ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ: ಕುಸ್ತಿಪಟುಗಳಿಗೆ ಕಪಿಲ್ ದೇವ್ ನೇತೃತ್ವದ 1983 ಚಾಂಪಿಯನ್ಸ್ ತಂಡದ ಸದಸ್ಯರ ಕಿವಿಮಾತು

ನಮ್ಮ ಚಾಂಪಿಯನ್ ಕುಸ್ತಿಪಟುಗಳನ್ನು ಅಮಾನುಷವಾಗಿ ನಡೆಸುತ್ತಿರುವ ದೃಶ್ಯಗಳಿಂದ ನಾವು ದುಃಖಿತರಾಗಿದ್ದೇವೆ ಮತ್ತು ವಿಚಲಿತರಾಗಿದ್ದೇವೆ. ಅವರು ಕಷ್ಟಪಟ್ಟು ಗಳಿಸಿದ ಪದಕಗಳನ್ನು ಗಂಗಾ ನದಿಗೆ ಎಸೆಯಲು ಯೋಚಿಸುತ್ತಿದ್ದಾರೆ ಎಂದು ನಾವು ಹೆಚ್ಚು ಕಳವಳಗೊಂಡಿದ್ದೇವೆ ಎಂದು 1983 ರ ವಿಶ್ವಕಪ್ ವಿಜೇತ ತಂಡ ಹೇಳಿಕೆ ಬಿಡುಗಡೆ ಮಾಡಿದೆ.

ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ: ಕುಸ್ತಿಪಟುಗಳಿಗೆ ಕಪಿಲ್ ದೇವ್ ನೇತೃತ್ವದ 1983 ಚಾಂಪಿಯನ್ಸ್ ತಂಡದ ಸದಸ್ಯರ ಕಿವಿಮಾತು
ಕಪಿಲ್ ದೇವ್
Follow us
ರಶ್ಮಿ ಕಲ್ಲಕಟ್ಟ
|

Updated on: Jun 02, 2023 | 5:24 PM

ದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್  (Brij Bhushan Sharan Singh)ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು (Wrestler’s protest) ಯಾವುದೇ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ ಎಂದು 1983 ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಸದಸ್ಯರು ಹೇಳಿದ್ದಾರೆ. ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಹೋರಾಟದಲ್ಲಿ ನ್ಯಾಯ ಸಿಗುತ್ತಿಲ್ಲ ಎಂದು ನೊಂದು ತಾವು ಗಳಿಸಿದ ಪದಕಗಳನ್ನು ಗಂಗಾ ನದಿಯಲ್ಲಿ ಬಿಸಾಡುವುದಾಗಿ ಕುಸ್ತಿಪಟುಗಳು ಘೋಷಿಸಿದ್ದರು. ಗಂಗಾ ನದಿಯಲ್ಲಿ ಪದಕಗಳನ್ನು ಬಿಡಲು ಹೋಗಿದ್ದ ಕ್ರೀಡಾಪಟುಗಳನ್ನು ಆ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದು ರೈತ ನಾಯಕ ನರೇಶ್ ಟಿಕಾಯತ್.

ಮಹಿಳಾ ಕುಸ್ತಿಪಟುಗಳ ಲೈಂಗಿಕ ಶೋಷಣೆ ಆರೋಪದ ಮೇಲೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಗಣ್ಯ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಮೇ 30 ರಂದು ತಮ್ಮ ಪ್ರತಿಭಟನೆಯನ್ನು ಹರಿದ್ವಾರಕ್ಕೆ ಸ್ಥಳಾಂತರಿಸಿದ್ದರು.

ನಮ್ಮ ಚಾಂಪಿಯನ್ ಕುಸ್ತಿಪಟುಗಳನ್ನು ಅಮಾನುಷವಾಗಿ ನಡೆಸುತ್ತಿರುವ ದೃಶ್ಯಗಳಿಂದ ನಾವು ದುಃಖಿತರಾಗಿದ್ದೇವೆ ಮತ್ತು ವಿಚಲಿತರಾಗಿದ್ದೇವೆ. ಅವರು ಕಷ್ಟಪಟ್ಟು ಗಳಿಸಿದ ಪದಕಗಳನ್ನು ಗಂಗಾ ನದಿಗೆ ಎಸೆಯಲು ಯೋಚಿಸುತ್ತಿದ್ದಾರೆ ಎಂದು ನಾವು ಹೆಚ್ಚು ಕಳವಳಗೊಂಡಿದ್ದೇವೆ ಎಂದು 1983 ರ ವಿಶ್ವಕಪ್ ವಿಜೇತ ತಂಡ ಹೇಳಿಕೆ ಬಿಡುಗಡೆ ಮಾಡಿದೆ. ಆ ಪದಕಗಳು ವರ್ಷಗಳ ಪ್ರಯತ್ನ, ತ್ಯಾಗ, ನಿರ್ಣಯ, ಮತ್ತು ಧೈರ್ಯವಅನ್ನು ಒಳಗೊಂಡಿವೆ. ಅವುಗಳು ಅವರದ್ದು ಮಾತ್ರವಲ್ಲ ರಾಷ್ಟ್ರದ ಹೆಮ್ಮೆ ಮತ್ತು ಸಂತೋಷ.ಈ ವಿಷಯದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ನಾವು ಅವರನ್ನು ಒತ್ತಾಯಿಸುತ್ತೇವೆ.ಅವರ ಕುಂದುಕೊರತೆಗಳನ್ನು ಆಲಿಸಿ ಶೀಘ್ರವಾಗಿ ಪರಿಹರಿಸಲಾಗುವುದು ಎಂದು ನಾವು ಭಾವಿಸುತ್ತೇವೆ. ನೆಲದ ಕಾನೂನು ಮೇಲುಗೈ ಸಾಧಿಸಲಿ ಎಂದು ಲೆಜೆಂಡರಿ ನಾಯಕ ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ತಂಡ ಮತ್ತು ಐಕಾನ್‌ಗಳು ಸೇರಿದಂತೆ ಸುನಿಲ್ ಗವಾಸ್ಕರ್ ಮತ್ತು ಮೊಹಿಂದರ್ ಅಮರನಾಥ್ ಮನವಿ ಮಾಡಿದ್ದಾರೆ.

ಅನುಮತಿಯಿಲ್ಲದೆ ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಿದ್ದಕ್ಕಾಗಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಬಂಧಿಸಿ, ಪ್ರತಿಭಟನಾ ಸ್ಥಳವನ್ನು ಪೊಲೀಸರು ಬಲವಂತವಾಗಿ ತೆರವುಗೊಳಿಸಿದ್ದರು.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಆರೋಪಗಳ ತನಿಖೆಯ ಫಲಿತಾಂಶಕ್ಕಾಗಿ ಕಾಯುವಂತೆ ಕುಸ್ತಿಪಟುಗಳಿಗೆ ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ಅವರು ಕ್ರೀಡಾಪಟುಗಳಿಗೆ ಭರವಸೆ ನೀಡಿದರು.

ಸಿಂಗ್ ವಿರುದ್ಧದ ಆರೋಪಗಳು ಅಂತಾರಾಷ್ಟ್ರೀಯ ಕಳವಳಕ್ಕೂ ಕಾರಣವಾಗಿವೆ. ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ತನಿಖೆಯಲ್ಲಿ ಫಲಿತಾಂಶಗಳ ಕೊರತೆ ಯನ್ನು ಟೀಕಿಸಿದ್ದು,45 ದಿನಗಳಲ್ಲಿ WFI ಗಾಗಿ ಹೊಸ ಚುನಾವಣೆಗಳನ್ನು ನಡೆಸಲು ಏಪ್ರಿಲ್‌ನಲ್ಲಿ ಮಾಡಿದ ಭರವಸೆಯನ್ನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ಗೆ ನೆನಪಿಸಿದೆ.

ಇದನ್ನೂ ಓದಿ: Wrestlers Protest: ಬ್ರಿಜ್​ ಭೂಷಣ್ ವಿರುದ್ಧ 2 ಎಫ್​ಐಆರ್​, ಕಿರುಕುಳ, ಕೆಟ್ಟ ಸ್ಪರ್ಶ ಸೇರಿದಂತೆ 10 ಆರೋಪಗಳು

ಅದೇ ವೇಳೆ ಸಿಂಗ್ ತಮ್ಮ ವಿರುದ್ದವಿರುವ ಆರೋಪಗಳನ್ನು ನಿರಾಕರಿಸುವುದನ್ನು ಮುಂದುವರೆಸಿದ್ದಾರೆ, ಪುರಾವೆ ಒದಗಿಸಿದರೆ ಯಾವುದೇ ತೀರ್ಪನ್ನು ಸ್ವೀಕರಿಸುವುದಾಗಿ ಒತ್ತಾಯಿಸಿದರು. ಗಂಗೆಯಲ್ಲಿ ಪದಕಗಳನ್ನು ಎಸೆಯುವುದರಿಂ ಬ್ರಿಜ್ ಭೂಷಣ್ ಅವರನ್ನು ಗಲ್ಲಿಗೇರಿಸುವುದಿಲ್ಲ. ನಿಮ್ಮ ಬಳಿ ಪುರಾವೆ ಇದ್ದರೆ ಅದನ್ನು ನ್ಯಾಯಾಲಯಕ್ಕೆ ನೀಡಿ ಮತ್ತು ನ್ಯಾಯಾಲಯವು ನನ್ನನ್ನು ಗಲ್ಲಿಗೇರಿಸಿದರೆ ನಾನು ಅದನ್ನು ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ