Sonia Gandhi: ಕಾಂಗ್ರೆಸ್​ನ ನವ ಸಂಕಲ್ಪಗಳ ಬಗ್ಗೆ ಮಾಹಿತಿ ನೀಡಿದ ಸೋನಿಯಾ ಗಾಂಧಿ

| Updated By: ನಯನಾ ರಾಜೀವ್

Updated on: May 15, 2022 | 6:41 PM

Sonia Gandhi: ಕಾಂಗ್ರೆಸ್( Congres)​ಗೆ ಮರುಜೀವ ನೀಡುವ ಉದ್ದೇಶದಿಂದ ಗಾಂಧಿ ಜಯಂತಿ ದಿನದಂದು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತವನ್ನು ಒಗ್ಗೂಡಿಸುವ ಯಾತ್ರೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ( Sonia Gandhi) ತಿಳಿಸಿದ್ದಾರೆ.

Sonia Gandhi: ಕಾಂಗ್ರೆಸ್​ನ ನವ ಸಂಕಲ್ಪಗಳ ಬಗ್ಗೆ ಮಾಹಿತಿ ನೀಡಿದ ಸೋನಿಯಾ ಗಾಂಧಿ
Sonia Gandhi
Follow us on

ಕಾಂಗ್ರೆಸ್( Congres)​ಗೆ ಮರುಜೀವ ನೀಡುವ ಉದ್ದೇಶದಿಂದ ಗಾಂಧಿ ಜಯಂತಿ ದಿನದಂದು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತವನ್ನು ಒಗ್ಗೂಡಿಸುವ ಯಾತ್ರೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ( Sonia Gandhi) ತಿಳಿಸಿದ್ದಾರೆ.

ಉದಯಪುರದಲ್ಲಿ ಆರಮಭವಾದ ಕಾಂಗ್ರೆಸ್​ನ ಚಿಂತನಾ ಶಿಬಿರದ ಅಂತಿಮ ದಿನವಾದ ಇಂದು ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಹಿರಿಯರು ಕೂಡ ಯಾವುದೇ ಅವಕಾಶದಿಂದ ವಂಚಿತರಾಗದಂತೆ ನೋಡಿಕೊಳ್ಳುತ್ತೇವೆ ಎಂದರು.

ಉದಯಪುರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಚಿಂತನ ಶಿಬಿರ ಇಂದು ಅಂತ್ಯಗೊಂಡಿದ್ದು, ತಮ್ಮ ಶಿಬಿರದ ಕೊನೆಯಲ್ಲಿ ಸೋನಿಯಾಗಾಂಧಿ ಈ ಘೋಷಣೆಯನ್ನು ಮಾಡಿದ್ದಾರೆ.

2024ರ ಲೋಕಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಜೋಡಿಸುವ ನಿಟ್ಟಿನಲ್ಲಿ ಈ ಯಾತ್ರೆಯು ನಡೆಯಲಿದೆ. ಕೇಂದ್ರ ಸರ್ಕಾರದ ವಿವಿಧ ವೈಫಲ್ಯ ಹಾಗೂ ಕಾಂಗ್ರೆಸ್​ನ ಸಂಘಟನೆ ದೃಷ್ಟಿಯಿಂದ ಈ ಯಾತ್ರೆ ಪ್ರಮುಖವಾಗಿದೆ ಎಂದು ಸೋನಿಯಾ ಗಾಂಧಿ ಹೇಳಿಕೊಂಡಿದ್ದಾರೆ.

ಎಲ್ಲಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲೂ ಜನಜಾಗರಣ ಅಭಿಯಾನವೂ ಕೂಡ ನಡೆಯಲಿದೆ. ಪಕ್ಷದ ಸಾಕಷ್ಟು ಆಂತರಿಕ ವಿಚಾರ ಹಾಗೂ ಸಂಘಟನೆಯ ದೃಷ್ಟಿಯಿಂದ ವಿವಿಧ ಕಾರ್ಯಪಡೆಯನ್ನು ರಚಿಸಲು ನಿರ್ಧರಿಸಲಾಗಿದೆ. ಇನ್ನೆರಡು ಮೂರು ದಿನಗಳಲ್ಲಿ ಕಾರ್ಯಪಡೆಯನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಮೂರು ದಿನಗಳ ಶಿಬಿರವು ಒಬ್ಬರನ್ನೊಬ್ಬರು ಪರಿಚಯ ಮಾಡಿಕೊಳ್ಳಲು ನೆರವಾಗಿದೆ ಎಂದು ಹೇಳಿದ್ದಾರೆ. ಈ ಎಲ್ಲಾ ವಿಷಯಗಳ ಮೇಲೆ ಪಕ್ಷದ ನೀತಿ, ನಿಲುವು ಹೇಗಿರಬೇಕು ಎಂಬ ಕಾರ್ಯಸೂಚಿ ರೂಪಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರು ಸಮಿತಿಗಳನ್ನು ರಚನೆ ಮಾಡಿದ್ದರು. ಆ ಸಮಿತಿಗಳು ನವ ಸಂಕಲ್ಪ ಶಿಬಿರದಲ್ಲಿ ಕೂಲಂಕಷವಾಗಿ ಚರ್ಚೆ ಮಾಡಿ ನೀಡುವ ವರದಿ ಆಧರಿಸಿ ಮುಂದಿನ ತೀರ್ಮಾನ ಏನೆಂಬುದನ್ನು ತಿಳಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ