ಬೆಂಗಳೂರು: ಕರ್ನಾಟಕದಲ್ಲಿ ಚಳಿ ಕಡಿಮೆಯಾಗುತ್ತಿದ್ದು, ಮಳೆ ಸಂಪೂರ್ಣ ಸ್ಥಗಿತವಾಗಿದೆ. ದೆಹಲಿ, ಬಿಹಾರ್, ಸಿಕ್ಕಿಂ, ತಮಿಳುನಾಡು, ಜಮ್ಮು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ. ಇಂದಿನಿಂದ ಭಾನುವಾರದವರೆಗೆ ಪಶ್ಚಿಮ ಹಿಮಾಲಯ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ವ್ಯಾಪಕ ಮಳೆ ಅಥವಾ ಹಿಮ ಮತ್ತು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ. ಹಾಗೇ, ಭಾನುವಾರದವರೆಗೆ ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಆದರೆ ಮಧ್ಯಪ್ರದೇಶದಲ್ಲಿ ಇಂದಿನಿಂದ ಭಾನುವಾರದವರೆಗೆ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್, ಪಂಜಾಬ್ ಮತ್ತು ಉತ್ತರ ಹರಿಯಾಣದಲ್ಲಿ ಭಾರೀ ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ.
ಹಾಗೇ, ಪೂರ್ವ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಪಶ್ಚಿಮ ಅಸ್ಸಾಂ ಮತ್ತು ಮೇಘಾಲಯ, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇಂದು ದಟ್ಟವಾದ ಮಂಜು ಇರಲಿದೆ. ಜನವರಿ 10ರ ಸೋಮವಾರದಿಂದ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ, ವಿಶೇಷವಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಕೂಡ ಮಳೆಯಾಗಲಿದೆ.
ಭಾರತೀಯ ಹವಾಮಾನ ಇಲಾಖೆ (IMD)ಯ ಇತ್ತೀಚಿನ ಮುನ್ಸೂಚನೆಯು ಜನವರಿ 10ರಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಮಳೆಯ ಚಟುವಟಿಕೆಯು ಹೆಚ್ಚಾಗುವ ಸಾಧ್ಯತೆಯಿದೆ. ವಾಸ್ತವವಾಗಿ, ತಮಿಳುನಾಡಲ್ಲಿ ಮುಂದಿನ ಸೋಮವಾರ ಮತ್ತು ಮಂಗಳವಾರ ಭಾರೀ ಮಳೆಯಾಗಲಿದೆ. ಚೆನ್ನೈ, ಕಾಂಚೀಪುರಂ, ತಿರುವಲ್ಲೂರ್, ಕಡಲೂರ್ ಮುಂತಾದ ಕಡೆಗಳಲ್ಲಿ ಇಂದು ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಹಿಮಪಾತ ಮತ್ತು ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Weather Today: ಕರ್ನಾಟಕದಿಂದ ದೂರ ಸರಿದ ಮಳೆ; ದೆಹಲಿ, ಸಿಕ್ಕಿಂ, ಬಿಹಾರದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
Karnataka Weather Today: ಬೆಂಗಳೂರಿನಲ್ಲಿ ವಿಪರೀತ ಚಳಿ; ದೆಹಲಿ, ಕಾಶ್ಮೀರ, ಲಡಾಖ್ನಲ್ಲಿ 4 ದಿನ ಭಾರೀ ಮಳೆ