ಬೆಂಗಳೂರು: ಭಾರತದಲ್ಲಿ ಈ ಬಾರಿಯ ಮಳೆಗಾಲದಲ್ಲಿ ಸಾಲು ಸಾಲು ಚಂಡಮಾರುತಗಳು ಏಳುತ್ತಿವೆ. ತೌಕ್ತೆ ಚಂಡಮಾರುತದಿಂದ ಶುರುವಾಗಿ ಗುಲಾಬ್ (Cyclone Gulab), ಶಾಹೀನ್ ಚಂಡಮಾರುತ (Cyclone Shaheen) ಭಾರತಕ್ಕೆ ಅಪ್ಪಳಿಸಿತ್ತು. ಇದೀಗ ಇನ್ನೊಂದು ಚಂಡಮಾರುತ ದಕ್ಷಿಣ ಭಾರತಕ್ಕೆ ಅಪ್ಪಳಿಸಲು ಸಜ್ಜಾಗಿದ್ದು, ಈ ಚಂಡಮಾರುತಕ್ಕೆ ಜವಾದ್ ಚಂಡಮಾರುತ (Jawad Cyclone) ಎಂದು ಹೆಸರಿಡಲಾಗಿದೆ. ಈ ಜವಾದ್ ಚಂಡಮಾರುತ ಮುಂದಿನ ವಾರ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಇನ್ನೂ 4-5 ದಿನ ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿ, ಗೋವಾ, ಒರಿಸ್ಸಾ, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ನಾಲ್ಕೈದು ದಿನ ಹಲವಾರು ರಾಜ್ಯಗಳಲ್ಲಿ ಮಿಂಚು- ಗುಡುಗಿನಿಂದ ಕೂಡಿದ ವ್ಯಾಪಕ ಮಳೆಯಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಏಳುವ ಸೂಚನೆಗಳಿದ್ದು, ಇನ್ನೂ 4-5 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಮುಂಬರುವ ದಿನಗಳಲ್ಲಿ ಗೋವಾ, ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇರಳ, ಕರಾವಳಿ ಕರ್ನಾಟಕ, ಕರಾವಳಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಲ್ಲಿ ಮಳೆಯಾಗಬಹುದು ಎಂದು ತಿಳಿಸಿದೆ. ಜವಾದ್ ಚಂಡಮಾರುತದ ಪರಿಣಾಮ ಒರಿಸ್ಸಾದಲ್ಲಿ ಹೆಚ್ಚಾಗಿರಲಿದೆ.
Today, the Southwest Monsoon has withdrawn from some more parts of Gujarat and Madhya Pradesh; remaining parts of Rajasthan and Uttar Pradesh and some parts of Chhattisgarh, Jharkhand and Bihar.
— India Meteorological Department (@Indiametdept) October 9, 2021
ಐಎಂಡಿ ಪ್ರಕಾರ ಗೋವಾ, ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇರಳದಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳವರೆಗೆ ಭಾರೀ ಮಳೆಯಾಗಬಹುದು. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಅಕ್ಟೋಬರ್ 10ರಿಂದ ಅಕ್ಟೋಬರ್ 12ರ ನಡುವೆ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಹೈದರಾಬಾದ್ನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಮಳೆ ನೀರಿನಲ್ಲಿ ಇಬ್ಬರು ಕೊಚ್ಚಿ ಹೋಗಿದ್ದಾರೆ. ತೆಲಂಗಾಣದಲ್ಲಿ ಸುರಿಯುತ್ತಿರುವ ಮಳೆಯಿಂದ ವಿಮಾನ ಹಾರಾಟವೂ ವ್ಯತ್ಯಯವಾಗಿದೆ. ಚರಂಡಿಯ ನೀರಿನಲ್ಲಿ ಇಬ್ಬರು ಕೊಚ್ಚಿಕೊಂಡು ಹೋದ ವಿಡಿಯೋ ಭಾರೀ ವೈರಲ್ ಆಗಿದೆ. ನಾಳೆ ಕೂಡ ತೆಲಂಗಾಣದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.
#WATCH | Telangana: Lanes, roads submerged following incessant rainfall in Hyderabad. Visuals from the Old city. (08.10) pic.twitter.com/5XCGtsmIwt
— ANI (@ANI) October 8, 2021
ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಕೆಲವು ಭಾಗಗಳಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಲ್ಫ್ ರಾಷ್ಟ್ರಗಳು ಹಾಗೂ ಅಂಡಮಾನ್ ದ್ವೀಪದ ಆಸುಪಾಸಿನಲ್ಲಿರುವ ರಾಷ್ಟ್ರಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ ಹೆಚ್ಚಾಗಲಿದೆ.
#WATCH | Telangana: Rainwater entered a restaurant in Old City after incessant rains lashed Hyderabad, yesterday pic.twitter.com/ACLKd1Vb19
— ANI (@ANI) October 9, 2021
ಇದನ್ನೂ ಓದಿ: Karnataka Rain: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆ; ಕರ್ನಾಟಕದ ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ
Karnataka Weather Today: ಕರ್ನಾಟಕ, ಕೇರಳದಲ್ಲಿ ಇನ್ನೂ 4 ದಿನ ಭಾರೀ ಮಳೆ; ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಣೆ