ಮಾಫಿಯಾಗಳಿಂದ ವಶಪಡಿಸಿಕೊಂಡ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಾಣ; ಸಿಎಂ ಯೋಗಿ ಘೋಷಣೆ

Yogi Adityanath: ಭೂ ಮಾಫಿಯಾಗಳ ನಿಯಂತ್ರಣದಲ್ಲಿದ್ದ ಭೂಮಿಯನ್ನು ಉತ್ತರ ಪ್ರದೇಶ ಸರ್ಕಾರ ವಶಪಡಿಸಿಕೊಂಡ ಬಗ್ಗೆ ಈ ವರ್ಷದ ಫೆಬ್ರವರಿಯಲ್ಲಿ ಯೋಗಿ ಆದಿತ್ಯನಾಥ್​, ವಿಧಾನಪರಿಷತ್​​ನಲ್ಲಿ ವಿವರಣೆ ನೀಡಿದ್ದರು.

ಮಾಫಿಯಾಗಳಿಂದ ವಶಪಡಿಸಿಕೊಂಡ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಾಣ; ಸಿಎಂ ಯೋಗಿ ಘೋಷಣೆ
ಸಿಎಂ ಯೋಗಿ ಆದಿತ್ಯನಾಥ್​
Follow us
TV9 Web
| Updated By: Lakshmi Hegde

Updated on: Aug 19, 2021 | 5:17 PM

ಲಖನೌ: ಮಾಫಿಯಾ(Mafia)ಗಳಿಂದ ವಶಪಡಿಸಿಕೊಳ್ಳಲಾದ ಭೂಮಿಗಳಲ್ಲಿ, ರಾಜ್ಯದ ಬಡವರು, ದಲಿತರಿಗೆ ಮನೆಗಳನ್ನು, ಸರ್ಕಾರದ ವತಿಯಿಂದಲೇ ಕಟ್ಟಿಸಿಕೊಡಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ (Uttar Pradesh Chief Minister) ಯೋಗಿ ಆದಿತ್ಯನಾಥ್ (Yogi Adityanath)​ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯೋಗಿ ಇಂಥದ್ದೊಂದು ಬಹುಮುಖ್ಯವಾದ ಘೋಷಣೆ ಪ್ರಕಟಿಸಿದ್ದಾರೆ.

ಭೂ ಮಾಫಿಯಾಗಳ ನಿಯಂತ್ರಣದಲ್ಲಿದ್ದ ಭೂಮಿಯನ್ನು ಉತ್ತರ ಪ್ರದೇಶ ಸರ್ಕಾರ ವಶಪಡಿಸಿಕೊಂಡ ಬಗ್ಗೆ ಈ ವರ್ಷದ ಫೆಬ್ರವರಿಯಲ್ಲಿ ಯೋಗಿ ಆದಿತ್ಯನಾಥ್​, ವಿಧಾನಪರಿಷತ್​​ನಲ್ಲಿ ವಿವರಣೆ ನೀಡಿದ್ದರು. ನಮ್ಮ ಬಿಜೆಪಿ ಸರ್ಕಾರ 2017ರಲ್ಲಿ ಅಧಿಕಾರಕ್ಕೆ ಬಂದ ನಂತರ ಇಲ್ಲಿಯವರೆಗೆ ಕಂದಾಯ ಇಲಾಖೆ ಸುಮಾರು 67,000 ಎಕರೆ ಭೂಮಿಯನ್ನು ಮಾಫಿಯಾ ಒಡೆತನದಿಂದ ಮುಕ್ತಗೊಳಿಸಿದೆ. ಹೀಗೆ ವಶಪಡಿಸಿಕೊಳ್ಳಲಾದ ಜಾಗದಲ್ಲಿ ಒಂದು ಕ್ರೀಡಾ ಮೈದಾನ ನಿರ್ಮಾಣ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದ್ದರು. ಅಂದು ಎಂಎಲ್​ಸಿ ಸುರೇಶ್​ ಕುಮಾರ್​ ತ್ರಿಪಾಠಿಯವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಯೋಗಿ ಆದಿತ್ಯನಾಥ್​, ಈ ಹಿಂದೆ ಅಧಿಕಾರದಲ್ಲಿದ್ದವರ ಸಹಾಯದಿಂದ ರಾಜ್ಯದಲ್ಲಿ ಅದೆಷ್ಟೋ ಎಕರೆಗಳಷ್ಟು ಸಾರ್ವಜನಿಕ ಮತ್ತು ಖಾಸಗಿ ಭೂಮಿಗಳನ್ನು ಮಾಫಿಯಾಗಳು ನಿಯಂತ್ರಣಕ್ಕೆ ತೆಗೆದುಕೊಂಡಿದ್ದವು. ಆ ಭೂಮಿಯನ್ನು ಮರಳಿ ಪಡೆಯಲೆಂದೇ ನಮ್ಮ ಸರ್ಕಾರ ಆ್ಯಂಟಿ ಭೂ ಮಾಫಿಯಾ ಟಾಸ್ಕ್​ ಫೋರ್ಸ್​ ರಚನೆ ಮಾಡಿತ್ತು. ಈ ಟಾಸ್ಕ್ ಫೋರ್ಸ್​ ತನ್ನ ಕೆಲಸದಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದ್ದರು.

ತಾಲಿಬಾನ್ ಬಗ್ಗೆ ಪ್ರತಿಕ್ರಿಯೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಉಗ್ರರ ಕೃತ್ಯದ ಬಗ್ಗೆ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್​, ನಮ್ಮ ದೇಶದ ಕೆಲವು ಪ್ರತಿಪಕ್ಷಗಳ ಮುಖಂಡು ನಾಚಿಕೆಯನ್ನು ಬಿಟ್ಟು, ತಾಲಿಬಾನ್​ ಉಗ್ರರನ್ನು ಬೆಂಬಲಿಸುತ್ತಿದ್ದಾರೆ. ಅದೇ ಬಾಯಲ್ಲಿ, ಮಹಿಳೆಯರ ಹಕ್ಕು, ಕಲ್ಯಾಣದ ಬಗ್ಗೆ ಮಾತನಾಡುತ್ತಾರೆ. ಇಂಥ ವ್ಯತಿರಿಕ್ತವಾಗಿ ಮಾತನಾಡುವವರ ಮನಸ್ಥಿತಿ ಈಗ ಹೊರಬರುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಬೇಗೂರು ಕೆರೆಯಲ್ಲಿ ಶಿವನ ಪತ್ರಿಮೆ ನಿರ್ಮಾಣ; ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಶ್ರಾವಣಕ್ಕೆ ಗ್ರಾಹಕರಿಗೆ ಕೆಎಂಎಫ್​ನಿಂದ ಸಿಹಿಸುದ್ದಿ; ಸದ್ಯ ಹಾಲಿನ ಬೆಲೆ ಏರಿಕೆಯಿಲ್ಲ; ಹೊಸ ಉತ್ಪನ್ನ ಬಿಡುಗಡೆ, ಇನ್ನಷ್ಟು ರಿಯಾಯಿತಿ

(We will build houses for poor on land confiscated from the mafia announced by CM Yogi Adityanath)

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್