Weather Today: ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ

Rain Updates: ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಬಿಹಾರ, ತಮಿಳುನಾಡು ಮತ್ತು ಕೇರಳದಲ್ಲಿ ಮಳೆ ಸುರಿಯಲಿದೆ.

Weather Today: ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 27, 2022 | 6:02 AM

ಬೆಂಗಳೂರು: ಕರ್ನಾಟಕದಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಿದೆ. ಆದರೆ, ಪಕ್ಕದ ಕೇರಳ, ತಮಿಳುನಾಡಿನಲ್ಲಿ ಮಳೆಯ ಅಬ್ಬರ ಜೋರಾಗೇ ಇದೆ. ತಮಿಳುನಾಡಿನ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶದಲ್ಲಿ ವ್ಯಾಪಕವಾದ ಮಳೆ ಅಥವಾ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಪಶ್ಚಿಮ ಬಂಗಾಳದಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಬಿಹಾರ, ತಮಿಳುನಾಡು ಮತ್ತು ಕೇರಳದಲ್ಲಿ ಮಳೆ ಸುರಿಯಲಿದೆ.

ತಮಿಳುನಾಡಿನ ದಿಂಡಿಗಲ್, ರಾಮನಾಥಪುರಂ, ತಿರುನಲ್ವೇಲಿ, ಮಧುರೈ ಮತ್ತು ಕಡಲೂರು, ಪುದುಚೇರಿ ಮತ್ತು ಕಾರೈಕಲ್ ಸೇರಿದಂತೆ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಜಮ್ಮು-ಕಾಶ್ಮೀರ, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆ ಅಥವಾ ಹಿಮಪಾತದ ಸಾಧ್ಯತೆ ಹೆಚ್ಚಾಗಿದೆ. ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಕೂಡಿದ ಚದುರಿದ ಮಳೆಯಾಗುವ ನಿರೀಕ್ಷೆಯಿದೆ.

ಇಂದು ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಮಳೆ ಬೀಳುತ್ತದೆ. ಉತ್ತರ ಒಡಿಶಾ ಮತ್ತು ನೆರೆಹೊರೆಯ ರಾಜ್ಯಗಳಲ್ಲಿ ಚಂಡಮಾರುತದ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಚದುರಿದ ಮಳೆಯಾಗಲಿದೆ.

ಇದಲ್ಲದೆ, ಮುಂದಿನ ಎರಡು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಮಳೆಯಾಗಲಿದೆ. ಇಂದು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಸೈಕ್ಲೋನಿಕ್ ಪರಿಚಲನೆ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Weather Today: ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ

Weather Today: ತಮಿಳುನಾಡು, ಕೇರಳ, ಅಸ್ಸಾಂ, ಅರುಣಾಚಲ ಪ್ರದೇಶ ಸೇರಿ ಹಲವೆಡೆ ಇನ್ನೆರಡು ದಿನ ಭಾರೀ ಮಳೆ