India Weather Updates: ಮಾರ್ಚ್ ಮೊದಲ ವಾರದಲ್ಲಿ ಈ ರಾಜ್ಯಗಳಲ್ಲಿ 37 ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಲಿದೆ ಗರಿಷ್ಠ ತಾಪಮಾನ
ಕಣ್ಣುಮುಚ್ಚಿ ಬಿಡುವುದರೊಳಗೆ ಫೆಬ್ರವರಿ ಮುಗಿದೇಬಿಟ್ಟಿದೆ. ಫೆಬ್ರವರಿ ತಿಂಗಳಿನಲ್ಲಿಯೇ ದೇಶದಾದ್ಯಂತ ಹವಾಮಾನವು ವೇಗವಾಗಿ ಬದಲಾಗಿದೆ. ಅನೇಕ ರಾಜ್ಯಗಳಲ್ಲಿ, ಶೀತದ ಬದಲಿಗೆ ಜನರು ಸೆಕೆಯನ್ನು ಅನುಭವಿಸುತ್ತಿದ್ದಾರೆ.
ಕಣ್ಣುಮುಚ್ಚಿ ಬಿಡುವುದರೊಳಗೆ ಫೆಬ್ರವರಿ ಮುಗಿದೇಬಿಟ್ಟಿದೆ. ಫೆಬ್ರವರಿ ತಿಂಗಳಿನಲ್ಲಿಯೇ ದೇಶದಾದ್ಯಂತ ಹವಾಮಾನವು ವೇಗವಾಗಿ ಬದಲಾಗಿದೆ. ಅನೇಕ ರಾಜ್ಯಗಳಲ್ಲಿ, ಶೀತದ ಬದಲಿಗೆ ಜನರು ಸೆಕೆಯನ್ನು ಅನುಭವಿಸುತ್ತಿದ್ದಾರೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಈ ಬಾರಿ ಬಿಸಿಗಾಳಿ ಸಮಯಕ್ಕಿಂತ ಮುಂಚಿತವಾಗಿಯೇ ಪ್ರಾರಂಭವಾಗಬಹುದು. ಇದರ ಪರಿಣಾಮ ಬೆಳಗಳ ಮೇಲೂ ಕೂಡ ಆಗಲಿದೆ. ತಾಪಮಾನ 35 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾದರೆ ಗೋಧಿ ಬೆಳೆಯ ಮೇಲೆ ಭಾರಿ ಪರಿಣಾಮ ಉಂಟಾಗಲಿದೆ.
ದೆಹಲಿಯಲ್ಲಿ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇದೆ. ಲಕ್ನೋದಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು. ಚಂಡೀಗಢದಲ್ಲಿ 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 30 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಬಹುದು.
ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 35 ರಿಂದ 37 ಡಿಗ್ರಿ ಸೆಲ್ಸಿಯಸ್ನಷ್ಟಾಗಬಹುದು. ವಾಯುವ್ಯ ಹಾಗೂ ಮಧ್ಯ ಭಾರತದ ರಾಜ್ಯಗಳಲ್ಲಿ ತಾಮನಾವು 3 ರಿಂದ 4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಲಿದೆ. ಗಿಲ್ಗಿಟ್, ಬಾಲ್ಟಿಸ್ತಾನ, ಮುಜಫರಾಬಾದ್, ಲಡಾಖ್, ಕಾಶ್ಮೀರ, ಹಿಮಾಚಲಪ್ರದೇಶ, ಸಿಕ್ಕಿಂ, ಅರುಣಾಚಲಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ. ಅಸ್ಸಾಂ, ಜಮ್ಮು, ಸಿಕ್ಕಿಂ ಹಾಗೂ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಓದಿ: India Weather Updates: ಫೆ.21 ರಿಂದ 23ರವರೆಗೆ ಈಶಾನ್ಯ ರಾಜ್ಯಗಳಲ್ಲಿ ಮಳೆ, ಕರ್ನಾಟಕದಲ್ಲಿ ಒಣಹವೆ ಮುಂದುವರಿಕೆ
ಪಂಜಾಬ್, ಹರ್ಯಾಣ, ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಫೆ. 28 ರಿಂದ ಮಾರ್ಚ್ 2ರನಡುವೆ ಹಿಮಾಲಯದಲ್ಲಿ ಹಿಮದ ತೀವ್ರತೆ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಚಾಮರಾಜನಗರದಲ್ಲಿ 11.5 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ