Weather Today: ಚಳಿಯ ನಡುವೆ ದೆಹಲಿ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಮಳೆಯ ಅಲರ್ಟ್

Rain Updates: ಜನವರಿ 22ರಿಂದ ಜನವರಿ 25ರ ಅವಧಿಯಲ್ಲಿ ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಜನವರಿ 23 ಮತ್ತು 24ರಂದು ವಾಯುವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

Weather Today: ಚಳಿಯ ನಡುವೆ ದೆಹಲಿ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಮಳೆಯ ಅಲರ್ಟ್
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 18, 2023 | 9:16 AM

ನವದೆಹಲಿ: ದೆಹಲಿ, ನೊಯ್ಡಾ, ಘಾಜಿಯಾಬಾದ್, ಗುರುಗ್ರಾಮ, ಹರಿಯಾಣ, ಪಂಜಾಬ್, ಚಂಡೀಗಢ, ಉತ್ತರ ಪ್ರದೇಶ ಮತ್ತು ಉತ್ತರ ಭಾರತದ ಇತರ ಭಾಗಗಳಲ್ಲಿ ಈಗಾಗಲೇ ಶೀತ ಗಾಳಿ (Cold Wave) ಮತ್ತು ದಟ್ಟವಾದ ಮಂಜಿನಿಂದ ಜನ ಕಂಗೆಟ್ಟಿದ್ದಾರೆ. ಇದರ ನಡುವೆ ಜನವರಿ 21ರಿಂದ 25ರವರೆಗೆ ಈ ರಾಜ್ಯಗಳಲ್ಲಿ ಮಳೆಯಾಗುವ (Rainfall) ಸಾಧ್ಯತೆಗಳು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಜನವರಿ 22ರಿಂದ ಜನವರಿ 25ರ ಅವಧಿಯಲ್ಲಿ ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಜನವರಿ 23 ಮತ್ತು 24ರಂದು ವಾಯುವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು IMD ಹೇಳಿದೆ.

ಜಮ್ಮು, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದಲ್ಲಿ ಜನವರಿ 23 ಮತ್ತು 24ರಂದು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಲಾಗಿದೆ. ಜನವರಿ 23 ಮತ್ತು 24ರಂದು, ಪಂಜಾಬ್, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೇಲೆ 50 ಕಿಮೀ ವೇಗದ ವೇಗದೊಂದಿಗೆ ಬಲವಾದ ಗಾಳಿಯೊಂದಿಗೆ ಮಳೆಯಾಗುವುದಾಗಿ ಸೂಚಿಸಲಾಗಿದೆ.

ಇದನ್ನೂ ಓದಿ: Karnataka Rain: ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಇಂದು ಹಗುರ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ: ಜನವರಿ 21 ಮತ್ತು ಜನವರಿ 22ರಂದು ಹಲವು ಸ್ಥಳಗಳಲ್ಲಿ ಕಡಿಮೆ ಮಳೆ ಅಥವಾ ಹಿಮ ಬೀಳುವ ಸಾಧ್ಯತೆ ಇದೆ. ಜನವರಿ 23 ಮತ್ತು 24ರಂದು ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಹಿಮಪಾತವಾಗಲಿದೆ. ಜನವರಿ 25ರಂದು ಹಿಮ ಬೀಳುವ ನಿರೀಕ್ಷೆಯಿದೆ.

ಹಿಮಾಚಲ ಪ್ರದೇಶ: ಜನವರಿ 22ರಂದು ಕೆಲವು ಸ್ಥಳಗಳಲ್ಲಿ ತುಂತುರು ಮಳೆ ಅಥವಾ ಹಿಮವನ್ನು ನಿರೀಕ್ಷಿಸಲಾಗಿದೆ. ಜನವರಿ 23 ಮತ್ತು 24ರಂದು ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಹಿಮಪಾತವಾಗಲಿದೆ. ಜನವರಿ 25ರಂದು ಕೆಲವು ಸ್ಥಳಗಳಲ್ಲಿ ಅತಿ ಕಡಿಮೆ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ.

ಉತ್ತರಾಖಂಡ: ಜನವರಿ 23ರಂದು ಅನೇಕ ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ಜನವರಿ 24ರಂದು ಸಾಧಾರಣ ಮಳೆ/ ಹಿಮಪಾತ, ಜನವರಿ 25ರಂದು ಕೆಲವು ಸ್ಥಳಗಳಲ್ಲಿ ಲಘು ಮಳೆ/ ಹಿಮಪಾತವಾಗಲಿದೆ.

ಇದನ್ನೂ ಓದಿ: Bengaluru Weather: ಬೆಂಗಳೂರಿನಲ್ಲಿ ಈ ವಾರವಿಡೀ ಚಳಿ, ಮಂಜಿನ ವಾತಾವರಣ; ಮಲೆನಾಡಿನಲ್ಲಿ ಶೀತ ಗಾಳಿ

ಪಂಜಾಬ್: ಜನವರಿ 22ರಂದು ಕೆಲವು ಸ್ಥಳಗಳಲ್ಲಿ ಅತಿ ಕಡಿಮೆ ಮಳೆಯಾಗಬಹುದು. ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಬಹುದು. ಜನವರಿ 25ರಂದು ಕೆಲವು ಸ್ಥಳಗಳಲ್ಲಿ ಅತಿ ಕಡಿಮೆ ಮಳೆಯಾಗುತ್ತದೆ.

ಹರಿಯಾಣ, ಚಂಡೀಗಢ ಮತ್ತು ದೆಹಲಿ: ಜನವರಿ 22ರಂದು ಅನೇಕ ಸ್ಥಳಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಜನವರಿ 24ರಂದು ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜನವರಿ 25ರಂದು ಕೆಲವು ಸ್ಥಳಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಪ್ರದೇಶ: ಜನವರಿ 23 ಮತ್ತು 24ರಂದು ಕೆಲವು ಸ್ಥಳಗಳಲ್ಲಿ ಲಘು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ