Weather Today: ಇಂದು ದೆಹಲಿ, ಉತ್ತರ ಪ್ರದೇಶದಲ್ಲಿ ತೀವ್ರ ಉಷ್ಣ ಅಲೆ; ದಕ್ಷಿಣ ಭಾರತ, ಸಿಕ್ಕಿಂ, ಬಂಗಾಳದಲ್ಲಿ ಭಾರೀ ಮಳೆ

Heatwave: ಭಾರತೀಯ ಹವಾಮಾನ ಇಲಾಖೆ (IMD) ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ, ಜಾರ್ಖಂಡ್ ಮತ್ತು ಪಂಜಾಬ್ ಸೇರಿದಂತೆ 10 ರಾಜ್ಯಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ. ಈಗಾಗಲೇ ಭಾರತಕ್ಕೆ ಮಾನ್ಸೂನ್ ಪ್ರವೇಶವಾಗಿದ್ದು, ದಕ್ಷಿಣ ಭಾರತ, ಸಿಕ್ಕಿಂ, ಪಶ್ಚಿಮ ಬಂಗಾಳ, ದಕ್ಷಿಣ ಭಾರತದಲ್ಲಿ ಇಂದು ಭಾರೀ ಮಳೆಯಾಗಲಿದೆ.

Weather Today: ಇಂದು ದೆಹಲಿ, ಉತ್ತರ ಪ್ರದೇಶದಲ್ಲಿ ತೀವ್ರ ಉಷ್ಣ ಅಲೆ; ದಕ್ಷಿಣ ಭಾರತ, ಸಿಕ್ಕಿಂ, ಬಂಗಾಳದಲ್ಲಿ ಭಾರೀ ಮಳೆ
ಉಷ್ಣ ಅಲೆ
Follow us
ಸುಷ್ಮಾ ಚಕ್ರೆ
|

Updated on: Jun 15, 2024 | 9:41 AM

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಇಂದು (ಜೂನ್ 15) ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ, ಜಾರ್ಖಂಡ್ ಮತ್ತು ಪಂಜಾಬ್‌ನಲ್ಲಿ ತೀವ್ರ ಶಾಖದ ಅಲೆಯ ಎಚ್ಚರಿಕೆಯನ್ನು (Heat Wave Alert) ನೀಡಿದೆ. ಇಂದು ಜಮ್ಮು, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಬಿಸಿಗಾಳಿ ಉಂಟಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (Weather Forecast) ಹೇಳಿದೆ. ಮುಂದಿನ 4 ದಿನಗಳಲ್ಲಿ ಬಿಹಾರ, ಆಂಧ್ರಪ್ರದೇಶ, ಛತ್ತೀಸ್‌ಗಢ, ದಕ್ಷಿಣ ಭಾರತ, ಒಡಿಶಾ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ನೈಋತ್ಯ ಮುಂಗಾರು (Monsoon) ಮುನ್ನಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರದವರೆಗೆ, ಮಧ್ಯಪ್ರದೇಶದಲ್ಲಿ ಭಾನುವಾರದವರೆಗೆ ಮತ್ತು ಇಂದು ಛತ್ತೀಸ್‌ಗಢದಲ್ಲಿ ಉಷ್ಣ ಅಲೆ ಉಂಟಾಗಲಿದೆ.

ಇದರ ಜೊತೆಗೆ, ಭಾರತೀಯ ಹವಾಮಾನ ಇಲಾಖೆ (IMD) ಸಿಕ್ಕಿಂ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆದರೆ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rains: ಉಡುಪಿ, ಉತ್ತರಕನ್ನಡ ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯ ಮುನ್ಸೂಚನೆ

ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್, ಒಡಿಶಾ, ಗೋವಾ, ಮಹಾರಾಷ್ಟ್ರ, ಉತ್ತರ ಆಂತರಿಕ ಕರ್ನಾಟಕದ ಪ್ರದೇಶಗಳಲ್ಲಿ 40-50 ಕಿ.ಮೀ ವೇಗದಲ್ಲಿ ಮಿಂಚು ಮತ್ತು ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯ ಕರಾವಳಿ ಭಾಗಗಳಲ್ಲಿ ಇಂದು ಚುಮು ಚುಮು ಚಳಿಯ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: Weather update: ಜೂನ್ 17 ರವರೆಗೆ ದೆಹಲಿ, ಯುಪಿಯಲ್ಲಿ ಬಿಸಿಗಾಳಿ; ಈಶಾನ್ಯದಲ್ಲಿ ಭಾರೀ ಮಳೆ

ಉತ್ತರಪ್ರದೇಶದಲ್ಲಿ ಇಂದು ಉಷ್ಣ ಅಲೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 46.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಮಥುರಾ, ಹತ್ರಾಸ್, ಅಗರ, ಫಿರೋಜಾಬಾದ್, ಮಣಿಪುರ, ಪ್ರತಾಪ್‌ಗಢ ಮತ್ತು ಗೋರಖ್‌ಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಹೋಬಾ, ಲಲಿತ್‌ಪುರ, ರಾಯ್‌ಬರೇಲಿ, ಆರೋಧ್ಯ, ಅಮೇಥಿ ಮತ್ತು ಇತರ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ