AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕವನ್ನು ನಂಬುವುದಿಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತಕ್ಕೆ ಸಾಧ್ಯ; ಇರಾನ್​ ವಿದೇಶಾಂಗ ಸಚಿವ ಅರಘ್ಚಿ

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ನವದೆಹಲಿಗೆ ಆಗಮಿಸಿದ್ದು, ಈ ವೇಳೆ ಭಾರತದ ಬೆಳೆಯುತ್ತಿರುವ ರಾಜತಾಂತ್ರಿಕ ನಿಲುವನ್ನು ಶ್ಲಾಘಿಸಿದ್ದಾರೆ. ಭಾರತದೊಂದಿಗಿನ ನಮ್ಮ ಸಂಬಂಧಗಳಿಗೆ ನಾವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ ಎಂದು ಅರಘ್ಚಿ ಹೇಳಿದ್ದಾರೆ. ಹಾಗೇ, ಭಾರತ ಸರ್ಕಾರವು ಅವರಿಗೆ ಮತ್ತು ಅವರ ನಿಯೋಗಕ್ಕೆ ನೀಡಿದ ಆತ್ಮೀಯ ಆತಿಥ್ಯವನ್ನು ಅವರು ಶ್ಲಾಘಿಸಿದ್ದಾರೆ. ಇಸ್ರೇಲ್ ಮತ್ತು ಅಮೆರಿಕದ ಜೊತೆಗಿನ ಸಂಘರ್ಷದ ಬಗ್ಗೆಯೂ ಇರಾನ್​ನ ವಿದೇಶಾಂಗ ಸಚಿವ ಮಾತನಾಡಿದ್ದಾರೆ. ಆ ಕುರಿತು ವಿವರ ಇಲ್ಲಿದೆ.

ಅಮೆರಿಕವನ್ನು ನಂಬುವುದಿಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತಕ್ಕೆ ಸಾಧ್ಯ; ಇರಾನ್​ ವಿದೇಶಾಂಗ ಸಚಿವ ಅರಘ್ಚಿ
Iran Ministrer Araghchi With Indian Minister S JaishankarImage Credit source: PTI
ಸುಷ್ಮಾ ಚಕ್ರೆ
|

Updated on: May 15, 2026 | 7:23 PM

Share

ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ಭಾರತಕ್ಕೆ ಸಾಧ್ಯವಿದೆ ಎಂದು ಇರಾನ್​ನ (Iran War) ವಿದೇಶಾಂಗ ಸಚಿವ ಅಭಿಪ್ರಾಯಪಟ್ಟಿದ್ದಾರೆ. ಭಾರತಕ್ಕೆ ಎಲ್ಲೆಡೆ ಬಹಳ ಉತ್ತಮ ಹೆಸರಿದೆ. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಭಾರತ ಬಹಳ ಪ್ರಮುಖ ಪಾತ್ರ ವಹಿಸಲು ಸಾಧ್ಯವಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.

ಬ್ರಿಕ್ಸ್ ಸಭೆಗಾಗಿ ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರಘ್ಚಿ, ಇರಾನ್ ಮತ್ತು ಪಶ್ಚಿಮ ಏಷ್ಯಾದ ಬಿಕ್ಕಟ್ಟನ್ನು ಒಳಗೊಂಡ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮಾತುಕತೆ ಮತ್ತು ರಾಜತಾಂತ್ರಿಕತೆಯೊಂದೇ ಏಕೈಕ ಮಾರ್ಗವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕ ನಂಬಿಕೆಗೆ ಯೋಗ್ಯವಲ್ಲ, ಮತ್ತೆ ಯುದ್ಧ ಆರಂಭವಾಗಬಹುದು; ಇರಾನ್ ಸ್ಫೋಟಕ ಹೇಳಿಕೆ

ಇರಾನ್‌ಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮಿಲಿಟರಿ ಸಂಘರ್ಷದ ಮೂಲಕ ಪರಿಹಾರ ಸಿಗಲು ಸಾಧ್ಯವಿಲ್ಲ ಎಂಬುದು ನಮಗೂ ಗೊತ್ತಾಗಿದೆ. ಈ ಪ್ರದೇಶದಲ್ಲಿ ಸ್ಥಿರತೆ ಮತ್ತು ಶಾಂತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಭಾರತದ ಎಲ್ಲ ರೀತಿಯ ಪ್ರಯತ್ನವನ್ನು ನಾವು ಬೆಂಬಲಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇರಾನಿನ ಸಚಿವರು ಹಾರ್ಮುಜ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿಯ ಬಗ್ಗೆಯೂ ಮಾತನಾಡಿದ್ದಾರೆ. ಹಾರ್ಮುಜ್ ಜಲಸಂಧಿ ತುಂಬಾ ಸಂಕೀರ್ಣವಾದುದು. ಜಾಗತಿಕ ತೈಲ ವ್ಯಾಪಾರಕ್ಕೆ ನಿರ್ಣಾಯಕವಾದ ಈ ಜಲಮಾರ್ಗದ ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಇರಾನ್ ಸಹಾಯ ಮಾಡಲು ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುದ್ಧ ಕೊನೆಗೊಳಿಸಲು ಇರಾನ್ ಮುಂದೆ ಹೊಸ ಕದನವಿರಾಮದ ಪ್ರಸ್ತಾಪವಿಟ್ಟ ಟ್ರಂಪ್

ನಮಗೆ ಅಮೆರಿಕದ ಮೇಲೆ ನಂಬಿಕೆಯಿಲ್ಲ. ವಿಶ್ವಾಸದ ಕೊರತೆಯಿಂದಾಗಿ ಅಮೆರಿಕದೊಂದಿಗೆ ಮಾತುಕತೆಗಳು ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ. “ಯುದ್ಧ ಆರಂಭವಾಗಿ 40 ದಿನಗಳಾಗಿವೆ. ಈ ಸಮಯದಲ್ಲಿ ಇರಾನ್ ವಿರುದ್ಧದ ಆಕ್ರಮಣದಲ್ಲಿ ಯಾವುದೇ ಗುರಿಯನ್ನು ಸಾಧಿಸಲು ಅಮೆರಿಕ ವಿಫಲವಾಗಿದೆ. ನಮಗೆ ಅಮೆರಿಕನ್ನರ ಮೇಲೆ ನಂಬಿಕೆಯಿಲ್ಲ. ಯಾವುದೇ ರಾಜತಾಂತ್ರಿಕ ಪ್ರಯತ್ನದ ದಾರಿಯಲ್ಲಿ ಇದು ಮುಖ್ಯ ಅಡಚಣೆಯಾಗಿದೆ. ಅಮೆರಿಕನ್ನರನ್ನು ನಂಬದಿರಲು ನಮಗೆ ಹಲವು ಕಾರಣಗಳಿವೆ. ಆದರೆ ಅವರು ನಮ್ಮನ್ನು ನಂಬದಿರಲು ಯಾವುದೇ ಕಾರಣವಿಲ್ಲ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ