Weather Today: ನ.1ರವರೆಗೆ ಕರ್ನಾಟಕ, ಕೇರಳ, ಆಂಧ್ರ, ತಮಿಳುನಾಡಿನಲ್ಲಿ ಭಾರೀ ಮಳೆ; ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ
Rain Updates: ಭಾರೀ ಮಳೆಯಾಗುವುದರಿಂದ ಮುಂದಿನ ಐದು ದಿನಗಳವರೆಗೆ ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದ ಬಹುತೇಕ ಭಾಗಗಳಲ್ಲಿ ನವೆಂಬರ್ 1ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ನವದೆಹಲಿ: ಇಂದಿನಿಂದ ನವೆಂಬರ್ 1ರವರೆಗೂ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೆರಿ, ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ತಮಿಳುನಾಡಿನ ಕೆಲವು ಸ್ಥಳಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 1ರವರೆಗೆ ಕೇರಳ ಮತ್ತು ಮಾಹೆಯಲ್ಲಿ ವ್ಯಾಪಕ ಮಳೆಯಾಗುತ್ತದೆ. ನಾಳೆಯಿಂದ ಆಂಧ್ರಪ್ರದೇಶದ ಕರಾವಳಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಅಕ್ಟೋಬರ್ 30ರಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ಟ್ವೀಟ್ ಮೂಲಕ ತಿಳಿಸಿದೆ.
IMD ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಳೆ ಹೆಚ್ಚಾಗಲಿದೆ. ಕೇರಳ, ಮಾಹೆ, ತಮಿಳುನಾಡು, ಪುದುಚೇರಿ, ಕಾರೈಕಾಲ್ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಇಂದಿನಿಂದ ನವೆಂಬರ್ 1ರವರೆಗೆ ಹಾಗೂ ರಾಯಲಸೀಮೆಯಲ್ಲಿ ನಾಳೆಯಿಂದ ನವೆಂಬರ್ 1ರವರೆಗೆ ಗುಡುಗು ಮತ್ತು ಮಿಂಚಿನ ಸಹಿತ ಮಳೆಯಾಗುವ ಸಾಧ್ಯತೆಯಿದೆ.
Thunderstorm & lightning very likely over Kerala & Mahe, Tamilnadu, Puducherry & Karaikal and Coastal Andhra Pradesh during 28th October-01st November and over Rayalaseema during 29th October-01st November, 2021.
— India Meteorological Department (@Indiametdept) October 28, 2021
ಹೀಗಿದ್ದರೂ ಮುಂದಿನ ಐದು ದಿನಗಳವರೆಗೆ ವಾಯುವ್ಯ, ಪಶ್ಚಿಮ, ಮಧ್ಯ ಮತ್ತು ಪೂರ್ವ ಮತ್ತು ಈಶಾನ್ಯ ಭಾರತದ ಹಲವು ಭಾಗಗಳಲ್ಲಿ ಮುಖ್ಯವಾಗಿ ಒಣ ಹವಾಮಾನವು ಮುಂದುವರೆಯುವ ಸಾಧ್ಯತೆಯಿದೆ. ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ವಿಲುಪುರಂ, ಕಡಲೂರು, ನಾಗಪಟ್ಟಣಂ, ಮೈಲಾಡುತುರೈ, ತಿರುವರೂರು ಮತ್ತು ತಮಿಳುನಾಡಿನ ತಂಜಾವೂರು ಜಿಲ್ಲೆ, ಕಾರೈಕಲ್ ಮತ್ತು ಪುದುಚೇರಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Mainly dry weather very likely to prevail over most parts of Northwest, West & Central India and many parts of East & Northeast India during next 5 days.
— India Meteorological Department (@Indiametdept) October 28, 2021
ಮುಂದಿನ ಐದು ದಿನಗಳವರೆಗೆ ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದ ಬಹುತೇಕ ಭಾಗಗಳಲ್ಲಿ ನವೆಂಬರ್ 1ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಯಲಸೀಮೆಯಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Karnataka Dams Water Level: ಅ. 31ರವರೆಗೆ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Weather Today: ಕರ್ನಾಟಕಕ್ಕೆ ನಾಳೆ ಹಿಂಗಾರು ಪ್ರವೇಶ ಸಾಧ್ಯತೆ; 15 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ
Published On - 7:05 pm, Thu, 28 October 21