ಅಫ್ಘಾನ್​ ನಿರಾಶ್ರಿತರಿಗೆ ಅಗತ್ಯ ನೆರವು ನೀಡೋಣ, ಹಿಂದು-ಸಿಖ್​​ ಸಮುದಾಯಕ್ಕೂ ಸಹಾಯ ಮಾಡೋಣ: ಪಿಎಂ ಮೋದಿ

ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆ ಸಂಬಂಧ ಇನ್ನೂ ಪ್ರಧಾನಿ ನರೇಂದ್ರ ಮೋದಿ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಆದರೆ ನಿನ್ನೆ ತಡರಾತ್ರಿವರೆಗೂ ವಿವಿಧ ಸಚಿವರು, ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಫ್ಘಾನ್​ ನಿರಾಶ್ರಿತರಿಗೆ ಅಗತ್ಯ ನೆರವು ನೀಡೋಣ, ಹಿಂದು-ಸಿಖ್​​ ಸಮುದಾಯಕ್ಕೂ ಸಹಾಯ ಮಾಡೋಣ: ಪಿಎಂ ಮೋದಿ
ಭದ್ರತಾ ಸಂಪುಟ ಸಮಿತಿ ಸಭೆ ನಡೆಸಿದ ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Aug 18, 2021 | 10:52 AM

ಅಫ್ಘಾನಿಸ್ತಾನವೀಗ ತಾಲೀಬಾನ್​ ವಶವಾಗಿದೆ. ಅಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಮರಳಿ ಕರೆದುಕೊಂಡು ಬರುವುದು ದೊಡ್ಡ ಸವಾಲಿನ ಕೆಲಸವಾಗಿದ್ದರೂ, ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿದೆ. ಅಫ್ಘಾನ್​​ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿಯನ್ನೂ ಪ್ರಾರಂಭಿಸಿದೆ. ಅಫ್ಘಾನಿಸ್ತಾನದಲ್ಲಿ ಇಷ್ಟೆಲ್ಲ ದೊಡ್ಡ ಬೆಳವಣಿಗೆಗಳಾಗುತ್ತಿದ್ದರೂ, ಈಗಾಗಲೇ ಹಲವು ದೇಶಗಳ ನಾಯಕರು ಪ್ರತಿಕ್ರಿಯಿಸಿದ್ದರೂ ಭಾರತದ ಪ್ರಧಾನಿ ನರೇಂದ್ರ ಮೋದಿ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಆದರೆ ನಿನ್ನೆ ಅಫ್ಘಾನ್​ ಬೆಳವಣಿಗೆ ಸಂಬಂಧ ಭದ್ರತಾ ಸಂಪುಟ ಸಮಿತಿ (CCS)ಯ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಅಫ್ಘಾನಿಸ್ತಾನದಲ್ಲಿ ಇರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಿ ಮತ್ತು ನಿರಾಶ್ರಿತರಾಗಿ, ಭಾರತದ ನೆರವು ಬಯಸುತ್ತಿರುವ ಅಫ್ಘಾನ್​ ಸಹೋದರ, ಸೋದರಿಯರ ಸಹಾಯಕ್ಕೆ ನಿಲ್ಲಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆಯೊಂದೇ ನಮ್ಮ ಉದ್ದೇಶವಾಗಿರಬಾರದು. ಇದೀಗ ನಿರಾಶ್ರಿತರಾಗಿ, ಭಾರತಕ್ಕೆ ಬರಲು ಇಚ್ಛಿಸುತ್ತಿರುವ ಅಲ್ಲಿನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್​ ಸಮುದಾಯವನ್ನೂ ನಾವು ಸುರಕ್ಷಿತ ಮಾಡಬೇಕು. ಅದರೊಂದಿಗೆ ಅಫ್ಘಾನ್​​ ಜನರಿಗೂ ನಮ್ಮ ಕೈಲಾದ ನೆರವು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಭೆಯಲ್ಲಿ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಅಫ್ಘಾನಿಸ್ತಾನದ ಕಾಬೂಲ್​​ನಲ್ಲಿದ್ದ ಭಾರತೀಯ ರಾಯಭಾರಿ ರುದ್ರೇಂದ್ರ ಟಂಡನ್​ ಸೇರಿ, ಧೂತಾವಾಸ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 140 ಸಿಬ್ಬಂದಿ, ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​​, ನಾಲ್ವರು ಭಾರತೀಯ ಮಾಧ್ಯಮ ಸಿಬ್ಬಂದಿ ನಿನ್ನೆ ಸಂಜೆ ಹೊತ್ತಿಗೆ ಕಾಬೂಲ್​​ನಿಂದ ದೆಹಲಿಗೆ ಬಂದಿದ್ದಾರೆ. ರಾಯಭಾರಿ ರುದ್ರೇಂದ್ರ ಟಂಡನ್​ ಅವರು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದ ಭದ್ರತಾ ಸಂಪುಟ ಸಮಿತಿ ಸಭೆಯಲ್ಲೂ ಪಾಲ್ಗೊಂಡು, ಅಫ್ಘಾನ್​ ಪರಿಸ್ಥಿತಿಯ ಬಗ್ಗೆ ಮೋದಿಯವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್​, ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜಯಶಂಕರ್​, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿ ಇನ್ನೂ ಹಲವು ಪ್ರಮುಖರು ಇದ್ದರು. ಸಭೆಯಲ್ಲಿ ಅಪ್ಘಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಭದ್ರತಾ ಸಂಪುಟ ಸಮಿತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಎಲ್ಲ ರೀತಿಯ ಮಾಹಿತಿಯನ್ನೂ ನೀಡಿದೆ.

ಇದನ್ನೂ ಓದಿ: ಶನಿ ಗ್ರಹದಂತೆ ಕಂಡ ಚಂದ್ರ! ಅಚ್ಚರಿಯ ವಿದ್ಯಮಾನದ ಈ ಚಿತ್ರವನ್ನು ನೋಡಿ

Alia Bhatt: ಚಿತ್ರೀಕರಣದ ಸೆಟ್​ಗೆ ರಿಕ್ಷಾದಲ್ಲಿ ಬಂದ ಆಲಿಯಾ; ಅದೇನು ದೊಡ್ಡ ವಿಷಯ ಅಲ್ಲ ಎಂದು ಕುಟುಕಿದ ನೆಟ್ಟಿಗರು

Published On - 10:28 am, Wed, 18 August 21

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ