ಬೆಂಗಳೂರು: ಕರ್ನಾಟಕದಲ್ಲಿ ಚಳಿ (Winter) ಮುಂದುವರೆದಿದ್ದು, ಮಳೆ ಸಂಪೂರ್ಣವಾಗಿ ಕಡಿಮೆಯಾಗಿದೆ. ಆದರೆ, ಉತ್ತರ ಭಾರತದ ಬಹುತೇಕ ಕಡೆ ಗುಡುಗು ಸಹಿತ ಮಳೆ ಹೆಚ್ಚಾಗಿದೆ. ಸಿಕ್ಕಿಂನಲ್ಲಿ ಇಂದು (ಗುರುವಾರ) ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶದಲ್ಲಿ ಚದುರಿದ ಮಳೆ, ಹಿಮಪಾತವಾಗಲಿದೆ. ಜಾರ್ಖಂಡ್ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ (Rainfall) ನಿರೀಕ್ಷೆಯಿದೆ. ಉತ್ತರಾಖಂಡದಲ್ಲಿ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಪೂರ್ವ ಉತ್ತರ ಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.
ಇಂದು ಪಶ್ಚಿಮ ಹಿಮಾಲಯ ಪ್ರದೇಶದ ಕೆಲವು ಭಾಗಗಳಲ್ಲಿ ಸಾಕಷ್ಟು ವ್ಯಾಪಕವಾದ ಹಿಮ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆದರೆ ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಇರುತ್ತದೆ.
ಇನ್ನೆರಡು ದಿನ ದಕ್ಷಿಣ ಭಾರತದಲ್ಲಿ ಮಳೆ ಸಂಪೂರ್ಣ ಕಡಿಮೆಯಾದರೂ ಚಳಿ ಹೆಚ್ಚಾಗಲಿದೆ. ಮತ್ತೊಂದೆಡೆ ಇಂದಿನಿಂದ ಮಧ್ಯಪ್ರದೇಶದ ಸುತ್ತಮುತ್ತ ಕನಿಷ್ಠ ತಾಪಮಾನ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆಯಿಂದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತದ ಹವಾಮಾನ ಇಲಾಖೆ (IMD) ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ದೆಹಲಿಯ ಕೆಲವು ಸ್ಥಳಗಳಲ್ಲಿ (ನರೇಲಾ, ಬವಾನಾ, ಅಲಿಪುರ್, ಬುರಾರಿ, ಕರವಾಲ್ ನಗರ, ಸೀಮಾಪುರಿ, ಸಫ್ದರ್‌ಜಂಗ್), ನಾರ್ನಾಲ್, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ ಬೀಸುತ್ತದೆ.
ಇದನ್ನೂ ಓದಿ: Weather Today: ಜಮ್ಮು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶದಲ್ಲಿ ಇಂದು ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ