ಬೆಂಗಳೂರು: ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ದೆಹಲಿ, ಅಸ್ಸಾಂ, ಹಿಮಾಚಲ ಪ್ರದೇಶ, ಉತ್ತರಾಖಂಡ, ತಮಿಳುನಾಡು, ಕೇರಳದಲ್ಲಿ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡದ ಕೆಲವು ಭಾಗಗಳಲ್ಲಿ ಇಂದು ಭಾರೀ ಮಳೆ ಮತ್ತು ಹಿಮಪಾತ (Snowfall) ಉಂಟಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದು ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ಹಗುರ ಮಳೆ ಮತ್ತು ಹಿಮಪಾತ ಉಂಟಾಗುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಮತ್ತು ಗುಡುಗು ಸಹಿತ ಲಘು ಮಳೆಯಾಗಲಿದೆ.
ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಫೆಬ್ರವರಿ 5ರವರೆಗೆ ಶೀತ ಗಾಳಿ ಸಹಿತ ಮಳೆಯಾಗಲಿದೆ. ಇಂದು ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸಾಧಾರಣ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಹಾಗೇ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಹಿಮ ಬೀಳುವ ನಿರೀಕ್ಷೆಯಿದೆ. ಇಂದು ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ತ್ರಿಪುರ, ಮಣಿಪುರ ಮತ್ತು ಮಿಜೋರಾಂನಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ.
ಇಂದು ದೆಹಲಿ ಮತ್ತು NCR (ಹಿಂಡಾನ್, ಲೋನಿ ದೇಹಾತ್, ಘಾಜಿಯಾಬಾದ್, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ್)ದಲ್ಲಿ ಮತ್ತು ಪಕ್ಕದ ಪ್ರದೇಶಗಳಲ್ಲಿ 20-30 ಕಿಮೀ ವೇಗದಲ್ಲಿ ಲಘುವಾಗಿ ಗಾಳಿ, ಗುಡುಗು ಸಹಿತ ಮಳೆಯಾಗುತ್ತದೆ ಎಂದು IMD ತಿಳಿಸಿದೆ.
ಇಂದು ಉತ್ತರಾಖಂಡದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದ್ದು, ಕಂಗ್ರಾ, ಚಂಬಾ, ಕುಲು, ಕಿನ್ನೌರ್ ಮತ್ತು ಲಾಹುಲ್ ಮತ್ತು ಸ್ಪಿತಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಹಿಮ ಉಂಟಾಗಲಿದೆ.
ಉತ್ತರಾಖಂಡಕ್ಕೆ ಸಂಬಂಧಿಸಿದಂತೆ ಗುರುವಾರ ಡೆಹ್ರಾಡೂನ್, ನೈನಿತಾಲ್, ಚಂಪಾವತ್, ಉಧಮ್ ಸಿಂಗ್ ನಗರ, ತೆಹ್ರಿ ಗರ್ವಾಲ್, ಪೌರಿ ಗರ್ವಾಲ್, ರುದ್ರಪ್ರಯಾಗ, ಚಮೋಲಿ, ಅಲ್ಮೋರಾ, ಬಾಗೇಶ್ವರ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಫೆಬ್ರವರಿ 5ರಿಂದ ವಾಯು ಗುಣಮಟ್ಟವು ಕ್ರಮೇಣ ಕ್ಷೀಣಿಸುತ್ತದೆ.
ಇಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು ಫೆ. 5ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ ಮತ್ತು ಒಡಿಶಾದಲ್ಲಿ ಶೀತ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಶೀತ ಅಲೆ ಉಂಟಾಗಲಿದೆ.
ಇದನ್ನೂ ಓದಿ: Karnataka Weather Today: ಉತ್ತರ ಭಾರತದಲ್ಲಿ ಫೆ. 3ರಿಂದ ಮಳೆ ಹೆಚ್ಚಳ; ಹಿಮಾಚಲ ಪ್ರದೇಶದಲ್ಲಿ ಹಿಮಪಾತ
Karnataka Weather Today: ಬೆಂಗಳೂರು, ಕೋಲಾರ ಸುತ್ತಮುತ್ತ ಇನ್ನೆರಡು ದಿನ ಮಳೆ; ನೆರೆಯ ರಾಜ್ಯಗಳಲ್ಲೂ ವರುಣನ ಅಬ್ಬರ