್ರಗಳಲ್ಲಿ ಒಂದಾಗಿದೆ. ನಾವು ಸಾಂಪ್ರದಾಯಿಕ ಔಷಧಕ್ಕಾಗಿ ಎಸ್​​ಸಿಒ ದೇಶಗಳ ನಡುವೆ ಸಹಕಾರವನ್ನು ಹೆಚ್ಚಿಸಬೇಕು ಎಂದಿದ್ದಾರೆ.

Published On - 2:24 pm, Fri, 16 September 22