ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ದತ್ತಪುಕೂರ್‌ನ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸಮೀಪದ ಹಲವು ಮನೆಗಳಿಗೂ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು
ಪಟಾಕಿ ಕಾರ್ಖಾನೆ ಸ್ಫೋಟ
Image Credit source: India.com

Updated on: Aug 27, 2023 | 2:13 PM

ಪಶ್ಚಿಮ ಬಂಗಾಳ(West Bengal)ದ ಉತ್ತರ 24 ಪರಗಣ ಜಿಲ್ಲೆಯ ದತ್ತಪುಕೂರ್‌ನ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸಮೀಪದ ಹಲವು ಮನೆಗಳಿಗೂ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

ಕೆಲ ತಿಂಗಳಿಂದ ಕಾರ್ಖಾನೆ ಅಕ್ರಮ ನಡೆಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ಸ್ಥಳಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆಡಳಿತವು ಇನ್ನೂ ಅಧಿಕೃತ ಸಾವಿನ ಸಂಖ್ಯೆಯನ್ನು ಬಿಡುಗಡೆ ಮಾಡಿಲ್ಲ.

ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ದತ್ತಪುಕೂರ್ ಪೊಲೀಸ್ ಮೂಲಗಳ ಪ್ರಕಾರ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಬರಾಸತ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳದಲ್ಲಿದ್ದ ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, ಸ್ಫೋಟವು ಎಷ್ಟು ಪ್ರಬಲವಾಗಿದೆ ಎಂದರೆ ಹತ್ತಿರದ ಕಟ್ಟಡಗಳು ಸಹ ಪರಿಣಾಮ ಬೀರಿವೆ.

Published On - 2:07 pm, Sun, 27 August 23