AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಕರ್ನಾಟಕದಲ್ಲಿ ಮಳೆ ಸಂಪೂರ್ಣ ಇಳಿಮುಖ; ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್​ ಘೋಷಣೆ

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಫೆಬ್ರವರಿ 5ರವರೆಗೆ ಶೀತ ಗಾಳಿ ಸಹಿತ ಮಳೆಯಾಗಲಿದೆ.

Weather Today: ಕರ್ನಾಟಕದಲ್ಲಿ ಮಳೆ ಸಂಪೂರ್ಣ ಇಳಿಮುಖ; ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್​ ಘೋಷಣೆ
ಮಳೆ
TV9 Web
| Edited By: |

Updated on: Feb 04, 2022 | 6:05 AM

Share

ಬೆಂಗಳೂರು: ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ದೆಹಲಿ, ಅಸ್ಸಾಂ, ಹಿಮಾಚಲ ಪ್ರದೇಶ, ಉತ್ತರಾಖಂಡ, ತಮಿಳುನಾಡು, ಕೇರಳದಲ್ಲಿ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡದ ಕೆಲವು ಭಾಗಗಳಲ್ಲಿ ಇಂದು ಭಾರೀ ಮಳೆ ಮತ್ತು ಹಿಮಪಾತ (Snowfall) ಉಂಟಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದು ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ಹಗುರ ಮಳೆ ಮತ್ತು ಹಿಮಪಾತ ಉಂಟಾಗುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಮತ್ತು ಗುಡುಗು ಸಹಿತ ಲಘು ಮಳೆಯಾಗಲಿದೆ.

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಫೆಬ್ರವರಿ 5ರವರೆಗೆ ಶೀತ ಗಾಳಿ ಸಹಿತ ಮಳೆಯಾಗಲಿದೆ. ಇಂದು ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸಾಧಾರಣ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಹಾಗೇ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಹಿಮ ಬೀಳುವ ನಿರೀಕ್ಷೆಯಿದೆ. ಇಂದು ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ತ್ರಿಪುರ, ಮಣಿಪುರ ಮತ್ತು ಮಿಜೋರಾಂನಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ.

ಇಂದು ದೆಹಲಿ ಮತ್ತು NCR (ಹಿಂಡಾನ್, ಲೋನಿ ದೇಹಾತ್, ಘಾಜಿಯಾಬಾದ್, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ್)ದಲ್ಲಿ ಮತ್ತು ಪಕ್ಕದ ಪ್ರದೇಶಗಳಲ್ಲಿ 20-30 ಕಿಮೀ ವೇಗದಲ್ಲಿ ಲಘುವಾಗಿ ಗಾಳಿ, ಗುಡುಗು ಸಹಿತ ಮಳೆಯಾಗುತ್ತದೆ ಎಂದು IMD ತಿಳಿಸಿದೆ.

ಇಂದು ಉತ್ತರಾಖಂಡದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದ್ದು, ಕಂಗ್ರಾ, ಚಂಬಾ, ಕುಲು, ಕಿನ್ನೌರ್ ಮತ್ತು ಲಾಹುಲ್ ಮತ್ತು ಸ್ಪಿತಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಹಿಮ ಉಂಟಾಗಲಿದೆ.

ಉತ್ತರಾಖಂಡಕ್ಕೆ ಸಂಬಂಧಿಸಿದಂತೆ ಗುರುವಾರ ಡೆಹ್ರಾಡೂನ್, ನೈನಿತಾಲ್, ಚಂಪಾವತ್, ಉಧಮ್ ಸಿಂಗ್ ನಗರ, ತೆಹ್ರಿ ಗರ್ವಾಲ್, ಪೌರಿ ಗರ್ವಾಲ್, ರುದ್ರಪ್ರಯಾಗ, ಚಮೋಲಿ, ಅಲ್ಮೋರಾ, ಬಾಗೇಶ್ವರ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಫೆಬ್ರವರಿ 5ರಿಂದ ವಾಯು ಗುಣಮಟ್ಟವು ಕ್ರಮೇಣ ಕ್ಷೀಣಿಸುತ್ತದೆ.

ಇಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು ಫೆ. 5ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್‌, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ ಮತ್ತು ಒಡಿಶಾದಲ್ಲಿ ಶೀತ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಶೀತ ಅಲೆ ಉಂಟಾಗಲಿದೆ.

ಇದನ್ನೂ ಓದಿ: Karnataka Weather Today: ಉತ್ತರ ಭಾರತದಲ್ಲಿ ಫೆ. 3ರಿಂದ ಮಳೆ ಹೆಚ್ಚಳ; ಹಿಮಾಚಲ ಪ್ರದೇಶದಲ್ಲಿ ಹಿಮಪಾತ

Karnataka Weather Today: ಬೆಂಗಳೂರು, ಕೋಲಾರ ಸುತ್ತಮುತ್ತ ಇನ್ನೆರಡು ದಿನ ಮಳೆ; ನೆರೆಯ ರಾಜ್ಯಗಳಲ್ಲೂ ವರುಣನ ಅಬ್ಬರ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್