AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಯಾರನ್ನೂ ನಿಂದಿಸಿಲ್ಲ; ಸಚಿವ ಕಿರಣ್ ರಿಜಿಜು ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಸಂಸದರು ಸ್ಪೀಕರ್ ಕೊಠಡಿಯೊಳಗೆ ನುಗ್ಗಿ, ಅವರನ್ನು ನಿಂದಿಸಿ, ಪ್ರಧಾನಿ ಮೋದಿಗೂ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಬಿಜೆಪಿ ಸಚಿವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ನಾವು ಯಾರಿಗೂ ಯಾವುದೇ ನಿಂದನೆ ಮಾಡಿಲ್ಲ ಎಂದು ಹೇಳಿದ್ದಾರೆ. 20ರಿಂದ 25 ಕಾಂಗ್ರೆಸ್ ಸಂಸದರು ಓಂ ಬಿರ್ಲಾ ಅವರನ್ನು ತಮ್ಮ ಕೊಠಡಿಯಲ್ಲಿ ನಿಂದಿಸಿದ್ದಾರೆ. ಅಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ತಡೆಯಲಿಲ್ಲ ಎಂದು ಕಿರಣ್ ರಿಜಿಜು ಹೇಳಿಕೆ ನೀಡಿದ್ದರು.

ನಾವು ಯಾರನ್ನೂ ನಿಂದಿಸಿಲ್ಲ; ಸಚಿವ ಕಿರಣ್ ರಿಜಿಜು ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
Priyanka Gandhi VadraImage Credit source: PTI
ಸುಷ್ಮಾ ಚಕ್ರೆ
|

Updated on: Feb 12, 2026 | 5:16 PM

Share

ನವದೆಹಲಿ, ಫೆಬ್ರವರಿ 12: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದರು ಅನುಚಿತವಾಗಿ ವರ್ತಿಸಿದ್ದಾರೆ, ಅದಕ್ಕೆ ನಾನು ಪ್ರೋತ್ಸಾಹ ನೀಡಿದ್ದೇನೆ ಎಂಬ ಕೇಂದ್ರ ಸಚಿವ ಕಿರಣ್ ರಿಜಿಜು (Kiren Rijiju) ಅವರ ಹೇಳಿಕೆಯನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸುಳ್ಳು ಎಂದು ತಳ್ಳಿಹಾಕಿದ್ದಾರೆ. “ನಾವು ಯಾರನ್ನೂ ನಿಂದಿಸಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನಾವು ಯಾರನ್ನೂ ನಿಂದಿಸಿಲ್ಲ. ಸ್ಪೀಕರ್ ಕೊಠಡಿಯೊಳಗೆ ಹೋದಾಗ ಒಂದಿಬ್ಬರು ಸಂಸದರು ಉದ್ರೇಕಗೊಂಡರು. ಅವರು ತಮ್ಮ ಕೋಪವನ್ನು ವ್ಯಕ್ತಪಡಿಸಿದರು. ಈ ವೇಳೆ ನಾನು ಅವರಿಗೆ ಕುಮ್ಮಕ್ಕು ನೀಡಿದ್ದೇನೆ ಎಂಬುದು ಸುಳ್ಳು. ಆಗ ನಾನು ಮೌನವಾಗಿ ಕುಳಿತಿದ್ದೆ. ಕೊನೆಯಲ್ಲಿ, ನಾನು ಕೆಲವು ವಿಷಯಗಳನ್ನು ಸ್ಪೀಕರ್​ಗೆ ಶಾಂತಿಯುತವಾಗಿ ಹೇಳಿದೆ. ಅಲ್ಲಿ ಯಾವುದೇ ಗಲಾಟೆ ನಡೆಯಲಿಲ್ಲ. ಸ್ಪೀಕರ್ ಕೂಡ ಶಾಂತಿಯಿಂದಲೇ ನಮ್ಮ ಮಾತು ಕೇಳಿಸಿಕೊಂಡರು” ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತ ಮಾರಾಟಕ್ಕಿಲ್ಲ; ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡುವುದಾಗಿ ಕಿರಣ್ ರಿಜಿಜು ಎಚ್ಚರಿಕೆ

20ರಿಂದ 25 ಕಾಂಗ್ರೆಸ್ ಸಂಸದರು ಸ್ಪೀಕರ್ ಅವರ ಕೊಠಡಿಗೆ ಪ್ರವೇಶಿಸಿ, ಅವರನ್ನು ನಿಂದಿಸಿ, ಪ್ರಧಾನಿಯವರಿಗೆ ಬೆದರಿಕೆ ಹಾಕಿದ್ದರು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಆರೋಪಿಸಿ ಹೊಸ ವಿಡಿಯೋವನ್ನು ಕೂಡ ರಿಲೀಸ್ ಮಾಡಿದ್ದರು. ಕಿರಣ್ ರಿಜಿಜು ಅವರ ಆರೋಪ ಸುಳ್ಳೆಂದು ಪ್ರಿಯಾಂಕಾ ಗಾಂಧಿ ನಿರಾಕರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು