AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳಿಗಳನ್ನು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ; ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಭರವಸೆ

ಟಿಎಂಸಿಯ ಲೂಟಿ, ಸುಳ್ಳಿನ ರಾಜಕೀಯ ಹಾಗೂ ಅದರ ಭಯದ ಆಳ್ವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್‌ಪುರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭರವಸೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಪಕ್ಷಗಳ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದೆ.

ಬಂಗಾಳಿಗಳನ್ನು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ; ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಭರವಸೆ
Pm Modi In BengalImage Credit source: PTI
ಸುಷ್ಮಾ ಚಕ್ರೆ
|

Updated on:Apr 11, 2026 | 5:17 PM

Share

ಕೊಲ್ಕತ್ತಾ, ಏಪ್ರಿಲ್ 11: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ದಕ್ಷಿಣ ದಿನಾಜ್‌ಪುರ ಜಿಲ್ಲೆಯಲ್ಲಿ ಇಂದು ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಟಿಎಂಸಿಯ ಲೂಟಿ ಮತ್ತು ಸುಳ್ಳಿನ ರಾಜಕೀಯ, ಭಯದ ಆಳ್ವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಹೇಳಿದ್ದಾರೆ. ಹಾಗೇ, ಬಂಗಾಳಿಗಳು ಅಲ್ಪಸಂಖ್ಯಾತರಾಗಲು ಬಿಜೆಪಿ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ಟಿಎಂಸಿಗೆ ಯಾವುದೇ ಉದ್ದೇಶ ಅಥವಾ ನೀತಿ ಇಲ್ಲದ ಕಾರಣದಿಂದಾಗಿ ಇತರ ರಾಜ್ಯಗಳಲ್ಲಿ ಚುನಾವಣೆಗಳನ್ನು ಗೆಲ್ಲಲು ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ. ಟಿಎಂಸಿ ಬಿಜೆಪಿಯನ್ನು ನಿರಂತರವಾಗಿ ನಿಂದಿಸುತ್ತಿದೆ, ಸುಳ್ಳು ಹೇಳಿಕೆಗಳನ್ನು ನೀಡುತ್ತಿದೆ. ಆದರೆ, ಕಳೆದ 15 ವರ್ಷಗಳಲ್ಲಿ ಬಂಗಾಳದ ಅಭಿವೃದ್ಧಿಗಾಗಿ ಏನು ಮಾಡಿದೆ ಎಂದು ಹೇಳಲು ವಿಫಲವಾಗಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

“ಇದು ಭಯವನ್ನು ಸೋಲಿಸುವ ಯುದ್ಧ, ಇದು ನಂಬಿಕೆಯ ಮೇಲೆ ಬಂಗಾಳವನ್ನು ಮುನ್ನಡೆಸುವ ಯುದ್ಧ. ಟಿಎಂಸಿಯ ಭಯದ ಆಳ್ವಿಕೆಯು ಇನ್ನೇನು ಸ್ವಲ್ಪ ದಿನಗಳಲ್ಲಿ ಕೊನೆಗೊಳ್ಳುತ್ತಿದೆ. ಟಿಎಂಸಿಯ ಸುಳ್ಳುಗಳು ಮತ್ತು ಲೂಟಿಯ ಅಂಗಡಿ ಮುಚ್ಚಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ‘ಮಹಾ’ ಪ್ರಣಾಳಿಕೆ: ಮಹಿಳೆಯರಿಗೆ 3,000 ರೂ. ಮಾಸಾಶನ, 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

“ಪಶ್ಚಿಮ ಬಂಗಾಳದಲ್ಲಿ ಓಲೈಕೆ ರಾಜಕೀಯವನ್ನು ಶಾಶ್ವತವಾಗಿ ಕೊನೆಗೊಳಿಸಲು ಬಿಜೆಪಿ ಯುಸಿಸಿಯನ್ನು ಜಾರಿಗೆ ತರಲು ಸಂಕಲ್ಪಿಸಿದೆ. ಬಂಗಾಳದಲ್ಲಿ ಬಂಗಾಳಿಗಳು ಅಲ್ಪಸಂಖ್ಯಾತರಾಗಲು ನಾವು ಅವಕಾಶ ನೀಡುವುದಿಲ್ಲ” ಎಂದು ಮೋದಿ ಹೇಳಿದ್ದಾರೆ. ರಾಜ್ಯ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳೊಳಗೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ ಒಂದು ದಿನದ ನಂತರ ಮೋದಿಯ ಈ ಹೇಳಿಕೆಗಳು ಬಂದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Sat, 11 April 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ