Weather Today: ಅಸ್ಸಾಂ, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ; ಜಮ್ಮು ಕಾಶ್ಮೀರದಲ್ಲಿಂದು ಹಿಮಪಾತ

Weather Forecast: ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸುತ್ತದೆ. ಜನವರಿ 22ರಂದು ಹಿಮಾಚಲ ಪ್ರದೇಶದ ಮೇಲೆ ಭಾರೀ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ.

Weather Today: ಅಸ್ಸಾಂ, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ; ಜಮ್ಮು ಕಾಶ್ಮೀರದಲ್ಲಿಂದು ಹಿಮಪಾತ
ಮಳೆ
Follow us
| Updated By: ಸುಷ್ಮಾ ಚಕ್ರೆ

Updated on: Jan 20, 2022 | 6:08 AM

ಬೆಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದೆ. ಕಳೆದ ವಾರ ರಾಜ್ಯದ ಮೈಸೂರು, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಿತ್ತು. ಆದರೆ, ಇಂದು (ಗುರುವಾರ) ಅಸ್ಸಾಂ, ಹಿಮಾಚಲ ಪ್ರದೇಶ, ಉತ್ತರಾಖಂಡ, ಮೇಘಾಲಯ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಪಂಜಾಬ್, ಕೇರಳ, ತಮಿಳುನಾಡು, ತೆಲಂಗಾಣ, ರಾಜಸ್ಥಾನ, ಒಡಿಶಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನೆರಡು ದಿನ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆಯಲಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಶುಕ್ರವಾರದವರೆಗೆ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಶುಕ್ರವಾರ ಮತ್ತು ಶನಿವಾರದಂದು ಈ ಪ್ರದೇಶದಲ್ಲಿ ಮಿಂಚು ಮತ್ತು ಆಲಿಕಲ್ಲು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಸಿಕ್ಕಿಂ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಹಿಮ ಅಥವಾ ಮಳೆಯಾಗುವ ಸಾಧ್ಯತೆಯಿದೆ.

ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಿಜೋರಾಂನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ದೇಶದ ಉಳಿದ ಭಾಗಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಮುನ್ಸೂಚನೆ ನೀಡಲಾಗಿದೆ. ಪಂಜಾಬ್, ಹರಿಯಾಣ, ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾದಲ್ಲಿ ದಟ್ಟವಾದ ಮಂಜಿನಿಂದ ಕೂಡಿದ ವಾತಾವರಣವಿರಲಿದೆ. ಇಂದು ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ವ್ಯಾಪಕವಾದ ಹಿಮ ಅಥವಾ ಮಳೆ ಉಂಟಾಗಲಿದೆ. ಇಂದು ಮತ್ತು ನಾಳೆ ಜಮ್ಮು ಕಾಶ್ಮೀರದ ಪರ್ವತ ಪ್ರದೇಶಗಳಲ್ಲಿ ಮಳೆಯಾಗಲಿದೆ.

ಜಮ್ಮು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಹಿಮಪಾತವಾಗಲಿದೆ. ಮುಂದಿನ 3 ದಿನಗಳವರೆಗೆ ಯಾವುದೇ ಗಮನಾರ್ಹ ಮಳೆಯ ಚಟುವಟಿಕೆಯು ಸಾಧ್ಯವಿಲ್ಲ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 2 ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಶೀತ ಗಾಳಿ ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಧ್ಯಪ್ರದೇಶದಲ್ಲಿ ಶೀತ ವಾತಾವರಣವಿರಲಿದೆ. ಪಂಜಾಬ್​ನಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಇನ್ನೆರಡು ದಿನ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಕೂಡ ಮಳೆಯಾಗಲಿದೆ. ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸುತ್ತದೆ. ಜನವರಿ 22ರಂದು ಹಿಮಾಚಲ ಪ್ರದೇಶದ ಮೇಲೆ ಭಾರೀ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ. ಅಲ್ಲದೆ, ಜನವರಿ 21ರಿಂದ 23ರ ಅವಧಿಯಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಉತ್ತರ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಮಳೆಯಾಗಲಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇಂದಿನಿಂದ ಜ. 22ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 2 ದಿನಗಳಲ್ಲಿ ರಾಜಸ್ಥಾನ, ಉತ್ತರ ಪ್ರದೇಶ, ಉತ್ತರ ಮಧ್ಯಪ್ರದೇಶ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 2 ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಚಳಿ ವಾತಾವರಣ ಇರಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನದಲ್ಲಿ ಶೀತ ವಾತಾವರಣ ಇರಲಿದೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲೂ ಮಳೆ ಹೆಚ್ಚಾಗಲಿದೆ. ಈ ಮಳೆಯು ಜನವರಿ 21ರಂದು ಪ್ರಾರಂಭವಾಗುತ್ತದೆ. ಜನವರಿ 22ರಿಂದ ಮಳೆ ಹೆಚ್ಚಾಗಲಿದೆ.

ಇದನ್ನೂ ಓದಿ: Weather Today: ಜ. 23ರವರೆಗೂ ಪಂಜಾಬ್, ಆಂಧ್ರಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಮಳೆ ಹೆಚ್ಚಳ

Karnataka Weather Today: ಕರ್ನಾಟಕದಲ್ಲಿ ಇಂದು, ನಾಳೆ ಅಲ್ಲಲ್ಲಿ ಮಳೆ: ಬಿಹಾರ, ಸಿಕ್ಕಿಂನಲ್ಲಿ ದಟ್ಟ ಮಂಜು