Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಗೆ ಕೇವಲ 400 ದಿನಗಳು ಬಾಕಿ ಉಳಿದಿವೆ‌, ಎಲ್ಲ ಮತದಾರರನ್ನು ತಲುಪಿ: ಪ್ರಧಾನಿ ಮೋದಿ

BJP National Executive ಬಿಜೆಪಿಯು ಇನ್ನು ಮುಂದೆ ಕೇವಲ ರಾಜಕೀಯ ಚಳವಳಿಯಾಗಿರದೆ ಸಾಮಾಜಿಕ ಆಂದೋಲನವಾಗಿದೆ ಅದು ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಪರಿವರ್ತಿಸಲು ಕೆಲಸ ಮಾಡುತ್ತಿದೆ ಎಂದು ಅಧಿವೇಶನದಲ್ಲಿ ಭಾಗವಹಿಸಿದ್ದ 350 ಸಚಿವರು, ಮುಖಂಡರು ಮತ್ತು ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಕೇವಲ 400 ದಿನಗಳು ಬಾಕಿ ಉಳಿದಿವೆ‌, ಎಲ್ಲ ಮತದಾರರನ್ನು ತಲುಪಿ: ಪ್ರಧಾನಿ ಮೋದಿ
ಇಂದು ಕರ್ನಾಟಕಕ್ಕೆ ಪ್ರಧಾನಿ ಮೋದಿImage Credit source: ANI
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 17, 2023 | 8:45 PM

ದೆಹಲಿ: ಮಂಗಳವಾರ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ (BJP National Executive) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 2024ರ ಸಾರ್ವತ್ರಿಕ ಚುನಾವಣೆಯ ಕುರಿತು ಸೂಚನೆ ನೀಡಿದ್ದು, ಮತದಾರರ ಜತೆ ಸಂಪರ್ಕವನ್ನು ಹೆಚ್ಚಿಸುವಂತೆ ಪಕ್ಷದ ನಾಯಕರನ್ನು ಒತ್ತಾಯಿಸಿದ್ದಾರೆ.ಲೋಕಸಭಾ ಚುನಾವಣೆಯವರೆಗೆ (Lok Sabha Election) ನಮಗೆ 400 ದಿನಗಳಿವೆ. ನಾವು ಜನರ ಸೇವೆಗಾಗಿ ಎಲ್ಲವನ್ನೂ ಮಾಡಬೇಕಾಗಿದೆ. ನಾವು ಇತಿಹಾಸವನ್ನು ರಚಿಸಬೇಕಾಗಿದೆ” ಎಂದು ಸಭೆಯಲ್ಲಿ ಮೋದಿ ಹೇಳಿರುವುದಾಗಿ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.18-25 ವಯಸ್ಸಿನ ಜನರ ಬಗ್ಗೆ ನಾವು ಗಮನ ಹರಿಸಬೇಕು. ಅವರಿಗೆ ಇತಿಹಾಸ ಮತ್ತು ಹಿಂದಿನ ಸರ್ಕಾರಗಳ ದುರಾಡಳಿತದ ಬಗ್ಗೆ ತಿಳಿದಿಲ್ಲ. ನಾವು ಉತ್ತಮ ಆಡಳಿತ ಕಡೆಗೆ ಹೇಗೆ ಸಾಗುತ್ತಿದ್ದೇವೆ ಎಂಬುದರ ಬಗ್ಗೆ ಅವರಿಗೆ ತಿಳಿದಿಲ್ಲ. ನಾವು ಅವರಿಗೆ ಅರಿವು ಮೂಡಿಸಬೇಕು ಮತ್ತು ಅವರಿಗೆ ಪ್ರಜಾಸತ್ತಾತ್ಮಕ ಮಾರ್ಗಗಳನ್ನು ಪರಿಚಯಿಸಬೇಕು. ಉತ್ತಮ ಆಡಳಿತದ ಭಾಗವಾಗಲು ಅವರಿಗೆ ಸಹಾಯ ಮಾಡಬೇಕು. ಗಡಿ ಪ್ರದೇಶಗಳು ಸೇರಿದಂತೆ ಗ್ರಾಮಗಳಲ್ಲಿ ಸಂಘಟನೆಯನ್ನು ಬಲಪಡಿಸುವತ್ತ ಪಕ್ಷವು ಗಮನಹರಿಸಬೇಕು ಅದರ ನಾಯಕರು “ಎಲ್ಲಾ ಹಂತದ ಜನರನ್ನು ಭೇಟಿ ಮಾಡಬೇಕು” ಎಂದು ಪ್ರಧಾನಿ ಹೇಳಿರುವುದಾಗಿ ಫಡ್ನವಿಸ್ ಹೇಳಿದ್ದಾರೆ.

ಬಿಜೆಪಿಯು ಇನ್ನು ಮುಂದೆ ಕೇವಲ ರಾಜಕೀಯ ಚಳವಳಿಯಾಗಿರದೆ ಸಾಮಾಜಿಕ ಆಂದೋಲನವಾಗಿದೆ ಅದು ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಪರಿವರ್ತಿಸಲು ಕೆಲಸ ಮಾಡುತ್ತಿದೆ ಎಂದು ಅಧಿವೇಶನದಲ್ಲಿ ಭಾಗವಹಿಸಿದ್ದ 350 ಸಚಿವರು, ಮುಖಂಡರು ಮತ್ತು ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: BJP President : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಧಿಕಾರಾವಧಿ ವಿಸ್ತರಣೆ

ಭಾರತದ ಅತ್ಯುತ್ತಮ ಯುಗ (“ಸರ್ವೋತ್ತಮ ಕಾಲ”) ಬರಲಿದೆ, “ನಾವು ಅದರ ಅಭಿವೃದ್ಧಿಗೆ ನಮ್ಮನ್ನು ಅರ್ಪಿಸಿಕೊಳ್ಳಬೇಕು” ಎಂದು ಪ್ರಧಾನಿ ಮೋದಿ ಹೇಳಿದರು. ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಎರಡನೇ ದಿನದಂದು, ಪಕ್ಷವು ಮುಂದಿನ ವರ್ಷ ಜೂನ್‌ವರೆಗೆ ಪಕ್ಷದ ಮುಖ್ಯಸ್ಥರಾಗಿ ಜೆಪಿ ನಡ್ಡಾ ಅಧಿಕಾರಾವಧಿಯನ್ನು ವಿಸ್ತರಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ