AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಜೊತೆ ನಾವಿದ್ದೇವೆ; ಪಹಲ್ಗಾಮ್ ಉಗ್ರರ ದಾಳಿಗೆ ಅಮೆರಿಕ, ರಷ್ಯಾ ಖಂಡನೆ

ಭಯೋತ್ಪಾದನೆ ವಿರುದ್ಧ ಭಾರತದೊಂದಿಗೆ ಅಮೆರಿಕ ಬಲವಾಗಿ ನಿಂತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೇ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಇದೊಂದು "ಕ್ರೂರ ಅಪರಾಧ, ಇದಕ್ಕೆ ಯಾವುದೇ ಸಮರ್ಥನೆ ಇಲ್ಲ" ಎಂದಿದ್ದಾರೆ.

ಭಾರತದ ಜೊತೆ ನಾವಿದ್ದೇವೆ; ಪಹಲ್ಗಾಮ್ ಉಗ್ರರ ದಾಳಿಗೆ ಅಮೆರಿಕ, ರಷ್ಯಾ ಖಂಡನೆ
Trump Modi
ಸುಷ್ಮಾ ಚಕ್ರೆ
|

Updated on: Apr 22, 2025 | 11:10 PM

Share

ನವದೆಹಲಿ, ಏಪ್ರಿಲ್ 22: ಇಂದು ಮಧ್ಯಾಹ್ನದ ವೇಳೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terrorists Attack) ಉಗ್ರರ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ 26ಕ್ಕೂ ಹೆಚ್ಚು ಪ್ರವಾಸಿಗರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ ಎಂಬ ಕಾರಣಕ್ಕೆ ಭಾರತದೊಂದಿಗೆ ಒಗ್ಗಟ್ಟಿನ ಸಂದೇಶವನ್ನು ಕಳುಹಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ಭಯೋತ್ಪಾದನೆಯ ವಿರುದ್ಧ ನಾವು ಗಟ್ಟಿಯಾಗಿ ನಿಲ್ಲುತ್ತೇವೆ ಎಂದು ಒತ್ತಿ ಹೇಳಿದ್ದಾರೆ.

“ಕಾಶ್ಮೀರದಲ್ಲಿ ಇಂದು ನಡೆದ ಘಟನೆ ತೀವ್ರ ಆತಂಕಕಾರಿ ಸುದ್ದಿಯಾಗಿದೆ. ಭಯೋತ್ಪಾದನೆಯ ವಿರುದ್ಧ ಅಮೆರಿಕ ಭಾರತದೊಂದಿಗೆ ಬಲವಾಗಿ ನಿಂತಿದೆ. ಮೃತಪಟ್ಟವರ ಆತ್ಮಗಳಿಗೆ ಮತ್ತು ಗಾಯಗೊಂಡವರ ಚೇತರಿಕೆಗಾಗಿ ನಾವು ಪ್ರಾರ್ಥಿಸುತ್ತೇವೆ. ಪ್ರಧಾನಿ ಮೋದಿ ಮತ್ತು ಭಾರತದ ಪ್ರೀತಿಯ ಜನರಿಗೆ ನಮ್ಮ ಸಂಪೂರ್ಣ ಬೆಂಬಲ ಮತ್ತು ಸಹಾನುಭೂತಿ ಇದೆ. ನಾವು ನಿಮ್ಮೊಂದಿಗೆ ಇದ್ದೇವೆ!” ಎಂದು ಡೊನಾಲ್ಡ್ ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
Image
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

Trump Message

ಇದನ್ನೂ ಓದಿ: Pahalgam Attack: ಭೂಲೋಕದ ಸ್ವರ್ಗ ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಇಂದು ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಬೃಹತ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ.

“ಈ ಕ್ರೂರ ಅಪರಾಧಕ್ಕೆ ಯಾವುದೇ ಸಮರ್ಥನೆ ಇಲ್ಲ. ಇದನ್ನು ಮಾಡಿದವರು ಅರ್ಹವಾದ ಶಿಕ್ಷೆಯನ್ನು ಅನುಭವಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ” ಎಂದು ರಷ್ಯಾದ ಅಧ್ಯಕ್ಷರು ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Pahalgam Attack: ದುಷ್ಟರ ಉದ್ದೇಶವೆಂದೂ ಯಶಸ್ವಿಯಾಗದು; ಪಹಲ್ಗಾಮ್ ದಾಳಿಗೆ ಮೋದಿ ಖಂಡನೆ

“ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಹೋರಾಡುವಲ್ಲಿ ಭಾರತೀಯ ಪಾಲುದಾರರೊಂದಿಗೆ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ನಮ್ಮ ಬದ್ಧತೆಯನ್ನು ನಾನು ಪುನರುಚ್ಚರಿಸಲು ಬಯಸುತ್ತೇನೆ. ದಯವಿಟ್ಟು ಮೃತರ ಆತ್ಮೀಯರಿಗೆ ನಮ್ಮ ಸಂತಾಪ ತಿಳಿಸಿ ಹಾಗೂ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?