Weather Today: ತಮಿಳುನಾಡು, ಮಹಾರಾಷ್ಟ್ರ, ಅಸ್ಸಾಂ ಸೇರಿ ಹಲವೆಡೆ ಫೆ. 5ರವರೆಗೆ ಮಳೆ

Weather Forecast: ಇಂದು ಮತ್ತು ಫೆ. 4ರಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು ಫೆ. 4 ಮತ್ತು 5ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ.

Weather Today: ತಮಿಳುನಾಡು, ಮಹಾರಾಷ್ಟ್ರ, ಅಸ್ಸಾಂ ಸೇರಿ ಹಲವೆಡೆ ಫೆ. 5ರವರೆಗೆ ಮಳೆ
ಮಳೆಯಿಂದ ಹಾಳಾದ ರಸ್ತೆಗಳು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 03, 2022 | 6:01 AM

ಬೆಂಗಳೂರು: ಕರ್ನಾಟಕದಲ್ಲಿ ವರುಣನ ಆರ್ಭಟ ಕಡಿಮೆಯಾಗಿದ್ದು, ನೆರೆಯ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಫೆಬ್ರವರಿ 5ರವರೆಗೆ ಶೀತ ಗಾಳಿ ಬೀಸಲಿದ್ದು, ಮಳೆಯಾಗಲಿದೆ. ಇಂದಿನಿಂದ ಫೆಬ್ರವರಿ 4ರವರೆಗೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸಾಧಾರಣ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ಹಿಮ ಬೀಳುವ ನಿರೀಕ್ಷೆಯಿದೆ. ಇಂದಿನಿಂದ ಫೆಬ್ರವರಿ 4ರವರೆಗೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ತ್ರಿಪುರಾ, ಮಣಿಪುರ ಮತ್ತು ಮಿಜೋರಾಂನಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡದ ಕೆಲವು ಭಾಗಗಳಲ್ಲಿ ಫೆಬ್ರವರಿ 4ರವರೆಗೆ ಭಾರೀ ಮಳೆ ಮತ್ತು ಹಿಮಪಾತ ಉಂಟಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದು ಮತ್ತು ನಾಳೆ ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆ ಮತ್ತು ಹಿಮಪಾತ ಉಂಟಾಗುವ ನಿರೀಕ್ಷೆಯಿದೆ. ಎರಡೂ ರಾಜ್ಯಗಳಾದ್ಯಂತ ಮಳೆ ತೀವ್ರಗೊಳ್ಳಬಹುದು. ಇಂದು ಭಾರೀ ಮಳೆ ಮತ್ತು ಹಿಮಪಾತ ಉಂಟಾಗಲಿದೆ.

ಇಂದು ಹಿಮಾಚಲ ಪ್ರದೇಶದಲ್ಲಿ ಮತ್ತು ಶುಕ್ರವಾರ ಉತ್ತರಾಖಂಡದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದ್ದು, ಕಂಗ್ರಾ, ಚಂಬಾ, ಕುಲು, ಕಿನ್ನೌರ್ ಮತ್ತು ಲಾಹುಲ್ ಮತ್ತು ಸ್ಪಿತಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಹಿಮ ಉಂಟಾಗಲಿದೆ.

ಉತ್ತರಾಖಂಡಕ್ಕೆ ಸಂಬಂಧಿಸಿದಂತೆ ಗುರುವಾರ ಡೆಹ್ರಾಡೂನ್, ನೈನಿತಾಲ್, ಚಂಪಾವತ್, ಉಧಮ್ ಸಿಂಗ್ ನಗರ, ತೆಹ್ರಿ ಗರ್ವಾಲ್, ಪೌರಿ ಗರ್ವಾಲ್, ರುದ್ರಪ್ರಯಾಗ, ಚಮೋಲಿ, ಅಲ್ಮೋರಾ, ಬಾಗೇಶ್ವರ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಮತ್ತು ಫೆಬ್ರವರಿ 4ರಂದು ಮಳೆಯ ಮುನ್ಸೂಚನೆ ನೀಡಲಾಗಿದೆ. ಫೆಬ್ರವರಿ 5ರಿಂದ ವಾಯು ಗುಣಮಟ್ಟವು ಕ್ರಮೇಣ ಕ್ಷೀಣಿಸುತ್ತದೆ.

ಇಂದು ಮತ್ತು ಫೆ. 4ರಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು ಫೆ. 4 ಮತ್ತು 5ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್‌, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ ಮತ್ತು ಒಡಿಶಾದಲ್ಲಿ ಶೀತ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಶೀತ ಅಲೆ ಉಂಟಾಗಲಿದೆ.

ಇಂದು ಮತ್ತು ನಾಳೆ (ಫೆಬ್ರವರಿ 4) ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ಮಳೆ ಮತ್ತು ಹಿಮಪಾತ ಉಂಟಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವಿಶೇಷವಾಗಿ ಇಂದು ಭಾರೀ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಉತ್ತರ ಪ್ರದೇಶಗಳಲ್ಲಿ ಫೆಬ್ರವರಿ 4ರವರೆಗೆ ವ್ಯಾಪಕವಾದ ಮಳೆಯಾಗಲಿದೆ. ಫೆಬ್ರವರಿ 6ರಿಂದ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗಲಿದೆ ಮತ್ತು ಇಂದಿನಿಂದ ಫೆಬ್ರವರಿ 5ರವರೆಗೆ ಮಳೆ ಮತ್ತು ಮೋಡ ಕವಿದ ವಾತಾವರಣವಿರಲಿದೆ.

ಇದನ್ನೂ ಓದಿ: Rain Updates: ದೆಹಲಿ, ಪಂಜಾಬ್, ಹರಿಯಾಣದಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಭಾರೀ ಮಳೆ ಸಾಧ್ಯತೆ

Karnataka Weather Today: ಉತ್ತರ ಭಾರತದಲ್ಲಿ ಫೆ. 3ರಿಂದ ಮಳೆ ಹೆಚ್ಚಳ; ಹಿಮಾಚಲ ಪ್ರದೇಶದಲ್ಲಿ ಹಿಮಪಾತ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ