Weather Today: ತಮಿಳುನಾಡಿನ ಹಲವೆಡೆ ಇನ್ನೆರಡು ದಿನ ಭಾರೀ ಮಳೆ; ಚೆನ್ನೈನಲ್ಲಿ ರೆಡ್ ಅಲರ್ಟ್​ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Mar 04, 2022 | 5:50 AM

Tamil Nadu Rain: ತಮಿಳುನಾಡು ಕರಾವಳಿ, ಕಾರೈಕಲ್ ಮತ್ತು ಪುದುಚೇರಿಯಲ್ಲಿ ಇಂದು ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.

Weather Today: ತಮಿಳುನಾಡಿನ ಹಲವೆಡೆ ಇನ್ನೆರಡು ದಿನ ಭಾರೀ ಮಳೆ; ಚೆನ್ನೈನಲ್ಲಿ ರೆಡ್ ಅಲರ್ಟ್​ ಘೋಷಣೆ
ಮಳೆ
Follow us on

ಬೆಂಗಳೂರು: ಹಲವು ರಾಜ್ಯಗಳಲ್ಲಿ ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಶುರುವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತವಾಗಿದೆ. ಮುಂದಿನ 48 ಗಂಟೆಗಳಲ್ಲಿ ವಾಯುಭಾರ ಕುಸಿತದ ಪ್ರಭಾವ ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯ ಉತ್ತರ ತಮಿಳುನಾಡು ಕರಾವಳಿಯ ಕಡೆಗೆ ಸಾಗಲಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಇಂದಿನಿಂದ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದು ತಮಿಳುನಾಡು, ಪುದುಚೇರಿಯಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ IMD ಸಲಹೆ ನೀಡಿದೆ. ಹಾಗೇ, ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸಲಿವೆ. ಇಂದು ಮತ್ತು ಶನಿವಾರ ಚೆನ್ನೈನಲ್ಲಿ ಭಾರೀ ಮಳೆಯಾಗಲಿದೆ. ಚೆನ್ನೈನಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪ್ರಾದೇಶಿಕ ಹವಾಮಾನ ಇಲಾಖೆಯು ರಾಜ್ಯದ ಇತರ ಜಿಲ್ಲೆಗಳಲ್ಲಿ ಈ ಕೆಳಗಿನ ಎಚ್ಚರಿಕೆಗಳನ್ನು ನೀಡಿದೆ.

ಇಂದು ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾದ ಏರಿಯಾಗಳು- ವಿಲ್ಲುಪುರಂ, ಪುದುಚೇರಿ ಮತ್ತು ಕಡಲೂರು. ಆರೆಂಜ್ ಎಚ್ಚರಿಕೆ ನೀಡಲಾದ ಪ್ರದೇಶಗಳು- ಚೆಂಗಲ್ಪಟ್ಟು, ಮೈಲಾಡುತುರೈ, ನಾಗಪ್ಪಟಿನಂ, ಕಾರೈಕಲ್, ಕಾಂಚೀಪುರಂ, ತಂಜಾವೂರು ಮತ್ತು ತಿರುವಾರೂರ್, ತಿರುವಳ್ಳೂರು, ರಾಣಿಪೇಟ್. ಹಳದಿ ಅಲರ್ಟ್​ ಘೋಷಿಸಲಾದ ಏರಿಯಾಗಳು- ಪುದುಚೇರಿ, ತಿರುವರೂರ್, ತಂಜಾವೂರು, ಪುದುಕೊಟ್ಟೈ, ಕಲ್ಲಕುರುಚಿ, ಅರಿಯಲೂರ್ ಮತ್ತು ಪೆರಂಬಲೂರು, ತಿರುವಳ್ಳೂರ್, ಚೆನ್ನೈ, ವೆಲ್ಲೂರ್, ರಾಣಿಪೇಟ್, ತಿರುಪ್ಪತ್ತೂರ್, ತಿರುವಣ್ಣಾಮಲೈ, ಅರಿಯಲೂರ್, ತಿರುಚ್ಚಿ.

ತಮಿಳುನಾಡು ಕರಾವಳಿ, ಕಾರೈಕಲ್ ಮತ್ತು ಪುದುಚೇರಿಯಲ್ಲಿ ಇಂದು ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿ ಮತ್ತು ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಭಾರೀ ಮಳೆಯಾಗಲು ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು ಕರಾವಳಿ ಪ್ರದೇಶಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುತ್ತದೆ.

ಮಾರ್ಚ್ 5-6ರಂದು ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಮತ್ತು ಪಶ್ಚಿಮ ಬಂಗಾಳ ಕೊಲ್ಲಿ, ಹಿಂದೂ ಮಹಾಸಾಗರ, ಮನ್ನಾರ್ ಗಲ್ಫ್, ಕೊಮೊರಿನ್ ಮತ್ತು ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯವರೆಗೂ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Weather Today: ತಮಿಳುನಾಡು, ಪುದುಚೇರಿ, ದೆಹಲಿ ಸೇರಿ ಈ ರಾಜ್ಯಗಳಲ್ಲಿ ಮಾ. 4ರವರೆಗೆ ಭಾರೀ ಮಳೆ

Weather Today: ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ