ಬೆಂಗಳೂರು: ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮಳೆ ಕೊಂಚ ಕಡಿಮೆಯಾಗಿದೆ. ಆದರೆ, ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ವರುಣನ ಆರ್ಭಟ (Heavy Rain) ಮುಂದುವರೆದಿದೆ. ಇಂದು ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಹಿಮಪಾತವನ್ನು (Snowfall) ನಿರೀಕ್ಷಿಸಲಾಗಿದೆ. ಇಂದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ, ಹಿಮಪಾತ ಉಂಟಾಗಲಿದೆ. ಇಂದು ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಗುಡುಗು ಸಹಿತ ಲಘು, ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ. ದೆಹಲಿಯಲ್ಲಿ ಫೆಬ್ರವರಿಯಲ್ಲಿ ಅತ್ಯಂತ ಚಳಿ ಇರಲಿದೆ. ಹಿಮಾಚಲ ಪ್ರದೇಶದಲ್ಲಿ ಹಿಮಪಾತವಿರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.
ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಇಂದು ಶೀತ ಗಾಳಿ ಸಹಿತ ಮಳೆಯಾಗಲಿದೆ. ಇಂದು ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸಾಧಾರಣ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಹಾಗೇ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಹಿಮ ಬೀಳುವ ನಿರೀಕ್ಷೆಯಿದೆ. ಇಂದು ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ತ್ರಿಪುರ, ಮಣಿಪುರ ಮತ್ತು ಮಿಜೋರಾಂನಲ್ಲೂ ಮಳೆಯಾಗಲಿದೆ.
ಇಂದು ಉತ್ತರಾಖಂಡದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದ್ದು, ಕಂಗ್ರಾ, ಚಂಬಾ, ಕುಲು, ಕಿನ್ನೌರ್ ಮತ್ತು ಲಾಹುಲ್ ಮತ್ತು ಸ್ಪಿತಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಹಿಮ ಉಂಟಾಗಲಿದೆ. ಉತ್ತರಾಖಂಡಕ್ಕೆ ಸಂಬಂಧಿಸಿದಂತೆ ಡೆಹ್ರಾಡೂನ್, ನೈನಿತಾಲ್, ಚಂಪಾವತ್, ಉಧಮ್ ಸಿಂಗ್ ನಗರ, ತೆಹ್ರಿ ಗರ್ವಾಲ್, ಪೌರಿ ಗರ್ವಾಲ್, ರುದ್ರಪ್ರಯಾಗ, ಚಮೋಲಿ, ಅಲ್ಮೋರಾ, ಬಾಗೇಶ್ವರ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
Dense Fog conditions in isolated pockets in night/morning hours very likely over Punjab and
Haryana, Chandigarh & Delhi on during next 2 days.— India Meteorological Department (@Indiametdept) February 3, 2022
ಇಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ ಮತ್ತು ಒಡಿಶಾದಲ್ಲಿ ಶೀತ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವಾರು ರಾಜ್ಯಗಳಲ್ಲಿ ನಿನ್ನೆಯಿಂದ ಶೀತ ಅಲೆ ಉಂಟಾಗಲಿದೆ.
Widespread light/moderate rainfall with thunderstorm/lightning likely over northeast India on 04th & 05th February, 2022. Isolated heavy rainfall/snowfall likely over Arunachal Pradesh on 04th & 05th and heavy rainfall over west Assam & Meghalaya on 04th February, 2022.
— India Meteorological Department (@Indiametdept) February 3, 2022
ಇಂದು ಈಶಾನ್ಯ ಭಾರತದಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮ ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆ ಅಥವಾ ಹಿಮವನ್ನು ನಿರೀಕ್ಷಿಸಲಾಗಿದೆ. ಇಂದಿನಿಂದ ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಕಡಿಮೆ ತಾಪಮಾನ ದಾಖಲಾಗಲಿದೆ.
ಇದನ್ನೂ ಓದಿ: Weather Today: ತಮಿಳುನಾಡು, ಮಹಾರಾಷ್ಟ್ರ, ಅಸ್ಸಾಂ ಸೇರಿ ಹಲವೆಡೆ ಫೆ. 5ರವರೆಗೆ ಮಳೆ
Karnataka Weather Today: ಉತ್ತರ ಭಾರತದಲ್ಲಿ ಫೆ. 3ರಿಂದ ಮಳೆ ಹೆಚ್ಚಳ; ಹಿಮಾಚಲ ಪ್ರದೇಶದಲ್ಲಿ ಹಿಮಪಾತ