Weather Today: ತಮಿಳುನಾಡು, ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ; ಕರ್ನಾಟಕದ ಇಂದಿನ ಹವಾಮಾನ ಹೀಗಿದೆ

Weather Forecast Today: ಮಧ್ಯಪ್ರದೇಶದಲ್ಲಿ ಇಂದಿನಿಂದ ಭಾನುವಾರದವರೆಗೆ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್, ಪಂಜಾಬ್ ಮತ್ತು ಉತ್ತರ ಹರಿಯಾಣದಲ್ಲಿ ಭಾರೀ ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ.

Weather Today: ತಮಿಳುನಾಡು, ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ; ಕರ್ನಾಟಕದ ಇಂದಿನ ಹವಾಮಾನ ಹೀಗಿದೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 08, 2022 | 6:03 AM

ಬೆಂಗಳೂರು: ಕರ್ನಾಟಕದಲ್ಲಿ ಚಳಿ ಕಡಿಮೆಯಾಗುತ್ತಿದ್ದು, ಮಳೆ ಸಂಪೂರ್ಣ ಸ್ಥಗಿತವಾಗಿದೆ. ದೆಹಲಿ, ಬಿಹಾರ್, ಸಿಕ್ಕಿಂ, ತಮಿಳುನಾಡು, ಜಮ್ಮು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ. ಇಂದಿನಿಂದ ಭಾನುವಾರದವರೆಗೆ ಪಶ್ಚಿಮ ಹಿಮಾಲಯ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ವ್ಯಾಪಕ ಮಳೆ ಅಥವಾ ಹಿಮ ಮತ್ತು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ. ಹಾಗೇ, ಭಾನುವಾರದವರೆಗೆ ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಆದರೆ ಮಧ್ಯಪ್ರದೇಶದಲ್ಲಿ ಇಂದಿನಿಂದ ಭಾನುವಾರದವರೆಗೆ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್, ಪಂಜಾಬ್ ಮತ್ತು ಉತ್ತರ ಹರಿಯಾಣದಲ್ಲಿ ಭಾರೀ ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ.

ಹಾಗೇ, ಪೂರ್ವ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಪಶ್ಚಿಮ ಅಸ್ಸಾಂ ಮತ್ತು ಮೇಘಾಲಯ, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇಂದು ದಟ್ಟವಾದ ಮಂಜು ಇರಲಿದೆ. ಜನವರಿ 10ರ ಸೋಮವಾರದಿಂದ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ, ವಿಶೇಷವಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಕೂಡ ಮಳೆಯಾಗಲಿದೆ.

ಭಾರತೀಯ ಹವಾಮಾನ ಇಲಾಖೆ (IMD)ಯ ಇತ್ತೀಚಿನ ಮುನ್ಸೂಚನೆಯು ಜನವರಿ 10ರಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಮಳೆಯ ಚಟುವಟಿಕೆಯು ಹೆಚ್ಚಾಗುವ ಸಾಧ್ಯತೆಯಿದೆ. ವಾಸ್ತವವಾಗಿ, ತಮಿಳುನಾಡಲ್ಲಿ ಮುಂದಿನ ಸೋಮವಾರ ಮತ್ತು ಮಂಗಳವಾರ ಭಾರೀ ಮಳೆಯಾಗಲಿದೆ. ಚೆನ್ನೈ, ಕಾಂಚೀಪುರಂ, ತಿರುವಲ್ಲೂರ್, ಕಡಲೂರ್ ಮುಂತಾದ ಕಡೆಗಳಲ್ಲಿ ಇಂದು ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದು ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಹಿಮಪಾತ ಮತ್ತು ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಿಂದ ದೂರ ಸರಿದ ಮಳೆ; ದೆಹಲಿ, ಸಿಕ್ಕಿಂ, ಬಿಹಾರದಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ

Karnataka Weather Today: ಬೆಂಗಳೂರಿನಲ್ಲಿ ವಿಪರೀತ ಚಳಿ; ದೆಹಲಿ, ಕಾಶ್ಮೀರ, ಲಡಾಖ್​ನಲ್ಲಿ 4 ದಿನ ಭಾರೀ ಮಳೆ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು