ಭಾರತಕ್ಕೆ ತೈಲ ಪೂರೈಕೆ ಮುಂದುವರೆಸುತ್ತೇವೆ; ದೆಹಲಿಯಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಹೇಳಿಕೆ
ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, ಭಾರತ ನಿನ್ನೆ ಆಯೋಜಿಸಿದ್ದ ಔತಣಕೂಟಕ್ಕೆ ನನ್ನ ಧನ್ಯವಾದಗಳು. ನಾವಿಬ್ಬರೂ ಜಾಗತಿಕ ಹಾಗೂ ಸ್ಥಳೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಉಭಯ ರಾಷ್ಟ್ರಗಳ ಏಜೆನ್ಸಿಗಳು ಜೊತೆಗೂಡಿ ಕೆಲಸ ಮಾಡುತ್ತೇವೆ. 100 ಬಿಲಿಯನ್ ಡಾಲರ್ ವ್ಯಾಪಾರ ವೃದ್ಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪುಟಿನ್ ಇಂದು ರಾತ್ರಿ ಭಾರತ ಪ್ರವಾಸ ಮುಗಿಸಿ ರಷ್ಯಾಗೆ ಮರಳಲಿದ್ದಾರೆ.

ನವದೆಹಲಿ, ಡಿಸೆಂಬರ್ 5: ಭಾರತ ಪ್ರವಾಸಕ್ಕಾಗಿ ನಿನ್ನೆ (ಗುರುವಾರ) ದೆಹಲಿಗೆ ಆಗಮಿಸಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russia President Putin) ನಿನ್ನೆ ದೆಹಲಿಯ ಅಧಿಕೃತ ನಿವಾಸದಲ್ಲಿ ಪ್ರಧಾನಿ ಮೋದಿಯವರೊಂದಿಗೆ ಔತಣಕೂಟದಲ್ಲಿ ಭಾಗವಹಿಸಿದ್ದರು. ಇಂದು ಮೋದಿ ಹಾಗೂ ಪುಟಿನ್ ಇಬ್ಬರೂ ದ್ವಿಪಕ್ಷೀಯ ಸಭೆ ನಡೆಸಿದ್ದು, ದಿಆದ ನಂತರ ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ತೈಲ ಪೂರೈಕೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.
ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಉನ್ನತ ಮಟ್ಟದ ಸಭೆ ಮುಕ್ತಾಯಗೊಂಡಿದೆ. ಈ ಸಭೆಯ ಸಮಯದಲ್ಲಿ ಭಾರತ ಶಾಂತಿಯನ್ನು ಬೆಂಬಲಿಸುತ್ತದೆ ಮತ್ತು ಫೆಬ್ರವರಿ 2022ರಿಂದ ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಪರಿಹರಿಸಲು ಶಾಂತಿಯುತ ಪರಿಹಾರವನ್ನು ಆಶಿಸುತ್ತಿದೆ ಎಂದು ಪ್ರಧಾನಿ ಮೋದಿ ಪುಟಿನ್ ಅವರಿಗೆ ತಿಳಿಸಿದ್ದಾರೆ. ಅದಕ್ಕೆ ಉತ್ತರಿಸಿದ ಪುಟಿನ್, ರಷ್ಯಾ ಶಾಂತಿಯುತ ಪರಿಹಾರಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
#WATCH | Delhi | PM Narendra Modi and Russian President Vladimir Putin witness exchange of agreements between India and Russia
(Video source: DD) pic.twitter.com/GVsXPH7me1
— ANI (@ANI) December 5, 2025
ಇದನ್ನೂ ಓದಿ: ಭಾರತಕ್ಕೆ ಬಂದ ಗೆಳೆಯ ಪುಟಿನ್ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
“ರಷ್ಯಾದ ನಿಯೋಗಕ್ಕೆ ಆತ್ಮೀಯ ಮತ್ತು ಆತಿಥ್ಯದ ಸ್ವಾಗತಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ನನ್ನ ಆತ್ಮೀಯ ಸ್ನೇಹಿತ ಪ್ರಧಾನಿ ಮೋದಿ ಮತ್ತು ಭಾರತದ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಭೋಜನಕೂಟದಲ್ಲಿ ಪ್ರಧಾನಿ ಮೋದಿ ಅವರೊಂದಿಗಿನ ನನ್ನ ಮಾತುಕತೆಗಳು ನಮ್ಮ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಗೆ ಬಹಳ ಸಹಾಯಕವಾಗಿದ್ದವು” ಎಂದು ಪ್ರಧಾನಿ ಮೋದಿ ಅವರೊಂದಿಗಿನ ಪತ್ರಿಕಾಗೋಷ್ಠಿಯಲ್ಲಿ ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದ್ದಾರೆ.
Addressing the joint press meet with President Putin.@KremlinRussia_E https://t.co/ECjpvWj7CF
— Narendra Modi (@narendramodi) December 5, 2025
ಇದನ್ನೂ ಓದಿ: ಪ್ರಧಾನಿ ಮೋದಿ- ಪುಟಿನ್ ಗೆಳೆತನ 25 ವರ್ಷಕ್ಕೂ ಹಿಂದಿನದು; ವಾಜಪೇಯಿ ಜೊತೆಗಿನ ಫೋಟೋ ಮತ್ತೆ ವೈರಲ್
“ಭಾರತೀಯ ಮತ್ತು ಯುರೇಷಿಯನ್ ಆರ್ಥಿಕ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ವಲಯವನ್ನು ರಚಿಸುವುದರಿಂದ ರಷ್ಯಾದ ಭಾರತೀಯ ವಾಣಿಜ್ಯ ಸಂಪರ್ಕಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನಾವು ಈಗಾಗಲೇ ಇದಕ್ಕೆ ಅನುಗುಣವಾದ ಒಪ್ಪಂದದ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದೇವೆ” ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಇದಕ್ಕೂ ಮೊದಲು, ರಾಷ್ಟ್ರಪತಿ ಭವನದಲ್ಲಿ ಪುಟಿನ್ ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




