Weather Today: ಕರ್ನಾಟಕದಲ್ಲಿ ಮುಂದುವರೆದ ಚಳಿ; ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಭಾರೀ ಮಳೆ

Rain Updatest: ಸಿಕ್ಕಿಂ, ಅರುಣಾಚಲ ಪ್ರದೇಶ, ಜಾರ್ಖಂಡ್, ಉತ್ತರಾಖಂಡ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಉತ್ತರ ಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.

Weather Today: ಕರ್ನಾಟಕದಲ್ಲಿ ಮುಂದುವರೆದ ಚಳಿ; ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಭಾರೀ ಮಳೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 10, 2022 | 6:07 AM

ಬೆಂಗಳೂರು: ಕರ್ನಾಟಕದಲ್ಲಿ ಚಳಿ (Winter) ಮುಂದುವರೆದಿದ್ದು, ಮಳೆ ಸಂಪೂರ್ಣವಾಗಿ ಕಡಿಮೆಯಾಗಿದೆ. ಆದರೆ, ಉತ್ತರ ಭಾರತದ ಬಹುತೇಕ ಕಡೆ ಗುಡುಗು ಸಹಿತ ಮಳೆ ಹೆಚ್ಚಾಗಿದೆ. ಸಿಕ್ಕಿಂನಲ್ಲಿ ಇಂದು (ಗುರುವಾರ) ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶದಲ್ಲಿ ಚದುರಿದ ಮಳೆ, ಹಿಮಪಾತವಾಗಲಿದೆ. ಜಾರ್ಖಂಡ್ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ (Rainfall) ನಿರೀಕ್ಷೆಯಿದೆ. ಉತ್ತರಾಖಂಡದಲ್ಲಿ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಪೂರ್ವ ಉತ್ತರ ಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.

ಇಂದು ಪಶ್ಚಿಮ ಹಿಮಾಲಯ ಪ್ರದೇಶದ ಕೆಲವು ಭಾಗಗಳಲ್ಲಿ ಸಾಕಷ್ಟು ವ್ಯಾಪಕವಾದ ಹಿಮ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆದರೆ ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಇರುತ್ತದೆ.

ಇನ್ನೆರಡು ದಿನ ದಕ್ಷಿಣ ಭಾರತದಲ್ಲಿ ಮಳೆ ಸಂಪೂರ್ಣ ಕಡಿಮೆಯಾದರೂ ಚಳಿ ಹೆಚ್ಚಾಗಲಿದೆ. ಮತ್ತೊಂದೆಡೆ ಇಂದಿನಿಂದ ಮಧ್ಯಪ್ರದೇಶದ ಸುತ್ತಮುತ್ತ ಕನಿಷ್ಠ ತಾಪಮಾನ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆಯಿಂದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತದ ಹವಾಮಾನ ಇಲಾಖೆ (IMD) ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ದೆಹಲಿಯ ಕೆಲವು ಸ್ಥಳಗಳಲ್ಲಿ (ನರೇಲಾ, ಬವಾನಾ, ಅಲಿಪುರ್, ಬುರಾರಿ, ಕರವಾಲ್ ನಗರ, ಸೀಮಾಪುರಿ, ಸಫ್ದರ್‌ಜಂಗ್), ನಾರ್ನಾಲ್, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ ಬೀಸುತ್ತದೆ.

ಇದನ್ನೂ ಓದಿ: Weather Today: ಜಮ್ಮು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶದಲ್ಲಿ ಇಂದು ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

Weather Today: ಉತ್ತರಾಖಂಡ, ಸಿಕ್ಕಿಂ, ದೆಹಲಿಯಲ್ಲಿ ಭಾರೀ ಮಳೆ; ಹಿಮಪಾತದಿಂದ ಹಿಮಾಚಲ ಪ್ರದೇಶದಲ್ಲಿ ಹಳದಿ ಅಲರ್ಟ್​ ಘೋಷಣೆ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ