AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಮಾತುಕತೆಯ ಬದಲು ಪ್ರತೀಕಾರ; ಪಾಕಿಸ್ತಾನದ ವಿರುದ್ಧ ಫಾರೂಕ್ ಅಬ್ದುಲ್ಲಾ ಕಟು ಸಂದೇಶ

ಕಾಶ್ಮೀರದ ಪಹಲ್ಗಾಮ್ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿರುವ ಫಾರೂಕ್ ಅಬ್ದುಲ್ಲಾ, ‘ಈ ರೀತಿಯ ದಾಳಿಗಳು ಮುಂದೆ ಎಂದಿಗೂ ಸಂಭವಿಸದಂತಹ ಕ್ರಮಗಳನ್ನು ಭಾರತ ಕೈಗೊಳ್ಳಬೇಕೆಂದು ಬಯಸುತ್ತೇವೆ’ ಎಂದಿದ್ದಾರೆ. 'ಎರಡು ರಾಷ್ಟ್ರ' ಸಿದ್ಧಾಂತವನ್ನು ಕಾಶ್ಮೀರ 1947ರಲ್ಲೇ ತಿರಸ್ಕರಿಸಿತ್ತು. ಮಾತುಕತೆಗೆ ಒಲವು ತೋರುವ ಬದಲು, ಈ ಬಾರಿ ಬಲವಾದ ಪ್ರತೀಕಾರದ ಅಗತ್ಯವಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಕರೆ ನೀಡಿದ್ದಾರೆ.

ಈ ಬಾರಿ ಮಾತುಕತೆಯ ಬದಲು ಪ್ರತೀಕಾರ; ಪಾಕಿಸ್ತಾನದ ವಿರುದ್ಧ ಫಾರೂಕ್ ಅಬ್ದುಲ್ಲಾ ಕಟು ಸಂದೇಶ
Farooq Abdullah
ಸುಷ್ಮಾ ಚಕ್ರೆ
|

Updated on: Apr 28, 2025 | 5:53 PM

Share

ಶ್ರೀನಗರ, ಏಪ್ರಿಲ್ 28: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah) ಪಾಕಿಸ್ತಾನಕ್ಕೆ ತಕ್ಕ ಉತ್ತರವನ್ನು ನೀಡಿದ್ದಾರೆ. ದೇಶದ ಹಳೆಯ ‘ಎರಡು ರಾಷ್ಟ್ರ’ ಸಿದ್ಧಾಂತವನ್ನು ಕಾಶ್ಮೀರವು 1947ರಲ್ಲೇ ತಿರಸ್ಕರಿಸಿತು. “ನಮ್ಮ ನೆರೆಹೊರೆಯವರು ಇಂದಿಗೂ ಸಹ ಮಾನವೀಯತೆಯನ್ನು ಕೊಲೆ ಮಾಡಿದ್ದಾರೆಂದು ಅರ್ಥಮಾಡಿಕೊಳ್ಳದಿರುವುದು ನಮಗೆ ವಿಷಾದ ತಂದಿದೆ. ಹೀಗೆ ಮಾಡುವುದರಿಂದ ನಾವು ಪಾಕಿಸ್ತಾನದ ಜೊತೆ ಸೇರುತ್ತೇವೆ ಎಂದು ಅವರು ಭಾವಿಸಿದರೆ, ನಾವು ಅವರ ತಪ್ಪು ತಿಳುವಳಿಕೆಯನ್ನು ಅವರಿಗೆ ಅರ್ಥ ಮಾಡಿಸಬೇಕಾಗಿದೆ. 1947ರಲ್ಲಿ ನಾವು ಅವರೊಂದಿಗೆ ಹೋಗಲಿಲ್ಲ ಅಂದಮೇಲೆ ಇಂದು ಏಕೆ ಹೋಗುತ್ತೇವೆ? ಆ ಸಮಯದಲ್ಲಿ ನಾವು ಎರಡು ರಾಷ್ಟ್ರ ಸಿದ್ಧಾಂತವನ್ನು ನೀರಿಗೆ ಎಸೆದಿದ್ದೇವೆ. ಇಂದು ಕೂಡ ನಾವು ಎರಡು ರಾಷ್ಟ್ರ ಸಿದ್ಧಾಂತವನ್ನು ಸ್ವೀಕರಿಸಲು ಸಿದ್ಧರಿಲ್ಲ. ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ನಾವೆಲ್ಲರೂ ಒಂದೇ” ಎಂದು ಫಾರೂಕ್ ಅಬ್ದುಲ್ಲಾ ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾನು ಪ್ರತಿ ಬಾರಿಯೂ ಪಾಕಿಸ್ತಾನದೊಂದಿಗೆ ಮಾತುಕತೆಗೆ ಒಲವು ತೋರುತ್ತಿದ್ದೆ. ಆದರೆ, ಈ ಬಾರಿ ಪಹಲ್ಗಾಮ್ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾವು ಹೇಗೆ ಉತ್ತರಿಸುವುದು? ನಾವು ಅವರಿಗೆ ನ್ಯಾಯ ನೀಡಬೇಕಿದೆ. ಇಂದು ಭಾರತ ದೇಶವು ಇಂತಹ ದಾಳಿಗಳು ಮತ್ತೆಂದೂ ಸಂಭವಿಸದಂತೆ ಕ್ರಮ ಕೈಗೊಳ್ಳಬೇಕೆಂದು ಬಯಸುತ್ತಿದೆ” ಎಂದು ಫಾರೂಲ್ ಅಬ್ದುಲ್ಲಾ ಹೇಳಿರುವುದಾಗಿ ANI ವರದಿ ಮಾಡಿದೆ.

ಇದನ್ನೂ ಓದಿ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Image
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಇದನ್ನೂ ಓದಿ: ಪಾಕಿಸ್ತಾನಕ್ಕೆ ಭೇಟಿ ನೀಡಬೇಡಿ; ಕಾಶ್ಮೀರದ ಉಗ್ರರ ದಾಳಿ ಬಳಿಕ ತನ್ನ ಪ್ರಜೆಗಳಿಗೆ ರಷ್ಯಾ ಎಚ್ಚರಿಕೆ

ಇಂದು ಮುಂಜಾನೆ, ಪಹಲ್ಗಾಮ್ ದಾಳಿಯನ್ನು ಉದ್ದೇಶಿಸಿ ಮಾತನಾಡಲು ಫಾರೂಕ್ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ಭಾಗವಹಿಸಿದ್ದರು. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಏನು “ಉತ್ತರ” ನೀಡಬೇಕೆಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನೇ ಪ್ರಶ್ನಿಸಬೇಕು ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸುವ ನಿರ್ಣಯವನ್ನು ಮಂಡಿಸಿದರು ಮತ್ತು ಭದ್ರತೆಯ ಸಂಪುಟ ಸಮಿತಿಯ ಸಭೆಯ ನಂತರ ಕೇಂದ್ರ ಸರ್ಕಾರ ಘೋಷಿಸಿದ ರಾಜತಾಂತ್ರಿಕ ಕ್ರಮಗಳನ್ನು ಅನುಮೋದಿಸಿದರು.

ಇದನ್ನೂ ಓದಿ: ಪಹಲ್ಗಾಮ್ ಭಯೋತ್ಪಾದನಾ ದಾಳಿಯಲ್ಲಿ ಪಾಕಿಸ್ತಾನದ ಜೊತೆ ಕೈ ಜೋಡಿಸಿತಾ ಚೀನಾ?

ಪಹಲ್ಗಾಮ್‌ನಲ್ಲಿ ನಡೆದ ದಾಳಿಯು 2019ರ ಪುಲ್ವಾಮಾ ದಾಳಿಯ ನಂತರ ಕಾಶ್ಮೀರ ಕಣಿವೆಯಲ್ಲಿ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಒಂದಾಗಿದೆ. ಪುಲ್ವಾಮಾ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಸಾವನ್ನಪ್ಪಿದ್ದರು. ಪಹಲ್ಗಾಮ್ ದಾಳಿಯಲ್ಲಿ 26 ಜನ ಮೃತಪಟ್ಟಿದ್ದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸಿದ್ದಕ್ಕಾಗಿ ಪಾಕಿಸ್ತಾನದ ವಿರುದ್ಧ ಭಾರತ ಬಲವಾದ ಕ್ರಮಗಳನ್ನು ತೆಗೆದುಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್