Weather Today: ಪಶ್ಚಿಮ ಬಂಗಾಳ, ಸಿಕ್ಕಿಂ, ಹಿಮಾಲಯನ್ ಭಾಗದಲ್ಲಿ ಇಂದು ಮಳೆ ಸಾಧ್ಯತೆ

Weather Forecast: ಇಂದು ಮತ್ತು ಫೆಬ್ರವರಿ 7ರಂದು ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಚದುರಿದ ಲಘು ಮಳೆ ಅಥವಾ ಹಿಮಪಾತ ಉಂಟಾಗಲಿದೆ. ಫೆಬ್ರವರಿ 8 ಮತ್ತು 9ರಂದು ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ.

Weather Today: ಪಶ್ಚಿಮ ಬಂಗಾಳ, ಸಿಕ್ಕಿಂ, ಹಿಮಾಲಯನ್ ಭಾಗದಲ್ಲಿ ಇಂದು ಮಳೆ ಸಾಧ್ಯತೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 06, 2022 | 6:05 AM

ಬೆಂಗಳೂರು: ಕಳೆದ ವಾರ ಮಲೆನಾಡು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ತುಂತುರು (Rain) ಮಳೆಯಾಗಿತ್ತು. ಇದೀಗ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ. ಆದರೆ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಈಶಾನ್ಯ ಭಾರತದಲ್ಲಿ ಇಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಇಂದು ಮತ್ತು ಫೆಬ್ರವರಿ 7ರಂದು ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಚದುರಿದ ಲಘು ಮಳೆ ಅಥವಾ ಹಿಮಪಾತ (Snowfall) ಉಂಟಾಗಲಿದೆ.

ಫೆಬ್ರವರಿ 8 ಮತ್ತು 9ರಂದು ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ತಾಪಮಾನ ಕೊಂಚ ಹೆಚ್ಚಾಗಲಿದೆ. ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳು, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಶೀತದ ಅಲೆ ಉಂಟಾಗಲಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮುಂದಿನ 2 ದಿನಗಳಲ್ಲಿ ಒಡಿಶಾದಲ್ಲಿ ಚಳಿ ಹೆಚ್ಚಾಗಲಿದೆ.

ಕಾಶ್ಮೀರದಲ್ಲಿ ಕನಿಷ್ಠ ತಾಪಮಾನವೂ ಕುಸಿತವನ್ನು ದಾಖಲಿಸಿದೆ. ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಮಳೆ ಅಥವಾ ಹಿಮಪಾತದ ಮುನ್ಸೂಚನೆ ನೀಡಿದೆ. ಇಂದು, ಫೆಬ್ರವರಿ 7, 8 ಮತ್ತು 9ರಂದು ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಮಳೆ ಅಥವಾ ಹಿಮಪಾತ ಉಂಟಾಗುವ ಸಾಧ್ಯತೆಯಿದೆ ಎಂದು IMD ಹೇಳಿದೆ.

ಹಿಮಾಚಲ ಪ್ರದೇಶ, ಉತ್ತರ ರಾಜಸ್ಥಾನ, ಬಿಹಾರ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಕೆಲವು ಪ್ರದೇಶಗಳಲ್ಲಿ ಇಂದು ದಟ್ಟವಾದ ಮಂಜು ಇರಲಿದೆ. ಪಶ್ಚಿಮ ಬಂಗಾಳದಲ್ಲಿ ಮುಂದಿನ 3 ದಿನಗಳಲ್ಲಿ ಮಧ್ಯಮದಿಂದ ದಟ್ಟವಾದ ಮಂಜಿನ ಅನುಭವವಾಗಲಿದೆ. ಮುಂದಿನ 3 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ಒಡಿಶಾದಲ್ಲಿ ಕೂಡ ಮಂಜು ಇರಲಿದೆ.

ಇದನ್ನೂ ಓದಿ: Chennai Rains ಚೆನ್ನೈನಲ್ಲಿ ಮುಂದಿನ 3 ದಿನಗಳವರೆಗೆ ಮಳೆ ಮುಂದುವರಿಕೆ; 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Weather Today: ಕರ್ನಾಟಕದಲ್ಲಿ ಮಳೆ ಸಂಪೂರ್ಣ ಇಳಿಮುಖ; ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್​ ಘೋಷಣೆ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ