ಬೆಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಸಂಪೂರ್ಣವಾಗಿ ಮಳೆಗಾಲ (Rainfall) ಮುಗಿದಿದ್ದರೂ ನೆರೆಯ ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ತಮಿಳುನಾಡು, ಪುದುಚೇರಿ, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ ಫೆ. 15ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ದಟ್ಟವಾದ ಮಂಜಿನ ವಾತಾವರಣ ಇರಲಿದೆ. ಫೆಬ್ರವರಿ 15ರವರೆಗೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿಯಲ್ಲಿ ದಟ್ಟವಾದ ಮಂಜು ಹೆಚ್ಚಾಗಲಿದೆ. ಇಂದು ದಕ್ಷಿಣ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ
ತಮಿಳುನಾಡಿನ ಕರಾವಳಿಯಲ್ಲಿ ಚಾಲ್ತಿಯಲ್ಲಿರುವ ಬಲವಾದ ಈಶಾನ್ಯ ಮಾರುತಗಳ ಪ್ರಭಾವದಿಂದ ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಚದುರಿದ ಮಳೆಯಾಗಲಿದೆ ಎಂದು IMD ಮುನ್ಸೂಚನೆ ತಿಳಿಸಿದೆ. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ಮತ್ತು ನಾಳೆ ಚದುರಿದ ಮಳೆ, ಹಿಮಪಾತ ಉಂಟಾಗಲಿದೆ. ಫೆಬ್ರವರಿ 17ರಿಂದ 21ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ.
ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್, ಪಶ್ಚಿಮ ಬಂಗಾಳ, ಸಿಕ್ಕಿಂ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಭಾರತದ ದಕ್ಷಿಣ ಭಾಗದ ಕಡೆಗೆ ಪೂರ್ವ ಮಾರುತಗಳು ತಮಿಳುನಾಡು ಮತ್ತು ಕೇರಳದ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆಯನ್ನು ತರುವ ನಿರೀಕ್ಷೆಯಿದೆ. ಇಂದು ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಬಲವಾದ ಗಾಳಿ ಬೀಸಲಿದೆ.
ಇದನ್ನೂ ಓದಿ: Weather Today: ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ ಸೆಖೆ ಶುರು; ಈ ರಾಜ್ಯಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ
Weather Today: ಕರ್ನಾಟಕದಲ್ಲಿ ಮುಂದುವರೆದ ಚಳಿ; ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಭಾರೀ ಮಳೆ