AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಎಲ್ಲ ಸಮಸ್ಯೆಗಳ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು: ನರೇಂದ್ರ ಸಿಂಗ್ ತೋಮರ್

ರೈತ ಚಳುವಳಿಕಾರರ ಜೊತೆ ಸಭೆ ನಡೆಸಲು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಘ್ ತೋಮರ್ ದೆಹಲಿಯ ವಿಜ್ಞಾನ ಭವನಕ್ಕೆ ಆಗಮಿಸಿದ್ದಾರೆ. ಇತ್ತ ರೈತರೂ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದು, ಬೇಡಿಕೆ ಈಡೇರಿಕೆಯೇ ನಮ್ಮ ಗುರಿ ಎಂದು ತಿಳಿಸಿದ್ದಾರೆ.

ರೈತರ ಎಲ್ಲ ಸಮಸ್ಯೆಗಳ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು: ನರೇಂದ್ರ ಸಿಂಗ್ ತೋಮರ್
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
guruganesh bhat
| Edited By: |

Updated on:Jan 04, 2021 | 1:32 PM

Share

ದೆಹಲಿ: ರೈತ ಚಳುವಳಿಯ 40ನೇ ದಿನ ನಡೆಯಲಿರುವ 7 ಸುತ್ತಿನ ಸಭೆಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಆಗಮಿಸಿದ್ದಾರೆ. ‘ಇಂದಿನ ಸಭೆಯಲ್ಲಿ ರೈತರ ಎಲ್ಲ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು’ ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಇಂದಿನ ಸಭೆಯಲ್ಲಿ ಬೇಡಿಕೆಗಳು ಈಡೇರದಿದ್ದರೆ ಜನವರಿ 6 ಮತ್ತು 26ರಂದು ಟ್ರ್ಯಾಕ್ಟರ್​  ಮೆರವಣಿಗೆ ಆಯೋಜಿಸುತ್ತೇವೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಜಂಟಿ ಕಾರ್ಯದರ್ಶಿ ಸುಖ್ವಿಂದರ್ ಎಸ್. ಸಬ್ರಾ ತಿಳಿಸಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್​ನ ಮಾಧ್ಯಮ ವಕ್ತಾರ ರಾಕೇಶ್ ಟಿಕಾಯತ್, ಈವರೆಗೆ 60 ರೈತರು ಮೃತರಾಗಿದ್ದು, ರೈತರ ಸಾವಿಗೆ ಕೇಂದ್ರ ಸರ್ಕಾರವೇ ಉತ್ತರದಾಯಿಯಾಗಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಹರಿಯಾಣ ಮುಖ್ಯಮಂತ್ರಿ ಖಟ್ಟರ್​  ಜನರಲ್  ಡೈಯರ್​ಗೆ  ಹೋಲಿಕೆ ಇಂದು ಬೆಳಗ್ಗೆ ದೆಹಲಿಯತ್ತ ಹೊರಟ ಹರಿಯಾಣದ ರೈತರ ಮೇಲೆ ಅಶ್ರವಾಯು ಪ್ರಯೋಗಿಸಿದ ಕುರಿತು ಆಮ್​ಆದ್ಮಿ ಪಕ್ಷ ಮುನಿಸಿಕೊಂಡಿದೆ. ಹರಿಯಾಣ ಮುಖ್ಯಮಂತ್ರಿ ಮೋಹನ್ ಲಾಲ್ ಖಟ್ಟರ್​ರನ್ನು ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಕಾರಣವಾದ ಜನರಲ್ ರೆಜಿನಾಲ್ಡ್ ಡೈಯರ್​ಗೆ ಆಮ್​ಆದ್ಮಿಯ ಮುಖಂಡ ರಾಘವ್ ಛಡ್ಡಾ ಹೋಲಿಸಿದ್ದಾರೆ. ರೈತರು ಸರ್ಕಾರದ ಶತ್ರುಗಳೇ ಎಂದು ಪ್ರಶ್ನಿಸಿರುವ ಅವರು, ಅವರು ನಮ್ಮ ದೇಶದ ರೈತರೇ ಹೊರತು ಚೀನಾ ಮತ್ತು ಪಾಕಿಸ್ತಾನದ ಸೈನಿಕರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Delhi Chalo: ಇಂದು 7ನೇ ಸುತ್ತಿನ ಸಭೆ; ಫಲಿತಾಂಶಕ್ಕೆ ಕಾದು ಕುಳಿತಿದೆ ಇಡೀ ದೇಶ

Published On - 1:32 pm, Mon, 4 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ