ಬಿಹಾರದಲ್ಲಿ ಜಾತಿ ಗಣತಿ ಬೇಕು ಎಂದು ಒತ್ತಾಯಿಸಿದ ನಿತೀಶ್ ಕುಮಾರ್; ದೇಶದಾದ್ಯಂತ ಬೇಕು ಎಂದ ತೇಜಸ್ವಿ ಯಾದವ್

Caste Census: ಸಭೆಯ ನಂತರ ಮಾತನಾಡಿದ ತೇಜಸ್ವಿ "ನಮ್ಮ ನಿಯೋಗವು ಇಂದು (ಬಿಹಾರ) ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಜಾತಿ ಗಣತಿಗಾಗಿ ಪ್ರಧಾನಿಯನ್ನು ಭೇಟಿ ಮಾಡಿದೆ. ನಾವು ಈಗ ಈ ಕುರಿತು ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

ಬಿಹಾರದಲ್ಲಿ ಜಾತಿ ಗಣತಿ ಬೇಕು ಎಂದು ಒತ್ತಾಯಿಸಿದ ನಿತೀಶ್ ಕುಮಾರ್; ದೇಶದಾದ್ಯಂತ ಬೇಕು ಎಂದ ತೇಜಸ್ವಿ ಯಾದವ್
ನಿತೀಶ್ ಕುಮಾರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 23, 2021 | 1:29 PM

ದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ( Nitish Kumar), ಆರ್‌ಜೆಡಿಯ ತೇಜಸ್ವಿ ಯಾದವ್ (Tejashwi Yadav), ಎಚ್‌ಎಎಮ್‌ನ ಜಿತನ್ ರಾಮ್ ಮಾಂಝಿ  ಮತ್ತು ವಿಐಪಿಯ ಮುಖೇಶ್ ಸಹಾನಿ ಸೇರಿದಂತೆ ಬಿಹಾರದ 10 ರಾಜಕೀಯ ಪಕ್ಷಗಳ ನಾಯಕರ ನಿಯೋಗವು ನವದೆಹಲಿಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಜಾತಿ ಆಧಾರಿತ ಜನಗಣತಿ (caste census) ನಡೆಸುವ ಕುರಿತು ಚರ್ಚಿಸಿದೆ. ” ನಿಯೋಗದ ಎಲ್ಲ ಸದಸ್ಯರ ಮಾತನ್ನು ಪ್ರಧಾನಿ ಆಲಿಸಿದರು. ನಾವು ಅದರ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿದ್ದೇವೆ ಮತ್ತು ಜಾತಿ ಗಣತಿ ಕುರಿತು ರಾಜ್ಯ ವಿಧಾನಸಭೆಯಲ್ಲಿ ಎರಡು ಬಾರಿ ನಿರ್ಣಯಗಳನ್ನು ಹೇಗೆ ಅಂಗೀಕರಿಸಲಾಗಿದೆ ಎಂಬುದರ ಕುರಿತು ನಾವು ಅವರಿಗೆ ತಿಳಿಸಿದ್ದೇವೆ ಎಂದು ನಿತೀಶ್ ಕುಮಾರ್ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸಭೆಯ ನಂತರ ಮಾತನಾಡಿದ ತೇಜಸ್ವಿ “ನಮ್ಮ ನಿಯೋಗವು ಇಂದು (ಬಿಹಾರ) ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಜಾತಿ ಗಣತಿಗಾಗಿ ಪ್ರಧಾನಿಯನ್ನು ಭೇಟಿ ಮಾಡಿದೆ. ನಾವು ಈಗ ಈ ಕುರಿತು ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

ಬಿಜೆಪಿ ಹೊರತುಪಡಿಸಿ ಬಿಹಾರದ ಎಲ್ಲಾ ಪಕ್ಷಗಳು 2021 ರ ಜನಗಣತಿಯಲ್ಲಿ ಜಾತಿ ಸಂಖ್ಯೆಗಳ ಎಣಿಕೆಗೆ ಬೇಡಿಕೆ ಇಟ್ಟಿವೆ. ಈ ಬೇಡಿಕೆಯನ್ನು ಪಾಲಿಸಲು ಕೇಂದ್ರ ಸರ್ಕಾರ ಇಲ್ಲಿಯವರೆಗೆ ನಿರಾಕರಿಸಿದ್ದರೆ, ಬಿಹಾರ ಉಪ ಸಿಎಂ ರೇಣು ದೇವಿ ಸೇರಿದಂತೆ ಕೆಲವು ಬಿಜೆಪಿ ಸದಸ್ಯರು ಜಾತಿ ಜನಗಣತಿಗೆ ಬೆಂಬಲ ನೀಡಿದ್ದಾರೆ.

ಈ ವಿಷಯವನ್ನು ಮತ್ತಷ್ಟು ಚರ್ಚಿಸಲು ನಿತೀಶ್ ಕುಮಾರ್ ಬಿಹಾರದಿಂದ 11 ಸದಸ್ಯರ ನಿಯೋಗದ ನೇತೃತ್ವ ವಹಿಸಿಕೊಂಡಿದ್ದಾರೆ. ಅಂದಹಾಗೆ ನಿತೀಶ್ ಮತ್ತು ತೇಜಸ್ವಿ ವೇದಿಕೆ ಹಂಚಿಕೊಳ್ಳುತ್ತಿರುವುದು ಇದೇ ಮೊದಲು. ಸಂವಿಧಾನ ತಿದ್ದುಪಡಿ ವಿಧೇಯಕದ ಮೇಲಿನ ಚರ್ಚೆಯಲ್ಲಿ ಜಾತಿ ಜನಗಣತಿ ಮತ್ತು ಶೇಕಡಾ 50 ಕ್ಕಿಂತ ಹೆಚ್ಚಿನ ಮೀಸಲಾತಿಗಳನ್ನು ತೆಗೆದುಕೊಳ್ಳುವ ಶಾಸನಗಳು ಸುಪ್ರೀಂಕೋರ್ಟ್ ತೀರ್ಪನ್ನು ಅತಿಕ್ರಮಿಸಲು ಮತ್ತು ರಾಜ್ಯಗಳಿಗೆ ತಮ್ಮದೇ ಆದ ಒಬಿಸಿ ಪಟ್ಟಿಗಳನ್ನು ರಚಿಸುವ ಹಕ್ಕನ್ನು ಮರುಸ್ಥಾಪಿಸಲು ಪ್ರಯತ್ನಿಸಿದವು.

ಜಾತಿ ಗಣತಿಗಾಗಿ ತೀವ್ರಗೊಳ್ಳುತ್ತಿರುವ ಬೇಡಿಕೆಯ ಬಗ್ಗೆ ಬಿಜೆಪಿ ಸಂದಿಗ್ಧ ಸ್ಥಿತಿಯಲ್ಲಿದೆ. ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಸರ್ಕಾರವು ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

“ಜಾತಿ ಆಧಾರಿತ ಜನಗಣತಿಯನ್ನು ನಡೆಸುವುದು ಬಿಹಾರದ ಬಹುಕಾಲದ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ನಾವು ಇಂದು ಪ್ರಧಾನಿಯನ್ನು ಭೇಟಿ ಮಾಡುತ್ತಿದ್ದೇವೆ” ಎಂದು ಎಚ್ಎಎಂ ಅಧ್ಯಕ್ಷ ಮತ್ತು ಮಾಜಿ ಬಿಹಾರ ಸಿಎಂ ಜಿತನ್ ರಾಮ್ ಮಾಂಝಿ ಹೇಳಿದ್ದಾರೆ.

ಇದನ್ನೂ ಓದಿ:  ಜಾತಿ ಆಧಾರಿತ ಜನಗಣತಿ ಕನಿಷ್ಠ ಒಮ್ಮೆ ಮಾಡಲೇಬೇಕು: ನಿತೀಶ್ ಕುಮಾರ್

ಇದನ್ನೂ ಓದಿ: School Reopening: ನಿಮ್ಮ ಹತ್ತಿರದ ಯಾವುದೇ ಶಾಲೆಗೆ ಹೋಗಿ ಪಾಠ ಕೇಳಿ; ವಲಸೆ ಮಕ್ಕಳಿಗೆ ಶಿಕ್ಷಣ ಸಚಿವರಿಂದ ಶುಭ ಸುದ್ದಿ

(We urged the PM to take an appropriate decision on caste census bihar CM Nitish Kumar )

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ