ಪ್ರಜಾಪ್ರಭುತ್ವದ ಪರೀಕ್ಷೆಯಲ್ಲಿ ಗೆದ್ದೆವು; ಜಾರ್ಖಂಡ್ ಚುನಾವಣೆಯಲ್ಲಿ ಜೆಎಂಎಂ ಗೆಲುವಿಗೆ ಹೇಮಂತ್ ಸೊರೇನ್ ಸಂತಸ

ಜಾರ್ಖಂಡ್ ರಾಜ್ಯದ ಎಲ್ಲಾ 81 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಿತು. ಜಾರ್ಖಂಡ್‌ನಲ್ಲಿ ಎರಡೂ ಹಂತಗಳಲ್ಲಿ ಶೇ.67.74ರಷ್ಟು ಮತದಾನವಾಗಿದ್ದು, ಎರಡನೇ ಹಂತದಲ್ಲಿ ಶೇ.68.95ರಷ್ಟು ಮತದಾನವಾಗಿದೆ.

ಪ್ರಜಾಪ್ರಭುತ್ವದ ಪರೀಕ್ಷೆಯಲ್ಲಿ ಗೆದ್ದೆವು; ಜಾರ್ಖಂಡ್ ಚುನಾವಣೆಯಲ್ಲಿ ಜೆಎಂಎಂ ಗೆಲುವಿಗೆ ಹೇಮಂತ್ ಸೊರೇನ್ ಸಂತಸ
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್
Follow us
ಸುಷ್ಮಾ ಚಕ್ರೆ
|

Updated on: Nov 23, 2024 | 7:55 PM

ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಇಂಡಿಯ ಬ್ಲಾಕ್ 30 ಸ್ಥಾನಗಳನ್ನು ಗೆದ್ದಿದೆ, ಎನ್​ಡಿಎ 9 ಸ್ಥಾನಗಳನ್ನು ಪಡೆದುಕೊಂಡಿದೆ. ಆರಂಭಿಕ ಸುತ್ತಿನಲ್ಲಿ ಹಿಂದುಳಿದಿದ್ದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜೆಎಂಎಂ ನೇತೃತ್ವದ ಇಂಡಿಯಾ ಬ್ಲಾಕ್ ಇದೀಗ ಭಾರೀ ಗೆಲುವು ಕಂಡಿದೆ. ಪ್ರಸ್ತುತ 81 ಸದಸ್ಯರ ರಾಜ್ಯ ವಿಧಾನಸಭೆಯಲ್ಲಿ 50ಕ್ಕೂ ಹೆಚ್ಚು ಸ್ಥಾನಗಳಲ್ಲಿ ಇಂಡಿಯ ಬ್ಲಾಕ್ ಮುಂದಿದೆ. ಇಂದು ಮತ ಎಣಿಕೆ ಆರಂಭವಾದಾಗ ಭಾರೀ ಮುನ್ನಡೆ ಸಾಧಿಸಿದ್ದ ಬಿಜೆಪಿ ನೇತೃತ್ವದ ಎನ್‌ಡಿಎ ಇದೀಗ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಕೆಲವೇ ಗಂಟೆಗಳಲ್ಲಿ ಮುಕ್ತಾಯವಾಗುವ ನಿರೀಕ್ಷೆಯಿದೆ. ಹೇಮಂತ್ ಸೊರೆನ್ ಅವರ ಜೆಎಂಎಂ 41 ಅಸೆಂಬ್ಲಿ ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಉಳಿದವುಗಳನ್ನು ತನ್ನ ಮಿತ್ರಪಕ್ಷಗಳಾದ ಕಾಂಗ್ರೆಸ್ (30 ಸ್ಥಾನಗಳು), ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) (6), ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) (4)ಗೆ ನೀಡಿತ್ತು. ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಅದರ ಮಿತ್ರಪಕ್ಷಗಳಾದ ಆಲ್ ಜಾರ್ಖಂಡ್ ವಿದ್ಯಾರ್ಥಿ ಸಂಘ (ಎಜೆಎಸ್‌ಯು) 10, ಜನತಾ ದಳ (ಯುನೈಟೆಡ್) ಎರಡರಲ್ಲಿ ಮತ್ತು ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಒಂದರಲ್ಲಿ ಸ್ಪರ್ಧಿಸಿತ್ತು.

ಇದನ್ನೂ ಓದಿ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ, ದೇವೇಂದ್ರ ಫಡ್ನವಿಸ್ ಹೇಳಿದ್ದೇನು?

ಜಾರ್ಖಂಡ್ ಚುನಾವಣೆಯಲ್ಲಿ ಭಾರೀ ಗೆಲುವಿಗಾಗಿ ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ಹೇಮಂತ್ ಸೊರೆನ್ ಅವರನ್ನು ಅಭಿನಂದಿಸಿದ್ದಾರೆ. “JMM ಮತ್ತು ಅದರ ಮಿತ್ರಪಕ್ಷಗಳು ಜಾರ್ಖಂಡ್‌ನಲ್ಲಿ ಪ್ರಭಾವಶಾಲಿ ವಿಜಯವನ್ನು ಗಳಿಸಿವೆ. ಈ ಸಾಧನೆಗಾಗಿ ಹೇಮಂತ್ ಸೊರೇನ್ ಮತ್ತು ಅವರ ಇಡೀ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಜಾರ್ಖಂಡ್ ಪ್ರಗತಿ ಮತ್ತು ಅಭಿವೃದ್ಧಿಯ ಪಥವನ್ನು ಪ್ರಾರಂಭಿಸುತ್ತದೆ ಎಂದು ನನಗೆ ವಿಶ್ವಾಸವಿದೆ” ಎಂದು ಅವರು ಹೇಳಿದ್ದಾರೆ.

ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ 39,791 ಮತಗಳ ಅಂತರದಿಂದ ಸ್ಥಾನವನ್ನು ಗೆದ್ದಿದ್ದಾರೆ. ಹೇಮಂತ್ ಸೊರೆನ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಗಮ್ಲಿಯೆಲ್ ಹೆಂಬ್ರೋಮ್ ವಿರುದ್ಧ ಸತತ ಮೂರನೇ ಗೆಲುವು ಸಾಧಿಸಲು ಹೋರಾಡಿದರು. ಸೋರೆನ್ 95,612 ಮತಗಳನ್ನು ಪಡೆದರೆ, ಹೆಂಬ್ರೋಮ್ 55,821 ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: ಇಂದು ಜಾರ್ಖಂಡ್, ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ

ಜಾರ್ಖಂಡ್ ರಾಜ್ಯದ ಎಲ್ಲಾ 81 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಿತು. ಜಾರ್ಖಂಡ್‌ನಲ್ಲಿ ಎರಡೂ ಹಂತಗಳಲ್ಲಿ ಶೇ.67.74ರಷ್ಟು ಮತದಾನವಾಗಿದ್ದು, ಎರಡನೇ ಹಂತದಲ್ಲಿ ಶೇ.68.95ರಷ್ಟು ಮತದಾನವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು