ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮುಗೆ ನಮ್ಮ ಬೆಂಬಲ; ಮಾಯಾವತಿ ಘೋಷಣೆ

ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ನಾವು ನಿರ್ಧರಿಸಿದ್ದೇವೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. 

ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮುಗೆ ನಮ್ಮ ಬೆಂಬಲ; ಮಾಯಾವತಿ ಘೋಷಣೆ
Mayawati
Edited By:

Updated on: Jun 25, 2022 | 10:36 AM

ಎನ್​ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ನಾವು ನಿರ್ಧರಿಸಿದ್ದೇವೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.   ನಾವು ಈ ನಿರ್ಧಾರವನ್ನು ಬಿಜೆಪಿ ಮತ್ತು NDA ಬೆಂಬಲಕ್ಕಾಗಿ ಅಥವಾ ವಿರೋಧದ ವಿರುದ್ಧ ತೆಗೆದುಕೊಂಡಿಲ್ಲ ಆದರೆ ನಮ್ಮ ಪಕ್ಷ ಮತ್ತು ಚಳವಳಿಯನ್ನು ಗಮನದಲ್ಲಿಟ್ಟುಕೊಂಡಿದ್ದೇವೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಪಕ್ಷ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್‌ಡಿಎ) ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಇಂದು ಘೋಷಿಸಿದ್ದಾರೆ. “ನಾವು ಈ ನಿರ್ಧಾರವನ್ನು ಬಿಜೆಪಿ ಅಥವಾ ಎನ್‌ಡಿಎ ಬೆಂಬಲಕ್ಕಾಗಿ ಅಥವಾ ಪ್ರತಿಪಕ್ಷಗಳ ವಿರುದ್ಧ ತೆಗೆದುಕೊಂಡಿಲ್ಲ. ನಮ್ಮ ಪಕ್ಷ ಮತ್ತು ಚಳುವಳಿಯನ್ನು ಗಮನದಲ್ಲಿಟ್ಟುಈ ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ಮಾಯಾವತಿ ಹೇಳಿದ್ದಾರೆ.

ಇದನ್ನೂ ಓದಿ
Presidential Election: ಪ್ರಧಾನಿ ಮೋದಿ, ರಾಜನಾಥ್ ಸಿಂಗ್​ಗೆ ಫೋನ್ ಮಾಡಿ ರಾಷ್ಟ್ರಪತಿ ಚುನಾವಣೆಯಲ್ಲಿ ಬೆಂಬಲ ಕೋರಿದ ಯಶವಂತ್ ಸಿನ್ಹಾ
India Covid Updates: ಭಾರತದಲ್ಲಿ ಹೊಸದಾಗಿ 15,940 ಮಂದಿಗೆ ಕೊರೊನಾ ಸೋಂಕು, 20 ಮಂದಿ ಸಾವು
Maharashtra Crisis: ಮಹಾರಾಷ್ಟ್ರ ಹೈಡ್ರಾಮಾ; 16 ರೆಬೆಲ್ ಶಾಸಕರಿಗೆ ಇಂದು ನೋಟಿಸ್ ನೀಡ್ತಾರಾ ಡೆಪ್ಯುಟಿ ಸ್ಪೀಕರ್?
Assam Flood: ಅಸ್ಸಾಂನಲ್ಲಿ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 118ಕ್ಕೆ ಏರಿಕೆ; 5 ದಿನಗಳಿಂದ ಸಿಲ್ಚಾರ್ ಮುಳುಗಡೆ

ಒಡಿಶಾದ ಬುಡಕಟ್ಟು ಬಿಜೆಪಿ ನಾಯಕಿ ದ್ರೌಪದಿ ಮುರ್ಮು ಅವರನ್ನು ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಜಾರ್ಖಂಡ್‌ನ ಗವರ್ನರ್ ಹುದ್ದೆ ನಿರ್ವಹಿಸಿದ್ದ 64 ವರ್ಷದ ದ್ರೌಪದಿ ಈ ಚುನಾವಣೆಯಲ್ಲಿ ಗೆದ್ದರೆ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆಯಾಗಲಿದ್ದಾರೆ.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ನೇತೃತ್ವದ ಜೆಎಂಎಂ ಮತ್ತು ಜನತಾ ದಳ (ಜಾತ್ಯತೀತ) ಕೂಡ ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿಯನ್ನು ಬೆಂಬಲಿಸುವ ಸಾಧ್ಯತೆಯಿದೆ. ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ಆಪ್ ತನ್ನ ಜಂಟಿ ಅಭ್ಯರ್ಥಿ ಎಂದು ಘೋಷಿಸಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

Published On - 10:11 am, Sat, 25 June 22