Weather Today: ದೆಹಲಿ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ ಸೇರಿ ಹಲವೆಡೆ ಇಂದು ಮಳೆ ಸಾಧ್ಯತೆ
Weather Forecast: ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇಂದಿನಿಂದ ಜ. 22ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದು, ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ. ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಿಜೋರಾಂನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಪಂಜಾಬ್, ಹರಿಯಾಣ, ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾದಲ್ಲಿ ದಟ್ಟವಾದ ಮಂಜಿನಿಂದ ಕೂಡಿದ ವಾತಾವರಣವಿರಲಿದೆ. ಜಮ್ಮು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಹಿಮಪಾತವಾಗಲಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 2 ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಶೀತ ಗಾಳಿ ಇರಲಿದೆ. ಇಂದು ಮಧ್ಯಪ್ರದೇಶದಲ್ಲಿ ಶೀತ ವಾತಾವರಣವಿರಲಿದೆ. ಪಂಜಾಬ್‌ನಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಇನ್ನೆರಡು ದಿನ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಕೂಡ ಮಳೆಯಾಗಲಿದೆ. ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸುತ್ತದೆ. ಜನವರಿ 22ರಂದು ಹಿಮಾಚಲ ಪ್ರದೇಶದ ಮೇಲೆ ಭಾರೀ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ. ಅಲ್ಲದೆ, ಇಂದು ಮತ್ತು ನಾಳೆ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಉತ್ತರ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಮಳೆಯಾಗಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇಂದಿನಿಂದ ಜ. 22ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ರಾಜಸ್ಥಾನ, ಉತ್ತರ ಪ್ರದೇಶ, ಉತ್ತರ ಮಧ್ಯಪ್ರದೇಶ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಇಂದು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಚಳಿ ವಾತಾವರಣ ಇರಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನದಲ್ಲಿ ಶೀತ ವಾತಾವರಣ ಇರಲಿದೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲೂ ಮಳೆ ಹೆಚ್ಚಾಗಲಿದೆ. ಈ ಮಳೆಯು ಇಂದು ಪ್ರಾರಂಭವಾಗುತ್ತದೆ. ಜನವರಿ 22ರಿಂದ ಮಳೆ ಹೆಚ್ಚಾಗಲಿದೆ.
ಇಂದು ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಚದುರಿದ ಮಳೆ, ಹಿಮ ಬೀಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಜ. 22ನೇ ಮತ್ತು 23ನೇ ಜನವರಿಯಲ್ಲಿ ವ್ಯಾಪಕ ಮಳೆ, ಹಿಮಪಾತವಾಗಲಿದೆ ಮತ್ತು ನಂತರದಲ್ಲಿ ಇಳಿಕೆಯಾಗಲಿದೆ. ಜನವರಿ 22 ಮತ್ತು 23ರಂದು ಉಪ-ವಿಭಾಗಗಳ ಮೇಲೆ ಭಾರೀ ಮಳೆ, ಹಿಮ ಬೀಳುವ ಸಾಧ್ಯತೆಯಿದೆ.
ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ನಂತರ 22 ಮತ್ತು 23ನೇ ಜನವರಿಯಲ್ಲಿ ಸಾಕಷ್ಟು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಉತ್ತರ ಪ್ರದೇಶ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಜ. 22 ಮತ್ತು 23ರಂದು ಮಳೆಯಾಗಲಿದೆ. ಪಂಜಾಬ್‌ನಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜನವರಿ 22ರಂದು ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಪಶ್ಚಿಮ ಉತ್ತರ ಪ್ರದೇಶ, ಉತ್ತರ ರಾಜಸ್ಥಾನ, ಪೂರ್ವ ಮಧ್ಯಪ್ರದೇಶ ಮತ್ತು ಉಪ-ಹಿಮಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಳೆಯಾಗಲಿದೆ. ಜ. 22 ಮತ್ತು 23ರಂದು ಬಿಹಾರದಲ್ಲಿ ಮಳೆಯಾಗಲಿದೆ.
ಇದನ್ನೂ ಓದಿ: Weather Today: ಅಸ್ಸಾಂ, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ; ಜಮ್ಮು ಕಾಶ್ಮೀರದಲ್ಲಿಂದು ಹಿಮಪಾತ
Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ರಾಜಸ್ಥಾನ, ದೆಹಲಿ, ತಮಿಳುನಾಡಿನಲ್ಲಿ ಹಳದಿ ಅಲರ್ಟ್ ಘೋಷಣೆ