Weather Today: ಜಮ್ಮು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶದಲ್ಲಿ ಇಂದು ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
Weather Forecast: ಇಂದು ಮತ್ತು ಫೆಬ್ರವರಿ 9ರಂದು ಪಶ್ಚಿಮ ಹಿಮಾಲಯನ್ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ವ್ಯಾಪಕವಾದ ಮಳೆಯಾಗಲಿದೆ. ಫೆಬ್ರವರಿ 9 ಮತ್ತು 10ರಂದು ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಚದುರಿದ ಮಳೆಯಾಗಲಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮಳೆ (Karnataka Rain) ಸಂಪೂರ್ಣವಾಗಿ ಕಡಿಮೆಯಾಗಿದೆ. ಮಲೆನಾಡು, ಕರಾವಳಿಯಲ್ಲಿ ಮಳೆ ಮುಗಿದು, ಚಳಿ ಮುಂದುವರೆದಿದೆ. ಆದರೆ, ಇಂದಿನಿಂದ 2ರಿಂದ 3 ದಿನ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆಯಲಿದೆ. ಫೆಬ್ರವರಿ 9ರಂದು ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಳೆಯ ಜೊತೆಗೆ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ. ಫೆಬ್ರವರಿ 9ರಂದು ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 9 ಮತ್ತು 10ರಂದು ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್ ಮತ್ತು ಉತ್ತರ ಒಡಿಶಾದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.
ಇಂದು ಮತ್ತು ಫೆಬ್ರವರಿ 9ರಂದು ಪಶ್ಚಿಮ ಹಿಮಾಲಯನ್ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ವ್ಯಾಪಕವಾದ ಮಳೆಯಾಗಲಿದೆ. ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳು, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಇಂದು ಚಳಿ ಹೆಚ್ಚಾಗಲಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮುಂದಿನ 2 ದಿನಗಳಲ್ಲಿ ಒಡಿಶಾದಲ್ಲಿ ಚಳಿ ಹೆಚ್ಚಾಗಲಿದೆ. ಇಂದು, ಫೆಬ್ರವರಿ 9ರಂದು ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಮಳೆ ಅಥವಾ ಹಿಮಪಾತ ಉಂಟಾಗುವ ಸಾಧ್ಯತೆಯಿದೆ ಎಂದು IMD ತಿಳಿಸಿದೆ.
ಇಂದು ರಾತ್ರಿಯಿಂದ ವಾಯುವ್ಯ ಭಾರತದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹವಾಮಾನ ಸಂಸ್ಥೆ ಟ್ವೀಟ್ ಮಾಡಿದೆ. ಮುಂದಿನ ಎರಡು ದಿನಗಳ ಕಾಲ ಉತ್ತರ ಪ್ರದೇಶದಲ್ಲಿ ತೀವ್ರ ಚಳಿ ಮುಂದುವರಿಯುವ ಸಾಧ್ಯತೆಯಿದೆ. ಇಂದು ಹಿಮಾಲಯ ಪ್ರದೇಶದಲ್ಲಿ (ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ) ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾದ ಮಳೆ ಅಥವಾ ಹಿಮ ಬೀಳುವ ನಿರೀಕ್ಷೆಯಿದೆ.
Cold Day to Severe Cold Day Conditions very likely in isolated pockets over East Uttar Pradesh during next 48 hours; cold day over West Uttar Pradesh during next 24 hours and abate thereafter
— India Meteorological Department (@Indiametdept) February 7, 2022
ಇಂದು ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾದಲ್ಲಿ ಮುಂದಿನ 2 ದಿನಗಳಲ್ಲಿ ಮತ್ತು ಫೆಬ್ರವರಿ 9ರಂದು ಒಡಿಶಾದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸಲಿದೆ.
ಹಿಮಾಚಲ ಪ್ರದೇಶ, ಉತ್ತರ ರಾಜಸ್ಥಾನ, ಬಿಹಾರ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಕೆಲವು ಪ್ರದೇಶಗಳಲ್ಲಿ ಇಂದು ದಟ್ಟವಾದ ಮಂಜು ಇರಲಿದೆ. ಪಶ್ಚಿಮ ಬಂಗಾಳದಲ್ಲಿ ಮುಂದಿನ 2 ದಿನಗಳಲ್ಲಿ ದಟ್ಟವಾದ ಮಂಜು ಆವರಿಸಲಿದೆ. ಮುಂದಿನ 2 ದಿನ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ಒಡಿಶಾದಲ್ಲಿ ಕೂಡ ಮಂಜು ಮುಸುಕಲಿದೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಎತ್ತರದ ಪ್ರದೇಶಗಳಲ್ಲಿ ತಾಜಾ ಹಿಮಪಾತ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನ ಎತ್ತರದ ಪ್ರದೇಶಗಳಲ್ಲಿ ಇಂದು ತಾಜಾ ಹಿಮಪಾತ ಸಂಭವಿಸಲಿದೆ. ಜಮ್ಮು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Weather Today: ಉತ್ತರಾಖಂಡ, ಸಿಕ್ಕಿಂ, ದೆಹಲಿಯಲ್ಲಿ ಭಾರೀ ಮಳೆ; ಹಿಮಪಾತದಿಂದ ಹಿಮಾಚಲ ಪ್ರದೇಶದಲ್ಲಿ ಹಳದಿ ಅಲರ್ಟ್ ಘೋಷಣೆ
Weather Today: ಪಶ್ಚಿಮ ಬಂಗಾಳ, ಸಿಕ್ಕಿಂ, ಹಿಮಾಲಯನ್ ಭಾಗದಲ್ಲಿ ಇಂದು ಮಳೆ ಸಾಧ್ಯತೆ