Weather Today: ಕೇರಳ, ಲಡಾಖ್ ಸೇರಿ ಹಲವು ರಾಜ್ಯಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ

| Updated By: ಸುಷ್ಮಾ ಚಕ್ರೆ

Updated on: Feb 15, 2022 | 6:02 AM

Weather Forecast: ಇಂದು ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Weather Today: ಕೇರಳ, ಲಡಾಖ್ ಸೇರಿ ಹಲವು ರಾಜ್ಯಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ
ಮಳೆ
Follow us on

ಬೆಂಗಳೂರು: ಮಲೆನಾಡು, ಕರಾವಳಿ ಹಾಗೂ ಬೆಂಗಳೂರು, ಮೈಸೂರಿನಲ್ಲಿ ಚಳಿ (Winter) ಮುಂದುವರೆದಿದ್ದು, ಮಳೆ ಸಂಪೂರ್ಣವಾಗಿ ಕಡಿಮೆಯಾಗಿದೆ. ತಮಿಳುನಾಡು, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ವರುಣನ ಆರ್ಭಟ (Heavy Rain) ಇರಲಿದೆ. ಮುಂದಿನ 4 ದಿನಗಳ ಕಾಲ ದೇಶದ ಬಹುತೇಕ ಭಾಗಗಳಲ್ಲಿ ಒಣಹವೆ ಇರುತ್ತದೆ. ಇನ್ನೆರಡು ದಿನ ಕೇರಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇಂದು ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕೇರಳದಲ್ಲಿ ಪ್ರತ್ಯೇಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಧ್ಯ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸಲಿದೆ.

ಲಡಾಖ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆ ಇರಲಿದೆ. ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಸಿಕ್ಕಿಂ ಮತ್ತು ಉತ್ತರ ಅರುಣಾಚಲ ಪ್ರದೇಶದಲ್ಲಿ ಚದುರಿದ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಮೂರು ದಿನಗಳಲ್ಲಿ ವಾಯುವ್ಯ ಮತ್ತು ಮಧ್ಯ ಭಾರತದ ಬಹುತೇಕ ಭಾಗಗಳಲ್ಲಿ ಹವಾಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್​ನಷ್ಟು ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಪೂರ್ವ ಭಾರತದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಕಂಡುಬಂದಿಲ್ಲ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಕೆಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ಮಳೆಯನ್ನು ನಿರೀಕ್ಷಿಸಲಾಗಿದೆ. ಮುಂದಿನ 4 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ತೇವಾಂಶದ ವಾತಾವರಣ ಇರಲಿದೆ. ಮುಂದಿನ 24 ಗಂಟೆಗಳ ಕಾಲ ಒಡಿಶಾದಲ್ಲಿ ಶೀತ ಅಲೆಗಳ ಪರಿಸ್ಥಿತಿ ಇರಲಿದೆ. ಮುಂದಿನ 2 ದಿನಗಳಲ್ಲಿ ಉತ್ತರ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಏರಿಕೆಯಾಗುವ ನಿರೀಕ್ಷೆಯಿದೆ.

ಮುಂದಿನ 3ರಿಂದ 4 ದಿನಗಳ ಕಾಲ ದಕ್ಷಿಣ ತಮಿಳುನಾಡು, ದಕ್ಷಿಣ ಕೇರಳ ಮತ್ತು ಲಕ್ಷದ್ವೀಪ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಒಡಿಶಾದಲ್ಲಿ ಶೀತ ಅಲೆಗಳ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ: Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ತಮಿಳುನಾಡಿನಲ್ಲಿ ಇಂದು ವರುಣನ ಆರ್ಭಟ

Weather Today: ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ ಸೆಖೆ ಶುರು; ಈ ರಾಜ್ಯಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ