ಗಂಭೀರವಾಗಿ ಪರಿಗಣಿಸಿದ್ದೇವೆ; ಭಾರತೀಯ ರಾಯಭಾರಿ ಕ್ವಾತ್ರಾ ವಿರುದ್ಧ ಉಗ್ರ ಪನ್ನುನ್ ಬೆದರಿಕೆ ಕುರಿತು ಎಂಇಎ ಎಚ್ಚರಿಕೆ
ಅಮೆರಿಕದ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ವಿರುದ್ಧ ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ ಹಾಕಿರುವ ಕುರಿತು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ನಾವು ಈ ಬೆದರಿಕೆಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಾವು ಇದನ್ನು ಯುಎಸ್ ಸರ್ಕಾರದೊಂದಿಗೆ ಪ್ರಸ್ತಾಪಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ನವದೆಹಲಿ: ಅಮೆರಿಕದಲ್ಲಿನ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ವಿರುದ್ಧ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ನೀಡಿರುವ ಬೆದರಿಕೆಗಳನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಅಮೆರಿಕದಲ್ಲಿನ ಭಾರತೀಯ ರಾಯಭಾರಿ ವಿರುದ್ಧ ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಅವರು ಹೊರಡಿಸಿರುವ ಬೆದರಿಕೆಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಇಂದು ಮಾಧ್ಯಮಗೋಷ್ಠಿ ನಡೆಸಿದ್ದಾರೆ.
#WATCH | Delhi: On threats issued by Sikh separatist Gurpatwant Singh against Indian Ambassador to the U.S, Vinay Mohan Kwatra, MEA Spokesperson Randhir Jaiswal says, “…We take the threats very seriously and we raise it with the US government. In this case, also, we have raised… pic.twitter.com/4LR4dHgN8m
— ANI (@ANI) December 20, 2024
ವಿನಯ್ ಮೋಹನ್ ಕ್ವಾತ್ರಾ ಅವರು ಬೆದರಿಕೆಗಳನ್ನು ಭಾರತವು ಗಂಭೀರವಾಗಿ ಪರಿಗಣಿಸುತ್ತದೆ. ಅದನ್ನು ಯುಎಸ್ ಸರ್ಕಾರದೊಂದಿಗೆ ಪ್ರಸ್ತಾಪಿಸಿದೆ ಎಂದು ಹೇಳಿದ್ದಾರೆ. ಅಮೆರಿಕ ಸರ್ಕಾರ ನಮ್ಮ ಕಳವಳಗಳನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಭಾರತ ನಿರೀಕ್ಷಿಸುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ರಾಮ ಮಂದಿರದ ಮೇಲೆ ದಾಳಿ ನಡೆಸುವುದಾಗಿ ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ
ಈ ಹಿಂದೆ, ಪನ್ನುನ್ ಭಾರತೀಯ ರಾಯಭಾರಿ ಕ್ವಾತ್ರಾ ವಿರುದ್ಧ ಬೆದರಿಕೆ ಹಾಕಿದ್ದರು. ಅವರು ಅಮೆರಿಕದಲ್ಲಿ ಖಲಿಸ್ತಾನ್ ಪರ ಸಿಖ್ಖರ ರಾಡಾರ್‌ನಲ್ಲಿದ್ದಾರೆ ಎಂದು ಹೇಳಿದ್ದಾರೆ. ಉತ್ತರ ಅಮೆರಿಕಾದಲ್ಲಿ ಖಲಿಸ್ತಾನಿ ಚಟುವಟಿಕೆಗಳನ್ನು ಎದುರಿಸಲು ರಷ್ಯಾದ ರಾಜತಾಂತ್ರಿಕರೊಂದಿಗೆ ಸಮನ್ವಯ ಸಾಧಿಸುವಲ್ಲಿ ಕ್ವಾತ್ರಾ ತೊಡಗಿಸಿಕೊಂಡಿದ್ದಾರೆ ಎಂದು ಪನ್ನುನ್ ಆರೋಪಿಸಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ