Rain Updates: ತಮಿಳುನಾಡು, ಕೇರಳದಲ್ಲಿ ವಿಪರೀತ ಮಳೆ; ಹಲವೆಡೆ 2 ದಿನ ರೆಡ್ ಅಲರ್ಟ್ ಘೋಷಣೆ

ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ತಮಿಳುನಾಡಿನಲ್ಲೂ ಮಳೆಯ ಆರ್ಭಟ ಜೋರಾಗಿದೆ. ಇದರ ಪರಿಣಾಮವಾಗಿ ಕರ್ನಾಟಕದ ಮಲೆನಾಡು, ಕರಾವಳಿ ಹಾಗೂ ಬೆಂಗಳೂರಿನಲ್ಲಿ ಕೂಡ ಮಳೆ ಹೆಚ್ಚಾಗಿದೆ. ಈ ತಿಂಗಳ ಅಂತ್ಯದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದೆ.

Rain Updates: ತಮಿಳುನಾಡು, ಕೇರಳದಲ್ಲಿ ವಿಪರೀತ ಮಳೆ; ಹಲವೆಡೆ 2 ದಿನ ರೆಡ್ ಅಲರ್ಟ್ ಘೋಷಣೆ
ಮಳೆ
Follow us
|

Updated on: May 18, 2024 | 10:43 PM

Kerala Rains: ಕೇರಳ ಮತ್ತು ತಮಿಳುನಾಡಿನಲ್ಲಿ ಮಳೆಯ ಆರ್ಭಟ (Heavy Rainfall) ಜೋರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಇನ್ನೆರಡು ದಿನ ಕೇರಳದಲ್ಲಿ (Kerala Rains) ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ್ದು, ಮೇ 19 ಮತ್ತು 20ರಂದು ಕೇರಳ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಘೋಷಿಸಿದೆ. ಇದರ ಜೊತೆಗೆ ತೆಂಕಶಿ, ದಿಂಡಿಗಲ್, ಧರ್ಮಪುರಿ, ಕೊಯಮತ್ತೂರು ಮತ್ತು ನಾಮಕ್ಕಲ್ ಜಿಲ್ಲೆಗಳು ಸೇರಿದಂತೆ ತಮಿಳುನಾಡಿನ (Tamil Nadu Rains) ಕೆಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗಿದ್ದು, ಕನ್ಯಾಕುಮಾರಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಲೇ ಇದೆ.

ಮೇ 19 ಮತ್ತು 20ರಂದು ಕೇರಳದ ಪಥನಾಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಆ ಎರಡು ದಿನಗಳ ಕಾಲ ತಿರುವನಂತಪುರಂ, ಕೊಲ್ಲಂ, ಆಲಪ್ಪುಳ ಮತ್ತು ಎರ್ನಾಕುಲಂನಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯು ಮೇ 21ಕ್ಕೆ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಿದೆ. ಮೇ 19 ಮತ್ತು 22ರ ನಡುವೆ ಕೇರಳದ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Monsoon 2024: ಈ ವರ್ಷ ಭಾರತದಲ್ಲಿ ಸರಾಸರಿಗಿಂತ ಹೆಚ್ಚು ಮಳೆ ಸಾಧ್ಯತೆ

ಮರಾಠವಾಡದಿಂದ ತಮಿಳುನಾಡಿನ ಮೇಲೆ ಚಂಡಮಾರುತ ಉಂಟಾಗುವುದರಿಂದ ದಕ್ಷಿಣ ಭಾರತದಾದ್ಯಂತ ಭಾರೀ ಮಳೆ ಮುಂದುವರಿಯಬಹುದು ಎಂದು IMD ಹೇಳಿತ್ತು. ಚಂಡಮಾರುತಗಳ ಪ್ರಭಾವದ ಅಡಿಯಲ್ಲಿ, ಗುಡುಗು ಮತ್ತು ಬಿರುಗಾಳಿಯ ಗಾಳಿಯೊಂದಿಗೆ ಮಳೆಯು ಮುಂದುವರಿಯುತ್ತದೆ. IMD ಪ್ರಕಾರ, ಈ ಮಳೆಯು ಮೇ 23ರವರೆಗೆ ಮುಂದುವರಿಯಬಹುದು.

ಇದನ್ನೂ ಓದಿ: ಹಾವೇರಿಯಲ್ಲಿ ಇಂದು ಸುರಿದ ಮಳೆ ಚಿಕ್ಕಮಗಳೂರುನಲ್ಲಿ ಎಂದಿನಂತೆ ಸುರಿಯುತ್ತಿದೆ; ಬೆಂಗಳೂರಲ್ಲಿ ಇವತ್ತು ಬೇಡ!

ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಅಧಿಕಾರಿಗಳು ಕನ್ಯಾಕುಮಾರಿ ಜಿಲ್ಲೆಯ ಪೆಚಿಪ್ಪರೈ ಮತ್ತು ಪೆರುಂಚಣಿ ಜಲಾಶಯಗಳಿಗೆ ಒಳಹರಿವಿನ ಮೇಲೆ ನಿಗಾ ಇರಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ ಹಠಾತ್ ಪ್ರವಾಹದಿಂದ ಉದ್ಭವಿಸುವ ಯಾವುದೇ ತುರ್ತು ಪರಿಸ್ಥಿತಿಗಳನ್ನು ಪರಿಹರಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿಯನ್ನು ಪ್ರದೇಶದಲ್ಲಿ ಇರಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು