AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಆಂಧ್ರ ಪ್ರದೇಶ, ಗೋವಾದಲ್ಲಿ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ

Rain Updates: ಭಾರತ ಹವಾಮಾನ ಇಲಾಖೆ (IMD) ಪೂರ್ವ ಮತ್ತು ಮಧ್ಯ ಭಾರತದಲ್ಲಿ ಮೇ 14ರವರೆಗೆ ಮತ್ತು ದಕ್ಷಿಣ ಭಾರತದಲ್ಲಿ ಮೇ 16ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Weather Today: ಆಂಧ್ರ ಪ್ರದೇಶ, ಗೋವಾದಲ್ಲಿ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ
ಮಳೆ
ಸುಷ್ಮಾ ಚಕ್ರೆ
|

Updated on:May 12, 2024 | 9:50 PM

Share

ನವದೆಹಲಿ: ಇನ್ನೂ 1 ವಾರ ಪಶ್ಚಿಮ ಉತ್ತರ ಪ್ರದೇಶ ಮತ್ತು ದಕ್ಷಿಣ ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 3 ಗಂಟೆಗಳಲ್ಲಿ ಉತ್ತರಾಖಂಡ, ತಮಿಳುನಾಡು ಮತ್ತು ರಾಜಸ್ಥಾನದಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ (Rain Updates) ಸಾಧ್ಯತೆಯಿದೆ ಎಂದು IMD ಟ್ವಿಟ್ಟರ್​​ನಲ್ಲಿ ಪೋಸ್ಟ್ ಮಾಡಿದೆ. ಗೋವಾದಲ್ಲಿ ಸಿಡಿಲು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆದರೆ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗೋವಾ ಹಾಗೂ ಆಂಧ್ರ ಪ್ರದೇಶದಲ್ಲಿ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮೇ 13 ಮತ್ತು 14ರಂದು ಭಾರೀ ಮಳೆಯಾಗಲಿದೆ. ಹರಿಯಾಣ-ಚಂಡೀಗಢ-ದೆಹಲಿ, ಪಂಜಾಬ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಇನ್ನೆರಡು ದಿನ ಮಳೆ, ಗುಡುಗು ಸಹಿತ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನ ವಿಜಯನಗರ ಸೇರಿದಂತೆ ಹಲವೆಡೆ ತುಂತುರು ಮಳೆ ಆರಂಭ

ಮುಂದಿನ 4 ದಿನಗಳ ಕಾಲ ರಾಜಸ್ಥಾನದಲ್ಲಿ ಮಳೆಯ ಹವಾಮಾನ ಉಂಟಾಗುವ ನಿರೀಕ್ಷೆಯಿದೆ. ಆಂಧ್ರಪ್ರದೇಶದ ಕರಾವಳಿ, ಯಾನಂ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ ಮತ್ತು ಕರ್ನಾಟಕದಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಕರ್ನಾಟಕದ ಕೆಲವು ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಮೇ 15ರವರೆಗೆ ಸಾಕಷ್ಟು ವ್ಯಾಪಕವಾದ ಮಳೆ, ಗುಡುಗು, ಮಿಂಚು ಉಂಟಾಗಲಿದೆ, ಮೇ 16ರಿಂದ 18ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ 3ನೇ ಬಲಿ: ಮಹಿಳೆ ಮೇಲೆ ಮರ ಬಿದ್ದು ಸಾವು

ಮೇ 13ರಂದು ಚುನಾವಣಾ ದಿನದಂದು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕರಾವಳಿ ಆಂಧ್ರ ಪ್ರದೇಶ (ಎನ್‌ಸಿಎಪಿ), ಯಾನಂ, ದಕ್ಷಿಣ ಕರಾವಳಿ ಆಂಧ್ರ ಪ್ರದೇಶ (ಎಸ್‌ಸಿಎಪಿ) ಮತ್ತು ರಾಯಲಸೀಮಾದ ಕೆಲವು ಭಾಗಗಳಲ್ಲಿ ಗಂಟೆಗೆ 50 ಕಿಮೀ (ಕಿಮೀ) ವೇಗದಲ್ಲಿ ಗುಡುಗು ಸಹಿತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 14 ರಿಂದ ಇನ್ನೂ 3 ದಿನಗಳ ಕಾಲ ಇದೇ ರೀತಿಯ ಹವಾಮಾನ ಮುಂದುವರೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 pm, Sun, 12 May 24

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ