Crime News: ಪಶ್ಚಿಮ ಬಂಗಾಳದಲ್ಲಿ 22 ವರ್ಷದ ಮಹಿಳೆಯ ಗಂಟಲು ಸೀಳಿ ಕೊಲೆ

|

Updated on: Aug 15, 2024 | 5:46 PM

Shocking News: ಆಗಸ್ಟ್ 12ರಂದು ಪಶ್ಚಿಮ ಬಂಗಾಳದ ಕೊಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಕಿರಿಯ ವೈದ್ಯನ ಬರ್ಬರ ಹತ್ಯೆಯ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವಾಗಲೇ ಈ ಪ್ರಕರಣವು ಬೆಳಕಿಗೆ ಬಂದಿದೆ. ಈ ನಿಗೂಢ ಸಾವಿಗೆ ಸಂಬಂಧಿಸಿದಂತೆ ಕೊಲ್ಕತ್ತಾ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

Crime News: ಪಶ್ಚಿಮ ಬಂಗಾಳದಲ್ಲಿ 22 ವರ್ಷದ ಮಹಿಳೆಯ ಗಂಟಲು ಸೀಳಿ ಕೊಲೆ
ಸಾಂದರ್ಭಿಕ ಚಿತ್ರ
Follow us on

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ ಜಿಲ್ಲೆಯ ಶಕ್ತಿಗಢದಲ್ಲಿ ಇಂದು (ಗುರುವಾರ) ಕತ್ತು ಸೀಳಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಇದರಿಂದ ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ಹತ್ಯೆಗೀಡಾದವರನ್ನು 22 ವರ್ಷದ ಪ್ರಿಯಾಂಕಾ ಹನ್ಸ್ದಾ ಎಂದು ಗುರುತಿಸಲಾಗಿದೆ. ಕೊಲ್ಕತ್ತದಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮೃತ ಮಹಿಳೆ ಬೆಂಗಳೂರಿನ ಶಾಪಿಂಗ್ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಆಗಸ್ಟ್ 12ರಂದು ರಜೆಯ ಮೇಲೆ ಮನೆಗೆ ಬಂದಿದ್ದರು ಎಂದು ಸಂತ್ರಸ್ತೆಯ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Crime News: 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದರೂ ತೃಪ್ತನಾಗದ ವ್ಯಕ್ತಿಯಿಂದ ಮೇಕೆಯ ಮೇಲೆ ಅತ್ಯಾಚಾರ

ಆ ಯುವತಿ ಬುಧವಾರ ಸಂಜೆ ಮೊಬೈಲ್‌ನಲ್ಲಿ ಮಾತನಾಡುತ್ತಾ ಮನೆಯಿಂದ ಹೊರಟು ಹೋಗಿದ್ದಳು. ಯಾರೊಂದಿಗೋ ಫೋನ್ ಮಾಡಿ ಮಾತನಾಡುತ್ತಾ ಹೋಗಿದ್ದ ಆಕೆ ಅಂದಿನಿಂದ ಕಾಣೆಯಾಗಿದ್ದಳು. ಕೊನೆಗೆ ಆಕೆಯ ಕುತ್ತಿಗೆಯನ್ನು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆಕೆಯ ದೇಹ ಆಕೆಯ ನಿವಾಸದಿಂದ ಒಂದು ಕಿಲೋಮೀಟರ್ ಒಳಗೆ ಏಕಾಂತ ಸ್ಥಳದಲ್ಲಿ ಪತ್ತೆಯಾಗಿದೆ.

ಆಕೆ ತನ್ನ ನಿವಾಸವನ್ನು ಬಿಟ್ಟು ಹೋಗುವಾಗ ಕೊನೆಯದಾಗಿ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆಹಚ್ಚಲು ಸಂಪೂರ್ಣ ತನಿಖೆ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮೂಲಗಳು ತಿಳಿಸಿವೆ. ಇದೊಂದು ಕೊಲೆ ಪ್ರಕರಣ ಎಂದು ಸಂತ್ರಸ್ತೆಯ ಕುಟುಂಬಸ್ಥರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಯಾರೋ ಕರೆ ಮಾಡಿದ ನಂತರ ಆಕೆ ಮನೆಯಿಂದ ಹೊರಗೆ ಹೋಗಿದ್ದಳು ಮತ್ತು ಆಕೆಯ ದೇಹವು ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಬಹಳ ಸಮಯವಾದರೂ ಆಕೆ ಮನೆಗೆ ಬಾರದೆ ಇದ್ದ ನಂತರ ಆಕೆಯನ್ನು ಮೊಬೈಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರು ಎಂದು ಅವರು ಹೇಳಿದ್ದಾರೆ. ಆದರೆ ಅವಳು ಅವರ ಕರೆಗಳನ್ನು ಸ್ವೀಕರಿಸಲಿಲ್ಲ.

ಇದನ್ನೂ ಓದಿ: ಕೊಲ್ಕತ್ತಾ ವೈದ್ಯೆ ಕೊಲೆಗೂ ಮುನ್ನ ಸಾಮೂಹಿಕ ಅತ್ಯಾಚಾರ?; ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಅಂಶ ಬಯಲು

ಪ್ರಕರಣದ ದಾಖಲಾದ ಹೇಳಿಕೆಗಳಿಂದ ಸಂತ್ರಸ್ತೆ ತನಗೆ ಚೆನ್ನಾಗಿ ತಿಳಿದಿರುವ ವ್ಯಕ್ತಿಯಿಂದ ಕರೆ ಸ್ವೀಕರಿಸಿದ ನಂತರ ತನ್ನ ನಿವಾಸದಿಂದ ಹೊರಗೆ ಹೋಗಿದ್ದಾಳೆ ಎಂದು ತೋರುತ್ತದೆ ಎಂದು ಜಿಲ್ಲಾ ಪೊಲೀಸ್ ಮೂಲಗಳು ತಿಳಿಸಿವೆ. ಆಗಸ್ಟ್ 12ರಂದು ಕೊಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಕಿರಿಯ ವೈದ್ಯನ ಬರ್ಬರ ಹತ್ಯೆಯ ಬಗ್ಗೆ ರಾಜ್ಯವು ಪ್ರತಿಭಟನೆಗಳಿಗೆ ಸಾಕ್ಷಿಯಾಗುತ್ತಿರುವಾಗಲೇ ಈ ಪ್ರಕರಣವು ಬೆಳಕಿಗೆ ಬಂದಿದೆ. ಕೊಲ್ಕತ್ತಾದ ಪೊಲೀಸರು ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕೊಲ್ಕತ್ತಾ ಹೈಕೋರ್ಟ್‌ನ ಆದೇಶದ ಮೇರೆಗೆ ಸಿಬಿಐ ಇದೀಗ ಪ್ರಕರಣದ ತನಿಖೆ ನಡೆಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ