ನಾಗರಿಕ ಸೇವಾ ಹುದ್ದೆ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ- ಕೇಂದ್ರದ ಸ್ಪಷ್ಟನೆ

ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್​​ ನಿರ್ದೇಶಿಸಿದೆ.

ನಾಗರಿಕ ಸೇವಾ ಹುದ್ದೆ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ- ಕೇಂದ್ರದ ಸ್ಪಷ್ಟನೆ
UPSC Recruitment 2021

Updated on: Jan 22, 2021 | 4:18 PM

ನವದೆಹಲಿ: ಕೊರೊನಾ ವೈರಸ್​ ಕಾರಣ ನೀಡಿ 2020ರ ನಾಗರಿಕ ಸೇವಾ ಆಯೋಗ ಪರೀಕ್ಷೆ ಬರೆಯದವರಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ಕೊರೊನಾ ಕಾರಣದಿಂದ ಅನೇಕರು ಯುಪಿಎಸ್​ಸಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಇದೇ ಕಾರಣ ನೀಡಿ ಅನೇಕರು ಮತ್ತೊಂದು ಅವಕಾಶ ಕೇಳಿದ್ದರು. ಈ ಬಗ್ಗೆ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಸುಪ್ರೀಂಕೋರ್ಟ್​ ಪೀಠ, ಕೇಂದ್ರದ ಪ್ರತಿಕ್ರಿಯೆ ಕೇಳಿತ್ತು. ಇದಕ್ಕೆ ಉತ್ತರಿಸಿರುವ ಕೇಂದ್ರ ಸರ್ಕಾರ, ನಾವು ಮತ್ತೊಂದು ಅವಕಾಶ ನೀಡಲು ಸಿದ್ಧರಿಲ್ಲ ಎಂದು ಹೇಳಿದೆ.

ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್​​ ನಿರ್ದೇಶಿಸಿದೆ.

ಕೆಲ ಕಡೆಗಳಲ್ಲಿ ಪ್ರವಾಹ ಏರ್ಪಟ್ಟಿತ್ತು. ಅಲ್ಲದೆ, ದೇಶಾದ್ಯಂತ ಕೊರೊನಾ ಕಾಣಿಸಿಕೊಂಡಿತ್ತು. ಹೀಗಾಗಿ,  ಕಳೆದ ಅಕ್ಟೋಬರ್​ 4ರಂದು ನಡೆಯಬೇಕಿದ್ದ ಯುಪಿಎಸ್​​ಸಿ ನಾಗರಿಕ ಸೇವೆಯ ಪ್ರಿಲಿಮಿನರಿ ಪರೀಕ್ಷೆ ಮುಂದೂಡುವಂತೆ ಕೋರಲಾಗಿತ್ತು. ಆದರೆ, ಸರ್ಕಾರ ಈ ಮನವಿ ತಿರಸ್ಕರಿಸಿತ್ತು.

ಪರೀಕ್ಷೆ ಕೂರದೇ ಐಎಎಸ್​ ಪಾಸಾಗಿದ್ದಾರೆ ಎನ್ನುವ ಟೀಕೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ತಿರುಗೇಟು

Published On - 4:18 pm, Fri, 22 January 21

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us